Ind vs Aus 3rd Test: 3ನೇ ಟೆಸ್ಟ್‌ನಿಂದ ಕೆಎಲ್ ರಾಹುಲ್ ಹೊರಕ್ಕೆ! ಈ ಆಟಗಾರನಿಗೆ ಸಿಗುತ್ತಾ ಅವಕಾಶ?

ಉಪನಾಯಕನ ಸ್ಥಾನವನ್ನು ಕಳೆದುಕೊಂಡ ನಂತರ ಕೆಎಲ್ ರಾಹುಲ್‌ಗೆ ಮತ್ತೊಂದು ಆಘಾತ ಎದುರಾಗಿದೆ. ಕಳಪೆ ಫಾರ್ಮ್‌ನಲ್ಲಿರುವ ಅವರು ಇಂದೋರ್ ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಬೆಂಚ್ ಕಾಯಲು ಸಿದ್ಧವಾಗಿದ್ದಾರೆ.
ಇಂದೋರ್ ನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯವನ್ನು ಗೆಲ್ಲುವುದು ಭಾರತಕ್ಕೆ ಮಹತ್ವದ್ದಾಗಿದೆ. 3ನೇ ಟೆಸ್ಟ್ ಪಂದ್ಯವನ್ನು ಗೆದ್ದರೆ ಭಾರತ ತಂಡ ನಾಲ್ಕನೇ ಟೆಸ್ಟ್ ಪಂದ್ಯವನ್ನು ಸೋತರೂ ಕೂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ನೇರವಾಗಿ ಅರ್ಹತೆ ಪಡೆದುಕೊಳ್ಳಲಿದೆ.
ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಮೂರನೇ ಟೆಸ್ಟ್ ಪಂದ್ಯದಲ್ಲಿ ಶುಭಮನ್ ಗಿಲ್‌ರನ್ನು ಆಯ್ಕೆಗೆ ಪರಿಗಣಿಸುವ ಸಾಧ್ಯತೆ ಹೆಚ್ಚಾಗಿದೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಬಳಿಕವೂ ಅವರನ್ನು ಕೂರಿಸಿ ರಾಹುಲ್‌ಗೆ ಅವಕಾಶ ನೀಡಲಾಗಿತ್ತು, ಆದರೆ, ಉಪನಾಯಕ ಕಳೆದ ಮೂರು ಇನ್ನಿಂಗ್ಸ್‌ಗಳಲ್ಲಿ ಕ್ರಮವಾಗಿ 20, 17 ಮತ್ತು 1 ರನ್ ಗಳಿಸಿ ಔಟಾಗಿದ್ದಾರೆ.
ಏಕದಿನ ಮಾದರಿಯಲ್ಲಿ ಅತ್ಯುತ್ತಮವಾಗಿ ಆಡಿದ್ದ ಶುಭಮನ್ ಗಿಲ್ ಇಂದೋರ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಇದಕ್ಕಾಗಿಯೇ ಕೊನೆಯ ಎರಡು ಪಂದ್ಯಗಳಿಗೆ ಪ್ರಕಟಿಸಲಾದ ಪಂದ್ಯದಲ್ಲಿ ಕೆಎಲ್ ರಾಹುಲ್‌ರನ್ನು ಉಪನಾಯಕ ಸ್ಥಾನದಿಂದ ತೆಗೆಯಲಾಗಿದೆ.

ಅಲುಗಾಡುತ್ತಿದೆ ಕೆಎಲ್ ರಾಹುಲ್ ಸ್ಥಾನ
ಕೆಎಲ್ ರಾಹುಲ್ ಪ್ರದರ್ಶನದ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾದ ಬಳಿಕ, ಶಿವಸುಂದರ್ ದಾಸ್ ನೇತೃತ್ವದ ಆಯ್ಕೆ ಸಮಿತಿ ರಾಹುಲ್‌ರನ್ನು ಉಪನಾಯಕ ಸ್ಥಾನದಿಂದ ತೆಗೆದಿದೆ. ದ್ರಾವಿಡ್ ಮತ್ತು ರೋಹಿತ್ ಶರ್ಮಾ ಕ್ಯಾಮೆರಾ ಎದುರು ರಾಹುಲ್‌ಗೆ ಬೆಂಬಲ ನೀಡಿದ್ದರೂ, ತಂಡದ ಹಿತದೃಷ್ಟಿಯಿಂದ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎನ್ನಲಾಗಿದೆ.
"ನಮ್ಮಿಂದ ಸಾಧ್ಯವಾದಷ್ಟು ಕೆಎಲ್ ರಾಹುಲ್‌ಗೆ ಬೆಂಬಲ ನೀಡುವ ಆಲೋಚನೆ ಇತ್ತು. ತಂಡದಲ್ಲಿ ರಾಹುಲ್ ಸ್ಥಾನ ಪ್ರಶ್ನಾರ್ಹ ಮತ್ತು ಅನಿಶ್ಚಿತವಾಗಿದೆ. ರಾಹುಲ್ ಈ ಮೊದಲು ವಿದೇಶಿ ನೆಲದಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಗೆಲ್ಲುವ ತಂಡದಲ್ಲಿ ಹೆಚ್ಚಿನ ಗೊಂದಲಕ್ಕೆ ಆಸ್ಪದ ನೀಡಬಾರದು ಎನ್ನುವ ಕಾರಣಕ್ಕೆ ರಾಹುಲ್‌ಗೆ ತಂಡದಲ್ಲಿ ಉಳಿಯಲು ಅವಕಾಶ ನೀಡಲಾಗಿದೆ" ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಇನ್‌ಸೈಡ್‌ಸ್ಪೋರ್ಟ್ ವರದಿ ಮಾಡಿದೆ.
ರಾಹುಲ್ ಮತ್ತು ರೋಹಿತ್ ತಂಡದಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದರೆ ಇಂದೋರ್ ನಲ್ಲಿ ನಾಯಕನ ಜೊತೆ ಶುಭಮನ್ ಗಿಲ್ ಇನ್ನಿಂಗ್ಸ್ ಆರಂಭಿಸುವುದು ಖಚಿತವಾಗಿದೆ.

ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲ
ಕೆಎಲ್ ರಾಹುಲ್ ತಾವು ಆಡಿರುವ ಕೊನೆಯ 10 ಇನ್ನಿಂಗ್ಸ್‌ಗಳಲ್ಲಿ ಕ್ರಮವಾಗಿ 8, 12, 10, 22, 23, 10, 2, 20, 17, 1 ರನ್ ಗಳಿಸಿದ್ದಾರೆ. 10 ಇನ್ನಿಂಗ್ಸ್‌ಗಳಲ್ಲಿ ಆಡಿದರೂ 30 ರನ್‌ಗಳ ಗಡಿ ದಾಟಲೂ ಸಾಧ್ಯವಾಗಿಲ್ಲ. ಕಳೆದ 12 ತಿಂಗಳಲ್ಲಿ ಅವರ ಸರಾಸರಿ 13.57 ಆಗಿದೆ. ರವಿಚಂದ್ರನ್ ಅಶ್ವಿನ್ 37.00 ಸರಾಸರಿ ಹೊಂದಿದ್ದರೆ, ಮೊಹಮ್ಮದ್ ಶಮಿ 21.80 ಸರಾಸರಿ ಹೊಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications