Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs AUS 3rd Test: ಫಾರ್ಮ್‌ಗೆ ಮರಳಲು ಶಪಥ! ನೆಟ್ಸ್‌ನಲ್ಲಿ ಬೆವರಿಳಿಸುತ್ತಿರುವ ಪೂಜಾರ

IND vs AUS 3rd Test: Cheteshwar Pujara Special Batting Practice Ahead of Indore Test

ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೊದಲ ಎರಡು ಪಂದ್ಯಗಳಲ್ಲಿ ಗೆದ್ದ ಬಳಿಕ ಭಾರತ ತಂಡದ ಆಟಗಾರರು ರಿಲ್ಯಾಕ್ಸ್ ಮೂಡ್‌ನಲ್ಲಿದ್ದಾರೆ. ಆದರೆ, ಅನುಭವಿ ಬ್ಯಾಟರ್ ಚೇತೇಶ್ವರ ಪೂಜಾರ ಮಾತ್ರ ವಿಭಿನ್ನವಾಗಿದ್ದು ಬ್ಯಾಟಿಂಗ್ ಅಭ್ಯಾಸ ಮಾಡುತ್ತಿದ್ದಾರೆ.

ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ದೊಡ್ಡ ಮೊತ್ತವನ್ನು ಗಳಿಸುವಲ್ಲಿ ವಿಫಲವಾದ ಬಳಿಕ ಪೂಜಾರ ಮೂರನೇ ಟೆಸ್ಟ್ ಪಂದ್ಯದಲ್ಲಿ ವಾಪಸಾಗುವ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಿದ್ದಾರೆ. ಮಾರ್ಚ್ 1ರಿಂದ ಇಂದೋರ್ ನಲ್ಲಿ ಆರಂಭವಾಗಲಿರುವ ಮೂರನೇ ಟೆಸ್ಟ್‌ಗಾಗಿ ಈಗಿನಿಂದಲೇ ಸಿದ್ಧತೆ ಆರಂಭಿಸಿದ್ದಾರೆ.

ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ಮಾಡುತ್ತಿರುವುದು ವಿಡಿಯೋವನ್ನು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, ಮೂರನೇ ಪಂದ್ಯಕ್ಕಾಗಿ ತಯಾರಿ ಎಂದು ಶೀರ್ಷಿಕೆ ನೀಡಿದ್ದಾರೆ. 100 ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯಗಳನ್ನಾಡಿರುವ ಪೂಜಾರ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪ್ರಮುಖ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ.

ಭಾರತಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಟ್ರೋಫಿ ಗೆಲ್ಲಲು ಇನ್ನೂ ಮೂರು ಟೆಸ್ಟ್‌ಗಳಲ್ಲಿ ಗೆಲುವು ಸಾಧಿಸಬೇಕಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಎರಡು ಪಂದ್ಯಗಳು ಮತ್ತು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ. ಫೈನಲ್‌ ಪಂದ್ಯಕ್ಕೆ ಮುನ್ನ ಪೂಜಾರ ದೊಡ್ಡ ಮೊತ್ತ ಗಳಿಸುವ ಮೂಲಕ ವಿಶ್ವಾಸವನ್ನು ಹೆಚ್ಚಿಸಿಕೊಳ್ಳುವ ಸಿದ್ಧತೆಯಲ್ಲಿದ್ದಾರೆ.

ನೆಟ್ಸ್‌ನಲ್ಲಿ ಕಠಿಣ ಅಭ್ಯಾಸ

ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಪೂಜಾರ ಕಠಿಣ ಬ್ಯಾಟಿಂಗ್ ಅಭ್ಯಾಸ ಮಾಡುವುದನ್ನು ನೋಡಬಹುದಾಗಿದೆ. ಪೂಜಾರ ಕಳಪೆ ಫಾರ್ಮ್‌ನಿಂದಾಗಿ ಭಾರತ ತಂಡದಿಂದಲೇ ಹೊರಗುಳಿದಿದ್ದರು, ಆದರೆ ಛಲ ಬಿಡದೆ ಹೆಚ್ಚಿನ ಅಭ್ಯಾಸ ಮಾಡಿದ್ದ ಪೂಜಾರ ಕೌಂಟಿ, ದೇಶೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಆಸ್ಟ್ರೇಲಿಯಾ ಬೌಲರ್ ಗಳನ್ನು ಯಶಸ್ವಿಯಾಗಿ ಎದುರಿಸಲು ತಮ್ಮ ಬ್ಯಾಟಿಂಗ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಸರಣಿಯ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಪೂಜಾರ 7 ರನ್ ಗಳಸಿದ್ದರು. 2ನೇ ಟೆಸ್ಟ್‌ನಲ್ಲಿ ತಮ್ಮ 100ನೇ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಮೂಡಿಸಿದ್ದರು.

IND vs AUS 3rd Test: Cheteshwar Pujara Special Batting Practice Ahead of Indore Test

ಆತಂಕ ಸೃಷ್ಟಿಸಿದ ಫಾರ್ಮ್

ಎರಡನೇ ಇನ್ನಿಂಗ್ಸ್‌ನಲ್ಲಿ ಅಜೇಯ 31 ರನ್‌ ಗಳನ್ನು ಸಿಡಿಸುವ ಮೂಲಕ ಭಾರತ ಗೆಲುವಿನಲ್ಲಿ ಮುಖ್ಯಪಾತ್ರ ವಹಿಸಿದರು. ಕಳೆದ ಮೂರು ಇನ್ನಿಂಗ್ಸ್‌ಗಳಲ್ಲಿ 35 ರನ್ ಗಳಿಸಿರುವುದು ತಂಡಕ್ಕೆ ಆತಂಕ ಉಂಟುಮಾಡಿದೆ.

ಇಂದೋರ್ ಟೆಸ್ಟ್‌ನಲ್ಲಿ ಪೂಜಾರ ಮತ್ತೆ ಫಾರ್ಮ್‌ಗೆ ಮರಳುವ ಮೂಲಕ ತಂಡದ ಮ್ಯಾನೇಜ್‌ಮೆಂಟ್ ಮತ್ತು ಆಯ್ಕೆದಾರರ ನಿರ್ಧಾರವನ್ನು ಸಮರ್ಥಿಸಬೇಕಿದೆ. ಪೂಜಾರ ತಮ್ಮ ನೈಜ ಆಟವನ್ನು ಆಡಿದರೆ, ಆಸ್ಟ್ರೇಲಿಯಾ ಬೌಲರ್ ಗಳು ಕಂಗೆಡುವುದಂತೂ ಸತ್ಯ. ಉಳಿದ ಎರಡು ಟೆಸ್ಟ್ ಪಂದ್ಯಗಳಲ್ಲಿ ಪೂಜಾರ ಶತಕ ಸಿಡಿಸಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.

Story first published: Saturday, February 25, 2023, 2:30 [IST]
Other articles published on Feb 25, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+