IND vs AUS 3rd Test: ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿ, ರವಿಶಾಸ್ತ್ರಿ ಹಿಂದಿಕ್ಕಿದ ಉಮೇಶ್ ಯಾದವ್!

ಪ್ರವಾಸಿ ಆಸ್ಟ್ರೇಲಿಯಾ ಮತ್ತು ಭಾರತ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯ ಬುಧವಾರ, ಮಾರ್ಚ್ 1ರಂದು ಇಂದೋರ್‌ನಲ್ಲಿ ಆರಂಭವಾಗಿದ್ದು, ಆತಿಥೇಯ ಭಾರತೀಯ ಬ್ಯಾಟ್ಸ್‌ಮನ್‌ಗಳು ನಿರಾಶಾದಾಯಕ ಪ್ರದರ್ಶನ ನೀಡಿದ್ದರಿಂದ ಮೊದಲ ಇನ್ನಿಂಗ್ಸ್‌ನಲ್ಲಿ ಸಾಧಾರಣ ಮೊತ್ತ ಕಲೆಹಾಕಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು ಆಸ್ಟ್ರೇಲಿಯಾ ಸ್ಪಿನ್ನರ್‌ಗಳಾದ ಮ್ಯಾಥ್ಯೂ ಕುಹ್ನೆಮನ್, ನಾಥನ್ ಲಿಯಾನ್ ಮತ್ತು ಟಾಡ್ ಮರ್ಫಿ ಸ್ಪಿನ್ ಬಲೆಗೆ ಸಿಲುಕಿ ಮೊದಲ ಇನ್ನಿಂಗ್ಸ್‌ನಲ್ಲಿ 33.2 ಓವರ್‌ಗಳಲ್ಲಿ 109 ರನ್‌ಗಳಿಗೆ ಅಲೌಟ್ ಆಯಿತು.
ನಂತರ ಮೊದಲ ಇನ್ನಿಂಗ್ಸ್ ಆರಂಭಿಸಿದ ಪ್ರವಾಸಿ ಆಸ್ಟ್ರೇಲಿಯಾ ತಂಡವು ಮೊದಲ ದಿನದಂತ್ಯಕ್ಕೆ 54 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 156 ರನ್ ಗಳಿಸಿ, 47 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ.
ಇದಕ್ಕೂ ಮುನ್ನ ಭಾರತದ ಬ್ಯಾಟಿಂಗ್ ಇನ್ನಿಂಗ್ಸ್‌ನಲ್ಲಿ ಉಮೇಶ್ ಯಾದವ್ ತಮ್ಮ ಹೆಸರಿಗೆ ಒಂದು ದೊಡ್ಡ ದಾಖಲೆ ಸೇರ್ಪಡೆಗೊಳಿಸಿಕೊಂಡರು.

ಆಸೀಸ್ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಅವರ ಬೌಲಿಂಗ್‌ನಲ್ಲಿ ಎರಡು ಭರ್ಜರಿ ಸಿಕ್ಸರ್ ಬಾರಿಸಿ ಟೆಸ್ಟ್ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಅವರ 24 ಸಿಕ್ಸರ್‌ಗಳ ಸಂಖ್ಯೆಯನ್ನು ಸರಿಗಟ್ಟಿದರು.
ಇದೇ ವೇಳೆ ಉಮೇಶ್ ಯಾದವ್ ಅವರು ಭಾರತದ ಮಾಜಿ ಬ್ಯಾಟ್ಸ್‌ಮನ್ ಹಾಗೂ ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಅವರ ಟೆಸ್ಟ್ ಕ್ರಿಕೆಟ್‌ನ 22 ಸಿಕ್ಸರ್‌ಗಳ ದಾಖಲೆಯನ್ನು ಮೀರಿದರು. ಪ್ರಸ್ತುತ ಅತಿ ಹೆಚ್ಚು ಟೆಸ್ಟ್ ಕ್ರಿಕೆಟ್‌ನ ಸಿಕ್ಸರ್‌ಗಳನ್ನು ಬಾರಿಸಿದ ಭಾರತೀಯ ಕ್ರಿಕೆಟಿಗರ ಪಟ್ಟಿಯಲ್ಲಿ 17ನೇ ಸ್ಥಾನದಲ್ಲಿದ್ದಾರೆ.
ಮಾಜಿ ಬ್ಯಾಟರ್ ವೀರೇಂದ್ರ ಸೆಹ್ವಾಗ್ 91 ಸಿಕ್ಸರ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಮಾಜಿ ನಾಯಕ ಎಂಎಸ್ ಧೋನಿ 78 ಸಿಕ್ಸರ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.
IND vs AUS 3rd Test: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈ ಸಾಧನೆಗೈದ ಎರಡನೇ ಭಾರತೀಯ ರವೀಂದ್ರ ಜಡೇಜಾ
ಇನ್ನು ಮೂರನೇ ಪಂದ್ಯದ ಕುರಿತಾಗಿ ಹೇಳುವುದಾದರೆ, ಆಸ್ಟ್ರೇಲಿಯಾ ತಂಡದ ಪರ ಬೌಲಿಂಗ್‌ನಲ್ಲಿ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ಚೊಚ್ಚಲ ಐದು ವಿಕೆಟ್ ಗೊಂಚಲು ಸಾಧನೆ ಮಾಡಿದರು. 9 ಓವರ್ ಬೌಲಿಂಗ್‌ನಲ್ಲಿ 16 ರನ್ ನೀಡಿ 5 ವಿಕೆಟ್ ಪಡೆದು ಭಾರತದ ಬ್ಯಾಟಿಂಗ್ ಬಲವನ್ನು ಮುರಿದರು.
ಇನ್ನುಳಿದಂತೆ ಆಫ್ ಸ್ಪಿನ್ನರ್ ನಾಥನ್ ಲಿಯಾನ್ 11.2 ಓವರ್‌ಗಳಲ್ಲಿ 35 ರನ್ ನೀಡಿ 3 ವಿಕೆಟ್ ಕಿತ್ತರು. ಮತ್ತೊಬ್ಬ ಸ್ಪಿನ್ನರ್ ಟಾಡ್ ಮರ್ಫಿ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications