Ind vs Aus 3rd Test: 109 ರನ್‌ಗಳಿಗೆ ಟೀಮ್ ಇಂಡಿಯಾ ಆಲೌಟ್: ಭಾರತದ ಹೀನಾಯ ಪ್ರದರ್ಶನಕ್ಕೆ ಇದೇ ಕಾರಣ!

ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ ಹೀನಾಯ ಪ್ರದರ್ಶನ ನೀಡಿದೆ. ಕೇವಲ 109 ರನ್‌ಗಳಿಗೆ ಟೀಮ್ ಇಂಡಿಯಾದ ಬಲಿಷ್ಠ ಬ್ಯಾಟಿಂಗ್ ವಿಭಾಗ ಗಂಟುಮೂಟೆ ಕಟ್ಟಿದೆ. ಟಾಸ್ ಗೆದ್ದರೂ ಅದರ ಲಾಭವನ್ನು ಪಡೆಯುವಲ್ಲಿ ಟೀಮ್ ಇಂಡಿಯಾ ಸಂಪೂರ್ಣ ವಿಫಲವಾಗಿದ್ದು ಆಸಿಸ್ ಸ್ಪಿನ್ನರ್‌ಗಳ ದಾಳಿಗೆ ಅಲ್ಪ ಮೊತ್ತಕ್ಕೆ ಆಲೌಟ್ ಆಗುವ ಮೂಲಕ ಸಾಕಷ್ಟು ಟೀಕೆಗೆ ಗುರಿಯಾಗಿದೆ.
ಮೊದಲ ಎರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಟೀಮ್ ಇಂಡಿಯಾ ಇಂದೋರ್ ಟೆಸ್ಟ್‌ನಲ್ಲಿ ಇಂಥಾ ಪ್ರದರ್ಶನಕ್ಕೆ ಕಾರಣವೇನು? ಸ್ಪಿನ್ ಸ್ನೇಹಿ ಪಿಚ್‌ನಲ್ಲಿ ಆಸ್ಟ್ರೇಲಿಯಾ ಬೌಲರ್‌ಗಳ ದಾಳಿಗೆ ಟೀಮ್ ಇಂಡಿಯಾ ಹೀನಾಯ ಪ್ರದರ್ಶನ ನೀಡಿದ್ದು ಯಾಕೆ? ಟೀಮ್ ಇಂಡಿಯಾದ ಈ ಕಳಪೆ ಪ್ರದರ್ಶನಕ್ಕೆ ಕಾರಣವಾದ ಪ್ರಮುಖ ಮೂರು ಅಂಶಗಳು ಇಲ್ಲಿದೆ.

ಪಿಚ್ ಅರ್ಥೈಸಲು ವಿಫಲ
ಟೀಮ್ ಇಂಡಿಯಾ ಇಂದೋರ್ ಟೆಸ್ಟ್‌ನ ಪಿಚ್ಚನ್ನು ಅರ್ಥೈಸಿಕೊಳ್ಳಲು ವಿಫಲವಾಗಿದೆ. ಅರ್ಥ ಮಾಡಿಕೊಳ್ಳುವ ವೇಳೆಗಾಗಲೇ ಟೀಮ್ ಇಂಡಿಯಾ ಆಲೌಟ್ ಆಗಿತ್ತು ಎಂಬುದು ವಿಪರ್ಯಾಸ. ತಂಡದ ಯಾವುದೇ ಆಟಗಾರ ಕ್ರೀಸ್‌ನಲ್ಲಿ ಹೆಚ್ಚು ಹೊತ್ತು ನೆಲೆಯೂರಲು ಸಾಧ್ಯವಾಗಲಿಲ್ಲ. ಇಂದೋರ್‌ನ ಪಿಚ್‌ನ ಲಾಭವನ್ನು ಭಾರತದ ಬ್ಯಾಟರ್‌ಗಳಿಗಿಂತಲೂ ಆಸ್ಟ್ರೇಲಿಯಾದ ಬೌಲರ್‌ಗಳು ಅದ್ಭುತವಾಗಿ ನಿಭಾಯಿಸುವಲ್ಲಿ ಯಶಸ್ವಿಯಾದರು. ಹೀಗಾಗಿ ಟೀಮ್ ಇಂಡಿಯಾ ಮೇಲೆ ಒತ್ತಡ ಹೇರಿ ವಿಕೆಟ್ ಕಬಳಿಸುವಲ್ಲಿ ಆಸ್ಟ್ರೇಲಿಯಾ ಯಶಸ್ವಿಯಾಗಿದೆ.

ಆತುರಪಟ್ಟ ಬ್ಯಾಟಿಂಗ್ ವಿಭಾಗ, ಅತಿಯಾದ ಆತ್ಮವಿಶ್ವಾಸ
ಟೀಮ್ ಇಂಡಿಯಾದ ಬ್ಯಾಟಿಂಗ್ ವಿಭಾಗ ಇಂದೋರ್ ಟೆಸ್ಟ್‌ನಲ್ಲಿ ಆತುರಕ್ಕೆ ಒಳಪಟ್ಟು ವಿಕೆಟ್ ಕಳೆದುಕೊಂಡಿರುವುದು ಕೂಡ ಹಿನ್ನಡೆಗೆ ಕಾರಣವಾಗಿದೆ. ಸ್ವತಃ ನಾಯಕ ರೋಹಿತ್ ಶರ್ಮಾ ಅನಗತ್ಯ ಹೊಡೆತಕ್ಕೆ ಕೈಹಾಕಿ ವಿಕೆಟ್ ಕಳೆದುಕೊಂಡಿದ್ದಾರೆ. ಮೊದಲ ಓವರ್‌ನಲ್ಲಿಯೇ ಎರಡು ಜೀವದಾನ ಪಡೆದುಕೊಂಡರೂ ರೋಹಿತ್ ಶರ್ಮಾ ಅದನ್ನು ಸಮರ್ಥವಾಗಿ ಬಳಸಿಕೊಳ್ಳಲು ವಿಫಲವಾದರು. ಅಲ್ಲದೆ ಟೀಮ್ ಇಂಡಿಯಾ ಆಟಗಾರರ ಅತಿಯಾದ ಆತ್ಮವಿಶ್ವಾಸ ಕೂಡ ಈ ಪಂದ್ಯದ ಹಿನ್ನಡೆಗೆ ಕಾರಣವಾಗಿದೆ. ಮೊದಲ ಎರಡು ಪಂದ್ಯಗಳಲ್ಲಿ ಸುಲಭ ಗೆಲುವು ಸಾಧಿಸಿದ್ದ ಟೀಮ್ ಇಂಡಿಯಾ ಇಂದೋರ್ ಟೆಸ್ಟ್‌ಗೆ ಅತಿಯಾದ ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿದಿದ್ದರು. ಇದು ಕೂಡ ತಂಡದ ಹಿನ್ನಡೆಗೆ ಕಾರಣವಾಗಿದೆ.

ಆಸಿಸ್ ಸ್ಪಿನ್ನರ್‌ಗಳ ಶಿಸ್ತಿನ ಆಟ, ಸ್ಮಿತ್ ನಾಯಕತ್ವ
ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೂರನೇ ಪಂದ್ಯದ ಮೊದಲ ದಿನದ ಸಂಪೂರ್ಣ ಶ್ರೇಯಸ್ಸು ಆಸ್ಟ್ರೇಲಿಯಾದ ಸ್ಪಿನ್ ವಿಭಾಗಕ್ಕೆ ಸೇರುತ್ತದೆ. ಟಾಸ್ ಸೋತರು ಕೂಡ ಪಿಚ್‌ನ ಲಾಭವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಲ್ಲಿ ಯಶಸ್ವಿಯಾದರು. ಅದರಲ್ಲೂ ಸ್ಪಿನ್ನರ್ ಕನ್ನೇಮನ್ ಈ ಪಂದ್ಯದಲ್ಲಿ ಐದು ವಿಕೆಟ್‌ಗಳ ಗೊಂಚಲು ಪಡೆದಿದ್ದು ಅನುಭವಿ ನಾಥನ್ ಲಿಯಾನ್ 3 ವಿಎಕಟ್ ಸಂಪಾದಿಸಿದರು. ಇನ್ನು ಹಂಗಾಮಿ ನಾಯಕ ಸ್ಟೀವ್ ಸ್ಮಿತ್ ಇಂದೋರ್ ಪಿಚ್‌ನ ವರ್ತನೆಯನ್ನು ಶೀಘ್ರವಾಗಿ ಅರ್ಥೈಸಿಕೊಂಡು ಬೌಲರ್‌ಗಳನ್ನು ಪರಿಣಾಮಕಾರಿಯಾಗಿ ಬದಲಾಯಿಸಿಕೊಂಡು ಭಾರತದ ಮೇಲೆ ಒತ್ತಡ ಹೇರಿದ್ದಾರೆ. ಇದು ಕೂಡ ಟೀಮ್ ಇಂಡಿಯಾದ ಹಿನ್ನಡೆಗೆ ಕಾರಣವಾಯಿತು.
ಇತ್ತಂಡಗಳ ಸ್ಕ್ವಾಡ್
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಶ್ರೀಕರ್ ಭರತ್ (WK), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್
ಬೆಂಚ್: ಕೆಎಲ್ ರಾಹುಲ್, ಮೊಹಮ್ಮದ್ ಶಮಿ, ಇಶಾನ್ ಕಿಶನ್, ಕುಲದೀಪ್ ಯಾದವ್, ಸೂರ್ಯಕುಮಾರ್ ಯಾದವ್, ಜಯದೇವ್ ಉನದ್ಕತ್
ಆಸ್ಟ್ರೇಲಿಯಾ: ಉಸ್ಮಾನ್ ಖವಾಜಾ, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (WK), ಮಿಚೆಲ್ ಸ್ಟಾರ್ಕ್, ಅಥಾನ್ ಲಿಯಾನ್, ಟಾಡ್ ಮರ್ಫಿ, ಮ್ಯಾಥ್ಯೂ ಕನ್ನೇಮನ್
ಬೆಂಚ್: ಮಿಚೆಲ್ ಸ್ವೆಪ್ಸನ್, ಮ್ಯಾಟ್ ರೆನ್ಶಾ, ಸ್ಕಾಟ್ ಬೋಲ್ಯಾಂಡ್, ಲ್ಯಾನ್ಸ್ ಮೋರಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications