Ind vs Aus 3rd ODI: ಸತತ 3ನೇ ಪಂದ್ಯದಲ್ಲೂ ಮೊದಲ ಎಸೆತಕ್ಕೇ ಔಟಾದ ಸೂರ್ಯಕುಮಾರ್ ಯಾದವ್!

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಸಾಕಷ್ಟು ಏರುಪೇರುಗಳಿಗೆ ಸಾಕ್ಷಿಯಾಗಿದೆ. ಆದರೆ ಟೀಮ್ ಇಂಡಿಯಾದ ಪ್ರಮುಖ ಆಟಗಾರ ಸೂರ್ಯಕುಮಾರ್ ಯಾದವ್‌ಗೆ ಮಾತ್ರ ಆಸ್ಟ್ರೇಲಿಯಾ ವಿರುದ್ಧದ ಈ ಸರಣಿ ಅಕ್ಷರಶಃ ದುಸ್ವಪ್ನವಾಗಿದೆ. ಈ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಸತತ ಮೂರನೇ ಬಾರಿ ಕೂಡ ಮೊದಲ ಎಸೆತಕ್ಕೇ ವಿಕೆಟ್ ಕಳೆದುಕೊಳ್ಳುವ ಮೂಲಕ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿಯೂ ಸೂರ್ಯಕುಮಾರ್ ಯಾದವ್ ಮಿಚೆಲ್ ಸ್ಟಾರ್ಕ್ ಎಸೆತವನ್ನು ಎದುರಿಸಿ ಮೊದಲ ಎಸೆತದಲ್ಲಿಯೇ ಔಟಾಗಿದ್ದರು. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಪಂದ್ಯದಲ್ಲಿ ಸೂರ್ಯಕುಮಾರ್ ಮೇಲೆ ಸಾಕಷ್ಟು ಒತ್ತಡಗಳು ಇದ್ದವು.
ಈ ಹಿನ್ನೆಲೆಯಲ್ಲಿ ಸೂರ್ಯಕುಮಾರ್ ಯಾದವ್ ಸರಣಿಯ ಮೂರನೇ ಪಂದ್ಯದಲ್ಲಿ ತಮ್ಮ ಎಂದಿನ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿಯಲಿಲ್ಲ. ಸೂರ್ಯಕುಮಾರ್ ಈ ಪಂದ್ಯದಲ್ಲಿ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಇಳಿದರು. ಆದರೆ ದುರದೃಷ್ಟವಶಾತ್ ಈ ಪಂದ್ಯದಲ್ಲಿಯೂ ಸೂರ್ಯಕುಮಾರ್ ಯಾದವ್ ಮೊದಲ ಎಸೆತದಲ್ಲಿಯೇ ತಮ್ಮ ವಿಕೆಟ್ ಕಳೆದುಕೊಂಡಿದ್ದಾರೆ. ಈ ಬಾರಿ ಆಶ್ಟನ್ ಅಗರ್ ಬೌಲಿಂಗ್‌ನಲ್ಲಿ ಸೂರ್ಯಕುಮಾರ್ ಯಾದವ್ ಬೌಲ್ಡ್ ಆಗುವ ಮೂಲಕ ವಿಕೆಟ್ ಕಳೆದುಕೊಂಡಿದ್ದಾರೆ.
ಅರ್ಧ ಶತಕ ಸಿಡಿಸಿದ ವಿರಾಟ್ ಕೊಹ್ಲಿ: ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಅನುಬವಿ ಆಟಗಾರ ವಿರಾಟ್ ಕೊಹ್ಲಿ ಅರ್ಧ ಶತಕ ಸಿಡಿಸಿದ್ದಾರೆ. ಆಸ್ಟ್ರೇಲಿಯಾ ನೀಡಿದ 270 ರನ್‌ಗಳ ಗುರಿಯನ್ನು ಬೆನ್ನಟ್ಟಿರುವ ಟೀಮ್ ಇಂಡಿಯಾಗೆ ಉತ್ತಮ ಆರಂಭ ದೊರೆಯಿತು. ಆದರೆ ಆರಂಬಿಕ ಆಟಗಾರರಾದ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ ಕೆಲವೇ ರನ್‌ಗಳ ಅಂತರದಲ್ಲಿ ವಿಕೆಟ್ ಕಳೆದುಕೊಂಡ ಬಳಿಕ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಅವರಿಂದ ಮತ್ತೊಂದು ಉತ್ತಮ ಜೊತೆಯಾಟ ಬಂದಿದೆ. ಕೆಎಲ್ ರಾಹುಲ್ 32 ರನ್‌ಗಳಿಸಿ ಔಟಾದರೆ ವಿರಾಟ್ ಕೊಹ್ಲಿ 54 ರನ್‌ಗಳಿಸಿ ತಂಡಕ್ಕೆ ಕೊಡುಗೆ ನೀಡಿದ್ದಾರೆ.
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಜಯದೇವ್ ಉನದ್ಕತ್, ಯುಜ್ವೇಂದ್ರ ಚಹಾಲ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಉಮ್ರಾನ್ ಮಲಿಕ್
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಸ್ಚಾಗ್ನೆ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯಿನಿಸ್, ಆಷ್ಟನ್ ಅಗರ್, ಸೀನ್ ಅಬಾಟ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ
ಬೆಂಚ್: ಗ್ಲೆನ್ ಮ್ಯಾಕ್ಸ್ವೆಲ್, ಜೋಶ್ ಇಂಗ್ಲಿಸ್, ಕ್ಯಾಮೆರಾನ್ ಗ್ರೀನ್, ನಾಥನ್ ಎಲ್ಲಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications