Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs AUS 4th Test: ತಮ್ಮ ದಾಖಲೆ ಮುರಿದ ರವಿಚಂದ್ರನ್ ಅಶ್ವಿನ್ ಕುರಿತು ಅನಿಲ್ ಕುಂಬ್ಳೆ ಪ್ರತಿಕ್ರಿಯೆ

IND vs AUS 4th Test: Anil Kumbles Reaction To Ravichandran Ashwin Breaking His Record In Test Cricket

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಭಾರತದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ 91 ರನ್‌ಗಳಿಗೆ 6 ವಿಕೆಟ್ ಕಬಳಿಸುವ ಮೂಲಕ ತಂಡದ ಪರ ಅತ್ಯುತ್ತಮ ಪ್ರದರ್ಶನ ನೀಡಿದರು ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೊಂದು ದಾಖಲೆ ಸ್ಥಾಪಿಸಿದರು.

ರವಿಚಂದ್ರನ್ ಅಶ್ವಿನ್ ಅವರು ತಮ್ಮ ನೆಚ್ಚಿನ ಎದುರಾಳಿ ಆಸ್ಟ್ರೇಲಿಯಾ ತಂಡದ ವಿರುದ್ಧ ಮತ್ತೊಮ್ಮೆ 6 ವಿಕೆಟ್ ಕಬಳಿಸುವ ಮೂಲಕ ಆಸ್ಟ್ರೇಲಿಯಾದ ಬ್ಯಾಟಿಂಗ್ ಲೈನ್‌ಅಪ್‌ಗೆ ಮಾರಕವಾಗಿ ಪರಿಣಮಿಸಿದರು. ಅನುಭವಿ ಆಫ್ ಸ್ಪಿನ್ನರ್ ಇದೀಗ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ 28.1 ಸರಾಸರಿಯೊಂದಿಗೆ 113 ವಿಕೆಟ್‌ಗಳನ್ನು ಪಡೆದಿದ್ದಾರೆ.

ಆಸ್ಟ್ರೇಲಿಯಾದ ಟಾಡ್ ಮರ್ಫಿ ಅವರ ವಿಕೆಟ್‌ ಪಡೆಯುವುದರೊಂದಿಗೆ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೊಂದು ಐದು ವಿಕೆಟ್ ಗೊಂಚಲು ಪಡೆದರು. ಅಲ್ಲದೇ ಟೆಸ್ಟ್‌ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡಕ್ಕಾಗಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆಯುವ ಮೂಲಕ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಸಾಧನೆಯನ್ನು ಮೀರಿಸಿದರು.

IND vs AUS 4th Test: Anil Kumbles Reaction To Ravichandran Ashwin Breaking His Record In Test Cricket

ನವೆಂಬರ್ 2008ರಲ್ಲಿ ಅನಿಲ್ ಕುಂಬ್ಳೆ ಅವರು ಆಸ್ಟ್ರೇಲಿಯಾ ವಿರುದ್ಧ 2008-09 ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಎರಡು ಟೆಸ್ಟ್‌ ಪಂದ್ಯಗಳನ್ನು ಆಡಿದ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದರು.

ಆವರೆಗೆ ಬೌಲಿಂಗ್ ಲೆಜೆಂಡ್ ಆಸ್ಟ್ರೇಲಿಯಾ ವಿರುದ್ಧದ 20 ಟೆಸ್ಟ್‌ ಪಂದ್ಯಗಳ 38 ಇನ್ನಿಂಗ್ಸ್‌ಗಳಲ್ಲಿ 111 ವಿಕೆಟ್‌ಗಳನ್ನು ಪಡೆಯುವ ಮೂಲಕ ತಮ್ಮ ವೃತ್ತಿಜೀವನವನ್ನು ಕೊನೆಗೊಳಿಸಿದ್ದರು.

ಇದೀಗ ರವಿಚಂದ್ರನ್ ಅಶ್ವಿನ್ ಅವರು ಅನಿಲ್ ಕುಂಬ್ಳೆ ಅವರನ್ನು ಹಿಂದಿಕ್ಕಿ ಆಸ್ಟ್ರೇಲಿಯಾ ವಿರುದ್ಧ ಭಾರತದ ಪರ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. 36 ವರ್ಷದ ಅಶ್ವಿನ್ ಇದುವರೆಗೆ 22 ಟೆಸ್ಟ್‌ಗಳ 41 ಇನ್ನಿಂಗ್ಸ್‌ಗಳಲ್ಲಿ 113 ವಿಕೆಟ್‌ಗಳನ್ನು ಪಡೆದಿದ್ದಾರೆ.

IND vs AUS 4th Test: Anil Kumbles Reaction To Ravichandran Ashwin Breaking His Record In Test Cricket


ಭಾರತದ ದಿಗ್ಗಜ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರು ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯ ವಿರುದ್ಧ ರವಿಚಂದ್ರನ್ ಅಶ್ವಿನ್ ಅವರ ಅದ್ಭುತ ಪ್ರದರ್ಶನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, 'ಚೆನ್ನಾಗಿ ಬೌಲಿಂಗ್ ಮಾಡಿದೆ ರವಿಚಂದ್ರನ್ ಅಶ್ವಿನ್, ಕ್ಲಾಸ್ ಆಗಿತ್ತು!' ಎಂದು ಅನಿಲ್ ಕುಂಬ್ಳೆ ಟ್ವೀಟ್ ಮಾಡಿದ್ದಾರೆ.

ಇನ್ನು ಇಲ್ಲಿಯವರೆಗೆ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾದ ನಾಥನ್ ಲಿಯಾನ್ 26 ಟೆಸ್ಟ್‌ಗಳ 47 ಇನ್ನಿಂಗ್ಸ್‌ಗಳಲ್ಲಿ 113 ವಿಕೆಟ್ ಪಡೆದಿದ್ದು, ರವಿಚಂದ್ರನ್ ಅಶ್ವಿನ್ ಮತ್ತು ಲಿಯಾನ್ ಇಬ್ಬರೂ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ತಮ್ಮ ತಂಡಗಳ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ.

ಸದ್ಯ ನಡೆಯುತ್ತಿರುವ ಸರಣಿಯ ನಾಲ್ಕು ಪಂದ್ಯಗಳ ಏಳು ಇನ್ನಿಂಗ್ಸ್‌ಗಳಲ್ಲಿ 24 ವಿಕೆಟ್‌ಗಳೊಂದಿಗೆ ರವಿಚಂದ್ರನ್ ಅಶ್ವಿನ್ ಅತಿ ಹೆಚ್ಚು ವಿಕೆಟ್‌ಗಳೊಂದಿಗೆ ಬೌಲರ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಭಾರತ vs ಆಸ್ಟ್ರೇಲಿಯಾ 4ನೇ ಟೆಸ್ಟ್‌ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಮುರಿದ ದಾಖಲೆಗಳು
ಭಾರತದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಐದು ವಿಕೆಟ್ ಗೊಂಚಲು ಪಡೆದ ಬೌಲರ್

ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಭಾರತೀಯ ಬೌಲರ್‌ನಿಂದ ಅತಿ ಹೆಚ್ಚು ವಿಕೆಟ್ ಗಳಿಕೆ.

ಭಾರತ ಮತ್ತು ಆಸ್ಟ್ರೇಲಿಯಾ ಟೆಸ್ಟ್‌ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ನಾಥನ್ ಲಿಯಾನ್ ಜೊತೆ ರವಿಚಂದ್ರನ್ ಅಶ್ವಿನ್ ಸೇರಿಕೊಂಡರು.

Story first published: Friday, March 10, 2023, 22:59 [IST]
Other articles published on Mar 10, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+