Ind vs Aus 3rd ODI: ನಿರ್ಣಾಯಕ ಸೆಣೆಸಾಟದಲ್ಲಿ ಎಡವಿದ ಭಾರತ: ಸರಣಿ ಗೆದ್ದ ಆಸ್ಟ್ರೇಲಿಯಾ

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ನಿರ್ಣಾಯಕ ಹಾಗೂ ಕೊನೆಯ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಅನುಭವಿಸಿದೆ. ಈ ಮೂಲಕ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಸೋಲು ಅನುಭವಿಸಿದ್ದು ಮುಖಭಂಗಕ್ಕೆ ಒಳಗಾಗಿದೆ. ಈ ಮೂಲಕ ಸುದಿರ್ಘ ಕಾಲದ ಬಳಿಕ ಟೀಮ್ ಇಂಡಿಯಾ ತವರಿನಲ್ಲಿ ಸರಣಿ ಸೋಲು ಕಂಡಿದೆ. ಅಲ್ಲದೆ ಭಾರತದಲ್ಲೇ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ನಡೆಸುತ್ತಿರುವ ಸಿದ್ಧತೆಯಲ್ಲಿ ಹಿನ್ನಡೆ ಕಂಡಿದೆ.
ಈ ಪಂದ್ಯದಲ್ಲಿ ಮೊದಲಿಗೆ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 269 ರನ್‌ಗಳಿಸಿ ಆಲೌಟ್ ಆಗಿತ್ತು. ಇದನ್ನು ಬೆನ್ನಟ್ಟಿದ ಭಾರತ ತಂಡ ಕೇವಲ 248 ರನ್‌ಗಳಿಗೆ ಆಲೌಟ್ ಆಗಿದ್ದು ಟೀಮ್ ಇಂಡಿಯಾ 21 ರನ್‌ಗಳ ಅಂತರದಿಂದ ಸೋಲು ಕಂಡಿದೆ. ಈ ಮೂಲಕ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು 1-2 ಅಂತರದಿಂದ ಕಳೆದುಕೊಂಡಿದೆ.
ಇನ್ನು ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ನೀಡಿದ ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಟೀಮ್ ಇಂಡಿಯಾಗೆ ಉತ್ತಮ ಆರಂಭ ದೊರೆಯಿತು. ಆದರೆ ಈ ಆರಂಭವನ್ನು ಮುಂದುವರಿಸಿಕೊಂಡು ಹೋಗುವಲ್ಲಿ ಟೀಮ್ ಇಂಡಿಯಾದ ಆಟಗಾರರು ವಿಫಲವಾದರು. ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ ಕೆಲವೇ ರನ್‌ಗಳ ಅಂತರದಲ್ಲಿ ವಿಕೆಟ್ ಕಳೆದುಕೊಂಡ ಬಳಿಕ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಅವರಿಂದ ಮತ್ತೊಂದು ಉತ್ತಮ ಜೊತೆಯಾಟ ಬಂತು.
ಕೆಎಲ್ ರಾಹುಲ್ 32 ರನ್‌ಗಳಿಸಿ ಔಟಾದರೆ ವಿರಾಟ್ ಕೊಹ್ಲಿ 54 ರನ್‌ಗಳಿಸಿ ತಂಡಕ್ಕೆ ಕೊಡುಗೆ ನೀಡಿದ್ದಾರೆ. ಅನುಭವಿ ಆಟಗಾರ ವಿರಾಟ್ ಕೊಹ್ಲಿ ಅರ್ಧ ಶತಕ ಸಿಡಿಸಿದರಾದರೂ ಈ ಪ್ರದರ್ಶನ ಪರಿಣಾಮಕಾರಿಯಾಗಿರಲಿಲ್ಲ. ಇನ್ನು ಅಲ್ಲದೆ ನಂತರ ಭಾರತ ತಂಡಕ್ಕೆ ಉತ್ತಮ ಜೊತೆಯಾಟ ಬಾರದ ಕಾರಣ ಟೀಮ್ ಇಂಡಿಯಾ ವೈಫಲ್ಯತೆ ಅನುಭವಿಸಿದೆ. ಇನ್ನು ಹಾರ್ದಿಕ್ ಪಾಂಡ್ಯ ಕೂಡ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರಾದರೂ ಅದು ಗೆಲುವಿನ ದಡ ತಂದುಕೊಡಲು ಸಾಧ್ಯಾಗಲಿಲ್ಲ.
ಇನ್ನು ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಪರವಾಗಿ ಬೌಲಿಂಗ್‌ನಲ್ಲಿ ಅಬ್ಬರಿಸಿದ್ದು ಆಡಂ ಜಂಪಾ. ಆಸ್ಟ್ರೇಲಿಯಾ ತಂಡಕ್ಕೆ ಅಗತ್ಯವಿದ್ದಾಗೆಲ್ಲಾ ಜಂಪಾ ವಿಕೆಟ್ ಕಬಳಿಸಿ ಭಾರತ ತಂಡಕ್ಕೆ ಆಘಾತ ನೀಡಿದರು. ಜಂಪಾ ಭಾರತದ ನಾಲ್ವರು ಆಟಗಾರರಿಗೆ ಫೆವಿಲಿಯನ್ ಹಾದಿ ತೋರಿಸಿದ್ದಾರೆ. ಆಶ್ಟನ್ ಅಗರ್ ಎರಡು ವಿಕೆಟ್ ಪಡೆದರು.
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಬೆಂಚ್: ಜಯದೇವ್ ಉನದ್ಕತ್, ಯುಜ್ವೇಂದ್ರ ಚಹಾಲ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಉಮ್ರಾನ್ ಮಲಿಕ್
ಆಸ್ಟ್ರೇಲಿಯಾ ಆಡುವ ಬಳಗ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಸ್ಚಾಗ್ನೆ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯಿನಿಸ್, ಆಷ್ಟನ್ ಅಗರ್, ಸೀನ್ ಅಬಾಟ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ
ಬೆಂಚ್: ಗ್ಲೆನ್ ಮ್ಯಾಕ್ಸ್ವೆಲ್, ಜೋಶ್ ಇಂಗ್ಲಿಸ್, ಕ್ಯಾಮೆರಾನ್ ಗ್ರೀನ್, ನಾಥನ್ ಎಲ್ಲಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications