For Quick Alerts
ALLOW NOTIFICATIONS  
For Daily Alerts
 

IND vs AUS 3rd Test: ಅನಿಲ್ ಕುಂಬ್ಳೆ, ಕಪಿಲ್ ದೇವ್ ದಾಖಲೆಗಳ ಮೇಲೆ ಕಣ್ಣಿಟ್ಟ ರವಿಚಂದ್ರನ್ ಅಶ್ವಿನ್

IND vs AUS 3rd Test: Indias Spinner Ravichandran Ashwin Eyes On Anil Kumble And Kapil Dev Records

ಪ್ರವಾಸಿ ಆಸ್ಟ್ರೇಲಿಯಾ ಮತ್ತು ಭಾರತ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯ ಬುಧವಾರ, ಮಾರ್ಚ್ 1ರಂದು ಇಂದೋರ್‌ನಲ್ಲಿ ಆರಂಭವಾಗಿದೆ.

ಮೂರನೇ ಟೆಸ್ಟ್‌ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಊಟದ ವಿರಾಮದ ವೇಳೆಗೆ ಭಾರತ ತಂಡ 7 ವಿಕೆಟ್‌ಗೆ 84 ರನ್ ಗಳಿಸಿ ಸಂಕಷ್ಟಕ್ಕೆ ಸಿಲುಕಿದೆ.

ಇನ್ನು ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ ಭಾರತದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಕೆಲವು ಪ್ರಮುಖ ದಾಖಲೆಗಳ ಮೇಲೆ ಕಣ್ಣಿಟ್ಟಿದ್ದು, ಪ್ರಮುಖ ಮೈಲಿಗಲ್ಲು ಸ್ಥಾಪಿಸಲು ಎದುರು ನೋಡುತ್ತಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ ಪಂದ್ಯಗಳಲ್ಲಿ ಅನಿಲ್ ಕುಂಬ್ಳೆ ಅವರ 111 ವಿಕೆಟ್‌ಗಳ ಗಳಿಕೆಯನ್ನು ಸರಿಗಟ್ಟಲು ಮತ್ತು ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಜಂಟಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಲು ರವಿಚಂದ್ರನ್ ಅಶ್ವಿನ್‌ಗೆ ಎಂಟು ವಿಕೆಟ್‌ಗಳ ಅವಶ್ಯಕತೆ ಇದೆ.

IND vs AUS 3rd Test: Indias Spinner Ravichandran Ashwin Eyes On Anil Kumble And Kapil Dev Records

ಇದೇ ವೇಳೆ, ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಅನಿಲ್ ಕುಂಬ್ಳೆ ಅವರ 111 ವಿಕೆಟ್‌ಗಳ ಗಳಿಕೆಯನ್ನು ಸರಿಗಟ್ಟಲು ಆಸ್ಟ್ರೇಲಿಯಾದ ನಾಥನ್ ಲಿಯಾನ್‌ಗೆ ಒಂಬತ್ತು ವಿಕೆಟ್‌ಗಳ ಅವಶ್ಯಕತೆ ಇದೆ.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ಮಾಜಿ ನಾಯಕ ಕಪಿಲ್ ದೇವ್ ಅವರ 687 ವಿಕೆಟ್‌ಗಳ ಗಳಿಕೆಯನ್ನು ಹಿಂದಿಕ್ಕಲು ರವಿಚಂದ್ರನ್ ಅಶ್ವಿನ್‌ಗೆ ಕೇವಲ ಎರಡು ವಿಕೆಟ್‌ಗಳು ಮಾತ್ರ ಬೇಕಿದೆ.

ರವಿಚಂದ್ರನ್ ಅಶ್ವಿನ್ ಮಾತ್ರವಲ್ಲದೆ, ವಿರಾಟ್ ಕೊಹ್ಲಿ ತವರಿನ ಟೆಸ್ಟ್‌ ಪಂದ್ಯಗಳಲ್ಲಿ 4000 ರನ್ ಪೂರೈಸಲು 77 ರನ್‌ಗಳ ಅಂತರದಲ್ಲಿದ್ದಾರೆ. ಆದರೆ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 22 ರನ್ ಗಳಿಸಿ ಔಟಾಗಿದ್ದು, ಎರಡನೇ ಇನ್ನಿಂಗ್ಸ್‌ನಲ್ಲಾದರೂ 55 ರನ್ ಗಳಿಸಬೇಕಿದೆ.

IND vs AUS 3rd Test: Indias Spinner Ravichandran Ashwin Eyes On Anil Kumble And Kapil Dev Records

ನಾಯಕ ರೋಹಿತ್ ಶರ್ಮಾ ತವರಿನ ಟೆಸ್ಟ್‌ ಪಂದ್ಯಗಳಲ್ಲಿ 2000 ರನ್ ಪೂರೈಸಲು 57 ರನ್‌ಗಳ ಅಂತರದಲ್ಲಿದ್ದರು ಹಾಗೂ ನಾಯಕನಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 3000 ರನ್ ಪೂರೈಸಲು ರೋಹಿತ್ ಶರ್ಮಾಗೆ 80 ರನ್‌ಗಳ ಅವಶ್ಯಕತೆ ಇತ್ತು. ಆದರೆ, ಮೊದಲ ಇನ್ನಿಂಗ್ಸ್‌ನಲ್ಲಿ 12 ರನ್‌ಗಳಿಗೆ ವಿಕೆಟ್ ಒಪ್ಪಿಸಿದ್ದಾರೆ.

ವಿರಾಟ್ ಕೊಹ್ಲಿಗೆ 200ನೇ ಟೆಸ್ಟ್ ಪಂದ್ಯ
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿಗೆ ಇದು ವಿಶೇಷ ಪಂದ್ಯವಾಗಿದ್ದು, ಕೊಹ್ಲಿ ತಮ್ಮ ವೃತ್ತಿಜೀವನದ 200ನೇ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದಾರೆ.

2008ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದಾಗಿನಿಂದ ಭಾರತ ತಂಡದ ಆಧಾರಸ್ತಂಭ ಆಟಗಾರನಾಗಿರುವ ವಿರಾಟ್ ಕೊಹ್ಲಿ, ಇದುವರೆಗೆ 199 ಟೆಸ್ಟ್ ಪಂದ್ಯಗಳ 221 ಇನ್ನಿಂಗ್ಸ್‌ಗಳಲ್ಲಿ 58.22 ಸರಾಸರಿಯಲ್ಲಿ 10,829 ರನ್ ಗಳಿಸಿದ್ದಾರೆ. ಇದೇ ವೇಳೆ ವಿರಾಟ್ ಕೊಹ್ಲಿ 7 ದ್ವಿಶತಕ, 27 ಶತಕಗಳು ಮತ್ತು 28 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಅವರ ಅತ್ಯುತ್ತಮ ಸ್ಕೋರ್ ಅಜೇಯ 254 ರನ್ ಆಗಿದೆ.

Story first published: Wednesday, March 1, 2023, 12:33 [IST]
Other articles published on Mar 1, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+