Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs AUS 3rd Test: ಸರಣಿ ನಿರ್ಣಾಯಕ ಪಂದ್ಯದಲ್ಲಿ ಉಭಯ ತಂಡಗಳ ಸಂಭಾವ್ಯ ಆಡುವ 11ರ ಬಳಗ

IND vs AUS 3rd Test: India vs Australia Probable Playing 11 In The Series Decider Match

ಬುಧವಾರ, ಮಾರ್ಚ್‌ 1ರಂದು ಇಂದೋರ್‌ನ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಪ್ರವಾಸಿ ಆಸ್ಟ್ರೇಲಿಯಾ ಮತ್ತು ಆತಿಥೇಯ ಭಾರತ ತಂಡಗಳ ನಡುವೆ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯ ಪ್ರಾರಂಭವಾಗಲಿದೆ.

ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಈಗಾಗಲೇ 2-0 ಅಂತರದಲ್ಲಿ ಮುನ್ನಡೆ ಸಾಧಿಸಿರುವುದರಿಂದ ಮೂರನೇ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳಲು ಎದುರು ನೋಡುತ್ತಿದೆ ಮತ್ತು ವಿಶ್ವ ಚಾಂಪಿಯನ್ಸ್ ಟ್ರೋಫಿ ಫೈನಲ್‌ಗೆ ಅರ್ಹತೆ ಪಡೆಯಲು ಈ ಪಂದ್ಯದ ಗೆಲುವು ಮಹತ್ವದ್ದಾಗಿದೆ.

ಭಾರತದ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯದ ನಡುವೆಯೂ ಮೂವರು ಆಲ್‌ರೌಂಡರ್‌ಗಳಾದ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಅದ್ಭುತ ಪ್ರದರ್ಶನ ತಮಡವನ್ನು ಗೆಲುವಿನತ್ತ ಕೊಂಡೊಯ್ಯುತ್ತಿದೆ.

IND vs AUS 3rd Test: India vs Australia Probable Playing 11 In The Series Decider Match

ಎರಡು ಪಂದ್ಯಗಳನ್ನು ಗೆದ್ದು ಹೆಚ್ಚು ಆತ್ಮವಿಶ್ವಾಸದಲ್ಲಿರುವ ಭಾರತ ತಂಡ ಪ್ರವಾಸಿ ಆಸ್ಟ್ರೇಲಿಯಾ ತಂಡವನ್ನು ಲಘುವಾಗಿ ಪರಿಗಣಿಸುವಂತಿಲ್ಲ. ಯಾವಾಗ ಬೇಕಾದರೂ ಕಾಂಗರೂ ಪಡೆ ಸಿಡಿದೇಳಬಹುದು. ನಾಯಕ ಪ್ಯಾಟ್ ಕಮಿನ್ಸ್ ಮತ್ತು ಸ್ಫೋಟಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಅನುಪಸ್ಥಿತಿಯ ನಡುವೆಯೂ ಆಸ್ಟ್ರೇಲಿಯಾ ತಂಡದಲ್ಲಿ ಸ್ಟೀವ್ ಸ್ಮಿತ್, ಮಾರ್ನಸ್ ಲ್ಯಾಬುಶ್ಚಾಗ್ನೆ ಮತ್ತು ನಾಥನ್ ಲಿಯಾನ್‌ರಂತಹ ಆಟಗಾರರು ಉತ್ತಮ ಪ್ರದರ್ಶನ ನೀಡಿದರೆ, ಭಾರತಕ್ಕೆ ಕಷ್ಟವಾಗಬಹುದು.

ಭಾರತ vs ಆಸ್ಟ್ರೇಲಿಯಾ ಮೂರನೆ ಟೆಸ್ಟ್ ಪಂದ್ಯದ ವಿವರ
ದಿನಾಂಕ ಮತ್ತು ಸಮಯ: ಭಾರತ vs ಆಸ್ಟ್ರೇಲಿಯಾ ಮೂರನೆ ಟೆಸ್ಟ್ ಪಂದ್ಯ ಬುಧವಾರ, ಮಾರ್ಚ್ 1ರ ಬೆಳಗ್ಗೆ 9.30ಕ್ಕೆ ಆರಂಭವಾಗಲಿದೆ.

ಸ್ಥಳ: ಭಾರತ vs ಆಸ್ಟ್ರೇಲಿಯಾ ಮೂರನೆ ಟೆಸ್ಟ್ ಪಂದ್ಯವು ಇಂದೋರ್‌ನ ಹೋಳ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಟಿವಿ ಮತ್ತು ಲೈವ್ ಸ್ಟ್ರೀಮಿಂಗ್: ಭಾರತ vs ಆಸ್ಟ್ರೇಲಿಯಾ ಮೂರನೆ ಟೆಸ್ಟ್ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮತ್ತು ಡಿಸ್ನಿ+ ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಿ ವೀಕ್ಷಿಸಬಹುದು.

IND vs AUS 3rd Test: India vs Australia Probable Playing 11 In The Series Decider Match


ಭಾರತ vs ಆಸ್ಟ್ರೇಲಿಯಾ ತಂಡಗಳ ಸಂಭಾವ್ಯ ಆಡುವ 11ರ ಬಳಗ
ಆಸ್ಟ್ರೇಲಿಯಾ: ಉಸ್ಮಾನ್ ಖವಾಜಾ, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಶ್ಚಾಗ್ನೆ, ಸ್ಟೀವ್ ಸ್ಮಿತ್ (ನಾಯಕ), ಕ್ಯಾಮರೂನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪೀಟರ್ ಹ್ಯಾಂಡ್ಸ್‌ಕಾಂಬ್, ಮಿಚೆಲ್ ಸ್ಟಾರ್ಕ್, ಮ್ಯಾಟ್ ಕುಹ್ನೆಮನ್, ನಾಥನ್ ಲಿಯಾನ್, ಟಾಡ್ ಮರ್ಫಿ.

ಭಾರತ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.

Story first published: Tuesday, February 28, 2023, 23:14 [IST]
Other articles published on Feb 28, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+