IND vs AUS 3rd Test: ಜಡೇಜಾ, ಅಶ್ವಿನ್, ಉಮೇಶ್ ಮಾರಕ ಬೌಲಿಂಗ್; ಅಲ್ಪ ಮುನ್ನಡೆ ಗಳಿಸಿ ಆಸೀಸ್ ಆಲೌಟ್!

ಪ್ರವಾಸಿ ಆಸ್ಟ್ರೇಲಿಯಾ ಮತ್ತು ಭಾರತ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯ ಬುಧವಾರ, ಮಾರ್ಚ್ 1ರಂದು ಇಂದೋರ್‌ನಲ್ಲಿ ಪ್ರಾರಂಭವಾಗಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ 33.2 ಓವರ್‌ಗಳಲ್ಲಿ 109 ರನ್‌ಗಳಿಗೆ ಆಲೌಟ್ ಆಗಿತ್ತು. ಪ್ರತ್ಯುತ್ತರವಾಗಿ ಮೊದಲ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಉಸ್ಮಾನ್ ಖವಾಜಾ ಅವರ ಅರ್ಧಶತಕದ ನೆರವಿನಿಂದ 76.3 ಓವರ್‌ಗಳಲ್ಲಿ 197 ರನ್‌ಗಳಿಗೆ ಸರ್ವಪತನ ಕಂಡಿದೆ.
ಮೊದಲ ದಿನದಾಟದಂತ್ಯಕ್ಕೆ ಆಸ್ಟ್ರೇಲಿಯಾ ತಂಡ 4 ವಿಕೆಟ್ ಕಳೆದುಕೊಂಡು 156 ರನ್ ಗಳಿಸಿತ್ತು. ಎರಡನೇ ದಿನದಾಟ ಮುಂದುವರೆಸಿದ ಪ್ರವಾಸಿ ತಂಡ 41 ರನ್ ಸೇರಿಸುವಷ್ಟರಲ್ಲಿ ಉಳಿದ 6 ವಿಕೆಟ್ ಕಳೆದುಕೊಂಡಿತು. ಈ ಮೂಲಕ ಮೂರನೇ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 88 ರನ್‌ಗಳ ಅಲ್ಪ ಮುನ್ನಡೆ ಸಾಧಿಸಿದೆ.
ಆಸ್ಟ್ರೇಲಿಯಾ ಪರ ಬ್ಯಾಟಿಂಗ್‌ನಲ್ಲಿ ಉಸ್ಮಾನ್ ಖವಾಜಾ 60 ರನ್, ಮಾರ್ನಸ್ ಲ್ಯಾಬುಶ್ಚಾಗ್ನೆ 31 ರನ್, ಸ್ಟೀವನ್ ಸ್ಮಿತ್ 26 ರನ್, ಕ್ಯಾಮೆರಾನ್ ಗ್ರೀನ್ 21 ರನ್, ಪೀಟರ್ ಹ್ಯಾಂಡ್ಸ್‌ಕಾಂಬ್ 19 ರನ್‌ಗಳ ನೆರವಿನಿಂದ 197 ಕಲೆಹಾಕಿತು.
ಇನ್ನು ಬೌಲಿಂಗ್‌ನಲ್ಲಿ ಭಾರತದ ಪರ ಆಲ್‌ರೌಂಡರ್ ರವೀಂದ್ರ ಜಡೇಜಾ 78 ರನ್‌ಗಳಿಗೆ 4 ವಿಕೆಟ್, ರವಿಚಂದ್ರನ್ ಅಶ್ವಿನ್ 44 ರನ್‌ಗಳಿಗೆ 3 ವಿಕೆಟ್ ಮತ್ತು ವೇಗಿ ಉಮೇಶ್ ಯಾದವ್ 12 ರನ್‌ಗಳಿಗೆ 3 ವಿಕೆಟ್ ಪಡೆದು ಮಿಂಚಿದರು.
ಆಸ್ಟ್ರೇಲಿಯಾ ತಂಡದ ಮೊದಲ ಇನ್ನಿಂಗ್ಸ್ ಮುಕ್ತಾಯದ ನಂತರ ಎರಡನೇ ದಿನದಂದು ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ತಂಡ ಭೋಜನ ವಿರಾಮದ ವೇಳೆಗೆ 4 ಓವರ್‌ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೇ 13 ರನ್ ಗಳಿಸಿದೆ. ನಾಯಕ ರೋಹಿತ್ ಶರ್ಮಾ 5 ರನ್ ಮತ್ತು ಸುಭ್ಮನ್ ಗಿಲ್ 4 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications