IND Vs AUS 3rd Test: ನಾಥನ್ ಲಿಯಾನ್ ಮಾರಕ ಬೌಲಿಂಗ್ ಆಸ್ಟ್ರೇಲಿಯಾ ಗೆಲುವಿಗೆ 76 ರನ್‌ಗಳ ಗುರಿ

ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಸ್ಟಷ್ಟ ಮೇಲುಗೈ ಸಾಧಿಸಿದೆ. ಎರಡನೇ ದಿನದಾಟದ ಅಂತ್ಯಕ್ಕೆ ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ 163 ರನ್‌ಗಳಿಗೆ ಆಲೌಟ್ ಆಗಿದ್ದು, 75 ರನ್‌ಗಳ ಮುನ್ನಡೆ ಸಾಧಿಸಿದೆ.
ಮೊದಲ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 154 ರನ್ ಗಳಿಸಿದ್ದ ಆಸ್ಟ್ರೇಲಿಯಾ 47 ರನ್‌ಗಳ ಮುನ್ನಡೆ ಪಡೆದುಕೊಂಡಿತ್ತು. ಎರಡನೇ ದಿನ ಆರಂಭದಲ್ಲಿ ಉತ್ತಮ ಆರಂಭ ಪಡೆಯಿತು, ಗ್ರೀನ್ ಮತ್ತು ಹ್ಯಾಂಡ್ಸ್‌ಕಾಂಬ್ 32 ರನ್‌ಗಳನ್ನು ಸೇರಿಸಿದರು.
ಅಶ್ವಿನ್ ಹ್ಯಾಂಡ್ಸ್‌ಕಾಂಬ್ ವಿಕೆಟ್ ಪಡೆದ ನಂತರ ಆಸ್ಟ್ರೇಲಿಯಾ ದಿಢೀರ್ ಕುಸಿತ ಕಂಡಿತು. 186 ರನ್‌ಗೆ 5 ನೇ ವಿಕೆಟ್ ಕಳೆದುಕೊಂಡ ಆಸ್ಟ್ರೇಲಿಯಾ 197 ರನ್‌ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ರವಿಚಂದ್ರನ್ ಅಶ್ವಿನ್ ಮತ್ತು ಉಮೇಶ್ ಯಾದವ್ ತಲಾ 3 ವಿಕೆಟ್ ಪಡೆದು ಮಿಂಚಿದರು.
197 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಆಸ್ಟ್ರೇಲಿಯಾ ಮೊದಲನೇ ಇನ್ನಿಂಗ್ಸ್‌ನಲ್ಲಿ ಅತ್ಯಮೂಲ್ಯ 88 ರನ್‌ಗಳ ಮುನ್ನಡೆ ಪಡೆದುಕೊಂಡಿತು. ನಂತರ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಭಾರತ ಆರಂಭದಲ್ಲೇ ಆಘಾತ ಅನುಭವಿಸಿತು.

ಆರಂಭಿಕ ಜೋಡಿ ಮತ್ತೆ ವಿಫಲ
ಇಡೀ ಸರಣಿಯಲ್ಲಿ ಭಾರತದ ಆರಂಭಿಕ ಜೋಡಿಯ ಬ್ಯಾಟಿಂಗ್ ವೈಫಲ್ಯ ಮತ್ತೆ ಮುಂದುವರೆಯಿತು. ಕೆಎಲ್ ರಾಹುಲ್ ಬದಲಾಗಿ ಸ್ಥಾನ ಪಡೆದ ಶುಭಮನ್ ಗಿಲ್ ಉತ್ತಮ ಪ್ರದರ್ಶನ ನೀಡುವಲ್ಲಿ ಮತ್ತೆ ವಿಫಲರಾದರು. 5 ರನ್ ಗಳಿಸಿದ್ದಾಗ ನಾಥನ್ ಲಿಯಾನ್‌ಗೆ ದೊಡ್ಡ ಹೊಡೆತಕ್ಕೆ ಪ್ರಯತ್ನಿಸಿ ಬೌಲ್ಡ್ ಆದರು.
ನಾಯಕ ರೋಹಿತ್ ಶರ್ಮಾ 12 ರನ್ ಗಳಿಸಿದ್ದಾಗ ಲಿಯಾನ್ ಎಲ್‌ಬಿಡಬ್ಲ್ಯೂ ಬಲೆಗೆ ಕೆಡವಿದರು. ಚೇತೇಶ್ವರ ಪೂಜಾರ ಮಾತ್ರ ಆಸ್ಟ್ರೇಲಿಯಾ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದರು. ತಾಳ್ಮೆಯ ಇನ್ನಿಂಗ್ಸ್ ಆಡಿದ ಅವರು 59 ರನ್ ಗಳಿಸಿದ್ದಾಗ ಸ್ಟೀವ್ ಸ್ಮಿತ್ ಹಿಡಿದ ಅದ್ಭುತ ಕ್ಯಾಚ್‌ಗೆ ಬಲಿಯಾದರು.

ಪ್ರಮುಖ ಬ್ಯಾಟರ್ ಗಳ ವೈಫಲ್ಯ
ವಿರಾಟ್ ಕೊಹ್ಲಿ 13 ರನ್ ಗಳಿಸದರೆ, ರವೀಂದ್ರ ಜಡೇಜಾ 7 ರನ್ ಗಳಿಸಿ ಮತ್ತೆ ನಿರಾಸೆ ಮೂಡಿಸಿದರು. ಶ್ರೇಯಸ್ ಅಯ್ಯರ್ 27 ಎಸೆತಗಳಲ್ಲಿ 26 ರನ್ ಗಳಿಸಿ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದರು, ಆದರೆ ಅವರು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ.
ರವಿಚಂದ್ರನ್ ಅಶ್ವಿನ್ ಕೂಡ 16 ರನ್ ಗಳಿಸುವಷ್ಟರಲ್ಲಿಔಟಾದರು. ಶ್ರೀಕರ್ ಭರತ್ 3 ರನ್ ಗಳಿಸಿ ಔಟಾದರು. ಅಕ್ಷರ್ ಪಟೇಲ್ ಅಜೇಯ 15 ರನ್ ಗಳಿಸಿದರೆ, ಉಮೇಶ್ ಯಾದವ್ ಮತ್ತು ಮೊಹಮ್ಮದ್ ಸಿರಾಜ್ ಡಕೌಟ್ ಆದರು.

8 ವಿಕೆಟ್ ಪಡೆದ ನಾಥನ್ ಲಿಯಾನ್
ಆಸ್ಟ್ರೇಲಿಯಾದ ಪ್ರಮುಖ ಸ್ಪಿನ್ನರ್ ನಾಥನ್ ಲಿಯಾನ್ ಭಾರತದ ಬ್ಯಾಟಿಂಗ್ ಪಡೆಯನ್ನು ಕಾಡಿದರು. ಲಿಯಾನ್ ಸ್ಪಿನ್ ದಾಳಿಗೆ ಭಾರತದ ಬ್ಯಾಟರ್ ಗಳು ಸಮರ್ಪಕ ಉತ್ತರ ನೀಡಲಿಲ್ಲ. ಎರಡನೇ ಇನ್ನಿಂಗ್ಸ್‌ನಲ್ಲಿ 8 ವಿಕೆಟ್ ಪಡೆಯುವ ಮೂಲಕ ಭಾರತ ತಂಡಕ್ಕೆ ಮಾರಕವಾದರು.
ಮಿಚೆಲ್ ಸ್ಟಾರ್ಕ್ 1 ವಿಕೆಟ್ ಪಡೆದರೆ, ಮ್ಯಾಥ್ಯೂ ಕುಹ್ನೆಮನ್ 1 ವಿಕೆಟ್ ಪಡೆದುಕೊಂಡರು. ನಾಥನ್ ಲಿಯಾನ್ 8 ವಿಕೆಟ್ ಪಡೆಯುವ ಮೂಲಕ ಹಲವು ದಾಖಲೆಗಳನ್ನು ಸೃಷ್ಟಿಸಿದರು. ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ 112 ವಿಕೆಟ್ ಪಡೆಯುವ ಮೂಲಕ ಅನಿಲ್ ಕುಂಬ್ಳೆ ದಾಖಲೆಯನ್ನು ಮುರಿದಿದ್ದಾರೆ.
ಭಾರತ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ 193 ರನ್‌ಗಳಿಗೆ ಆಲೌಟ್ ಆಗಿದ್ದು, 75 ರನ್‌ಗಳ ಮುನ್ನಡೆ ಪಡೆದುಕೊಂಡಿದೆ. ಬ್ಯಾಟಿಂಗ್ ಮಾಡಲು ಪಿಚ್ ಕಷ್ಟಕರವಾಗಿದ್ದು, ಭಾರತದ ಬೌಲರ್ ಗಳು ಪವಾಡ ಮಾಡಿದರೆ, ಈ ಪಂದ್ಯವನ್ನು ಗೆಲ್ಲಬಹುದಾಗಿದೆ. 2004ರಲ್ಲಿ ಮುಂಬೈನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ 104 ರನ್‌ಗಳನ್ನು ಯಶಸ್ವಿಯಾಗಿ ಡಿಫೆಂಡ್ ಮಾಡಿಕೊಂಡು ಗೆಲುವು ಸಾಧಿಸಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications