For Quick Alerts
ALLOW NOTIFICATIONS  
For Daily Alerts
 

IND vs AUS 3rd Test: ಭಾರತ vs ಆಸ್ಟ್ರೇಲಿಯಾ, ಪಿಚ್ ವರದಿ, ಸಂಭಾವ್ಯ ಆಡುವ ಬಳಗ, ಟಿವಿ & ಲೈವ್ ಸ್ಟ್ರೀಮಿಂಗ್

IND vs AUS 3rd Test: India vs Australia, Holkar Pitch Report, Probable Playing 11, TV & Live Streaming Details

ಸದ್ಯ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯ ಬುಧವಾರ, ಮಾರ್ಚ್ 1ರಂದು ಇಂದೋರ್‌ನ ಹೋಳ್ಕರ್ ಸ್ಟೇಡಿಯಂನಲ್ಲಿ ಪ್ರಾರಂಭವಾಗಲಿದೆ.

ಈಗಾಗಲೇ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಾಗ್ಪುರ ಮತ್ತು ದೆಹಲಿಯಲ್ಲಿ ನಡೆದ ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಆತಿಥೇಯ ಭಾರತ ತಂಡ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದ್ದು, ಪ್ರಶಸ್ತಿಯನ್ನು ತನ್ನಲ್ಲೇ ಉಳಿಸಿಕೊಂಡಿದೆ. ತನ್ನ ಗೆಲುವಿನ ನಾಗಾಲೋಟವನ್ನು ಮೂರನೇ ಪಂದ್ಯದಲ್ಲಿ ಮುಂದುವರೆಸಲು ಎದುರು ನೋಡುತ್ತಿದೆ.

ಹೋಳ್ಕರ್ ಪಿಚ್ ವರದಿ
ಇಂದೋರ್‌ನ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂ ಸಾಮಾನ್ಯವಾಗಿ ಉತ್ತಮ ಬ್ಯಾಟಿಂಗ್‌ಗೆ ಸಹಕರಿಸುವ ಮೇಲ್ಮೈ ಹೊಂದಿದೆ. ಬೌಂಡರಿ ಲೈನ್ ತುಂಬಾ ಚಿಕ್ಕದಾಗಿದ್ದು, ಬ್ಯಾಟ್ಸ್‌ಮನ್‌ಗಳಿಂದ ದೊಡ್ಡ ಶಾಟ್‌ಗಳನ್ನು ನಿರೀಕ್ಷಿಸಬಹುದು. ದೆಹಲಿ ಮತ್ತು ನಾಗ್ಪುರದ ರೀತಿಯ ಮೇಲ್ಮೈಯನ್ನು ನಿರೀಕ್ಷಿಸಬಹುದು.

IND vs AUS 3rd Test: India vs Australia, Holkar Pitch Report, Probable Playing 11, TV & Live Streaming Details

ಹೋಳ್ಕರ್ ಸ್ಟೇಡಿಯಂ ಬ್ಯಾಟಿಂಗ್‌ಗೆ ಉತ್ತಮವಾಗಿರುವುದರಿಂದ, ಆಟವು ಕನಿಷ್ಠ 4ನೇ ದಿನದವರೆಗೆ ಮುಂದುವರಿಯುವ ಸಾಧ್ಯತೆ ಇದೆ. 2 ಟೆಸ್ಟ್‌ ಪಂದ್ಯಗಳ ನಂತರ ಇಲ್ಲಿ ಸರಾಸರಿ 1ನೇ ಇನ್ನಿಂಗ್ಸ್‌ನ ಒಟ್ಟು ಮೊತ್ತವು 353 ಆಗಿದ್ದು, 4ನೇ ಇನ್ನಿಂಗ್ಸ್‌ ಹೊತ್ತಿಗೆ ಕೇವಲ 153 ರನ್‌ಗಳಿಗೆ ಇಳಿಯಲಿದೆ. ಈ ಪಿಚ್‌ನಲ್ಲಿ ಕೊನೆಯದಾಗಿ ಬ್ಯಾಟಿಂಗ್ ಮಾಡುವ ಯಾವುದೇ ತಂಡವು 150ಕ್ಕಿಂತ ಹೆಚ್ಚಿನದನ್ನು ಬೆನ್ನಟ್ಟಲು ಕಷ್ಟಸಾಧ್ಯವಾಗಲಿದೆ.

ಹೋಳ್ಕರ್ ಸ್ಟೇಡಿಯಂನ ಸಾಮಾನ್ಯ ಅಂಕಿಅಂಶ
ಒಟ್ಟು ಟೆಸ್ಟ್ ಪಂದ್ಯಗಳು - 2
ಮೊದಲು ಬ್ಯಾಟಿಂಗ್ ಮಾಡಿದ ಗೆಲುವು - 1
ಮೊದಲು ಬೌಲಿಂಗ್ ಮಾಡಿದ ಗೆಲುವು - 1

ರನ್ ಅಂಕಿಅಂಶ
ಗರಿಷ್ಠ ರನ್ ದಾಖಲು - ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ 5 ವಿಕೆಟ್‌ಗೆ 557 ರನ್

ಕನಿಷ್ಠ ರನ್ ದಾಖಲು - ಬಾಂಗ್ಲಾದೇಶ ತಂಡ ಭಾರತ ವಿರುದ್ಧ 150 ರನ್‌ಗಳಿಗೆ ಆಲೌಟ್

IND vs AUS 3rd Test: India vs Australia, Holkar Pitch Report, Probable Playing 11, TV & Live Streaming Details

ಭಾರತ vs ಆಸ್ಟ್ರೇಲಿಯಾ ಮೂರನೇ ಟೆಸ್ಟ್ ಪಂದ್ಯದ ವಿವರ
ಸ್ಥಳ ಮತ್ತು ದಿನಾಂಕ: ಭಾರತ vs ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಬುಧವಾರ, ಮಾರ್ಚ್ 1ರಂದು ಇಂದೋರ್‌ನ ಹೋಳ್ಕರ್ ಸ್ಟೇಡಿಯಂನಲ್ಲಿ ಭಾರತೀಯ ಕಾಲಮಾನ ಬೆಳಿಗ್ಗೆ 9.30ಕ್ಕೆ ಪ್ರಾರಂಭವಾಗಲಿದೆ.

ಟಿವಿ ಮತ್ತು ಲೈವ್ ಸ್ಟ್ರೀಮಿಂಗ್: ಭಾರತ vs ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಿ ವೀಕ್ಷಿಸಬಹುದು.

ಭಾರತ vs ಆಸ್ಟ್ರೇಲಿಯಾ 3ನೇ ಟೆಸ್ಟ್ ಪಂದ್ಯದ ಸಂಭಾವ್ಯ ಆಡುವ 11ರ ಬಳಗ
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಶ್ರೀಕರ್ ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

ಆಸ್ಟ್ರೇಲಿಯಾ ತಂಡ: ಮ್ಯಾಟ್ ರೆನ್ಶಾ, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶ್ಚಾಗ್ನೆ, ಸ್ಟೀವನ್ ಸ್ಮಿತ್ (ನಾಯಕ), ಟ್ರಾವಿಸ್ ಹೆಡ್, ಪೀಟರ್ ಹ್ಯಾಂಡ್ಸ್‌ಕಾಂಬ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಟಾಡ್ ಮರ್ಫಿ, ಲ್ಯಾನ್ಸ್ ಮಾರಿಸ್.

Story first published: Monday, February 27, 2023, 14:33 [IST]
Other articles published on Feb 27, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+