Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs AUS 3rd Test: 3ನೇ ಟೆಸ್ಟ್‌ನಲ್ಲಾದರೂ ಗೆಲ್ಲಲು ಆಸ್ಟ್ರೇಲಿಯಾ ಹೊಸ ನಾಯಕನ ರಣತಂತ್ರ!

IND vs AUS 3rd Test: Australias Team Is Practicing Hard At The Arun Jaitley Stadium

ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಎರಡೂ ಪಂದ್ಯಗಳನ್ನು ಸೋತ ಬಳಿಕ ಆಸ್ಟ್ರೇಲಿಯಾ ತಂಡ ಭಾರಿ ಮುಖಭಂಗಕ್ಕೊಳಗಾಗಿದೆ. ಗಾಯದ ಸಮಸ್ಯೆ, ಪ್ರಮುಖ ಆಟಗಾರರ ಗೈರು ತಂಡದ ಸಂಕಟವನ್ನು ಹೆಚ್ಚಿಸಿದೆ. ಮೂರನೇ ಟೆಸ್ಟ್ ಪಂದ್ಯಕ್ಕೆ ನಾಯಕ ಪ್ಯಾಟ್ ಕಮ್ಮಿನ್ಸ್ ಅಲಭ್ಯರಾಗಿದ್ದಾರೆ.

ಸರಣಿಯ ಮೂರನೇ ಪಂದ್ಯ ಮಾರ್ಚ್ 1ರಂದು ಇಂದೋರ್ ನಲ್ಲಿ ಆರಂಭವಾಗಲಿದ್ದು, ಮೂರನೇ ಟೆಸ್ಟ್ ಪಂದ್ಯಕ್ಕೆ ಸ್ಟೀವ್ ಸ್ಮಿತ್ ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ಮೂರನೇ ಟೆಸ್ಟ್ ಪಂದ್ಯದಲ್ಲಾದರೂ ಗೆಲ್ಲಲೇಬೇಕೆನ್ನುವ ಹಠಕ್ಕೆ ಬಿದ್ದಿದೆ.

ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಇಂದೋರ್ ಗೆ ತೆರಳುವ ಮುನ್ನ ಆಸ್ಟ್ರೇಲಿಯಾ ಆಟಗಾರರು ಕಠಿಣ ಆಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ದಿನಕ್ಕೆ 4 ರಿಂದ 5 ಗಂಟೆಗಳ ಕಾಲ ಅಭ್ಯಾಸ ಮಾಡುತ್ತಿದ್ದಾರೆ.

ಮೂರನೇ ಟೆಸ್ಟ್ ಪಂದ್ಯದಲ್ಲಿ ಆಡಲು ಭಾನುವಾರ ಆಸ್ಟ್ರೇಲಿಯಾ ತಂಡ ದೆಹಲಿಯಿಂದ ಇಂದೋರ್ ಗೆ ಪ್ರಯಾಣಿಸಲಿದೆ. ಅದಕ್ಕೂ ಮುನ್ನ ದೆಹಲಿಯ ಸ್ಪಿನ್ ಪಿಚ್‌ಗನಲ್ಲಿ ಆಸ್ಟ್ರೇಲಿಯಾ ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದೆ. ಭಾರತದ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಆಸ್ಟ್ರೇಲಿಯಾಗೆ ದೊಡ್ಡ ತಲೆನೋವಾಗಿದ್ದಾರೆ.

ಆಸ್ಟ್ರೇಲಿಯಾಗೆ ಹೋಗಿರುವ ನಾಯಕ

ಆಸ್ಟ್ರೇಲಿಯಾಗೆ ಹೋಗಿರುವ ನಾಯಕ

ಆಸ್ಟ್ರೇಲಿಯಾ ಟೆಸ್ಟ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ತಾಯಿಯ ಅನಾರೋಗ್ಯದ ಕಾರಣದಿಂದಾಗಿ ತುರ್ತಾಗಿ ಆಸ್ಟ್ರೇಲಿಯಾಗೆ ಮರಳಿದ್ದಾರೆ. ಮೂರನೇ ಟೆಸ್ಟ್ ಪಂದ್ಯಕ್ಕೆ ಮುನ್ನ ಅವರು ಭಾರತಕ್ಕೆ ಬರುತ್ತಾರೆ ಎನ್ನಲಾಗಿತ್ತು ಆದರೆ ತಾಯಿಯ ಆರೋಗ್ಯ ಗಂಭೀರವಾಗಿರುವ ಕಾರಣ ಕಮಿನ್ಸ್ ಆಸ್ಟ್ರೇಲಿಯಾದಲ್ಲೇ ಉಳಿಯಲಿದ್ದು, 3ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ.

ಪ್ಯಾಟ್ ಕಮ್ಮಿನ್ಸ್ ಅನುಪಸ್ಥಿತಿಯಲ್ಲಿ ಉಪ ನಾಯಕ ಸ್ಟೀವ್ ಸ್ಮಿತ್ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ. ಮೂರನೇ ಟೆಸ್ಟ್ ಪಂದ್ಯದಲ್ಲಿ ಅವರು ತಂಡವನ್ನು ಮುನ್ನಡೆಸಲಿದ್ದಾರೆ.

ಮೂರನೇ ಟೆಸ್ಟ್‌ಗೆ ಗ್ರೀನ್, ಸ್ಟಾರ್ಕ್ ಫಿಟ್

ಮೂರನೇ ಟೆಸ್ಟ್‌ಗೆ ಗ್ರೀನ್, ಸ್ಟಾರ್ಕ್ ಫಿಟ್

ಮೂರನೇ ಟೆಸ್ಟ್ ಪಂದ್ಯಕ್ಕೆ ಮುನ್ನ ಆಸ್ಟ್ರೇಲಿಯಾದ ಪ್ರಮುಖ ಆಲ್‌ರೌಂಡರ್ ಕ್ಯಾಮೆರಾನ್ ಗ್ರೀನ್ ಮತ್ತು ಪ್ರಮುಖ ವೇಗಿ ಮಿಚೆಲ್ ಸ್ಟಾರ್ಕ್ ಫಿಟ್ ಆಗಿದ್ದಾರೆ. ಇವರಿಬ್ಬರೂ ಮೂರನೇ ಟೆಸ್ಟ್‌ನಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ.

ಪ್ರಮುಖ ಆಲ್‌ರೌಂಡರ್ ಕ್ಯಾಮೆರಾನ್ ಗ್ರೀನ್ ತಾನು ಫಿಟ್ ಆಗಿದ್ದೇನೆ ಎಂದು ಘೋಷಿಸಿದ್ದು, ಮೂರನೇ ಟೆಸ್ಟ್‌ನಲ್ಲಿ ಬ್ಯಾಟಿಂಗ್ ಜೊತೆ ಬೌಲಿಂಗ್ ಮಾಡಲು ಕೂಡ ಸಿದ್ಧವಾಗಿದ್ದಾರೆ. ಮಿಚೆಲ್ ಸ್ಟಾರ್ಕ್ ತಂಡಕ್ಕೆ ಮರಳಿರುವುದು ಬೌಲಿಂಗ್ ವಿಭಾಗಕ್ಕೆ ಮತ್ತಷ್ಟು ಶಕ್ತಿ ತುಂಬಿದೆ.

ಕಾಂಗರೂ ಪಡೆಗಳಿಂದ ಕಠಿಣ ಅಭ್ಯಾಸ

ಕಾಂಗರೂ ಪಡೆಗಳಿಂದ ಕಠಿಣ ಅಭ್ಯಾಸ

ಸ್ಟೀವ್ ಸ್ಮಿತ್ ಮತ್ತು ಸಹ ಆಟಗಾರರು ಸದ್ಯ ದೆಹಲಿಯಲ್ಲಿದ್ದು ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಫೆಬ್ರವರಿ 26 ರಂದು ಆಸ್ಟ್ರೇಲಿಯಾ ಇಂದೋರ್‌ಗೆ ತೆರಳುವ ಸಾಧ್ಯತೆ ಇದ್ದು ಅದುವರೆಗೂ ದೆಹಲಿಯಲ್ಲಿ ಅಭ್ಯಾಸವನ್ನು ಮುಂದುವರೆಸಲು ನಿರ್ಧರಿಸಲಾಗಿದೆ.

ಸರಣಿಯ ಮೊದಲ ಎರಡೂ ಪಂದ್ಯಗಳನ್ನು ಆಸ್ಟ್ರೇಲಿಯಾ ಮೂರೇ ದಿನದಲ್ಲಿ ಸೋತಿದೆ. ಎರಡನೇ ಪಂದ್ಯವನ್ನು ಮೂರೇ ದಿನಕ್ಕೆ ಮುಗಿಸಿದ ಬಳಿಕ ಭಾರತ ತಂಡದ ಆಟಗಾರರು ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ. ಕುಟುಂಬದ ಜೊತೆ ಕಾಲ ಕಳೆಯುತ್ತಿರುವ ರೋಹಿತ್ ಶರ್ಮಾ ಪಡೆ, ಫೆಬ್ರವರಿ 26ರಂದು ಇಂದೋರ್ ನಲ್ಲಿ ಒಂದಾಗಲಿದೆ.

Story first published: Friday, February 24, 2023, 20:37 [IST]
Other articles published on Feb 24, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+