BGT 2023: ಸರಣಿಯ ಅತ್ಯಂತ ಕೆಟ್ಟ DRS ಪಡೆದ ಭಾರತ: ವಿಚಿತ್ರ ನಿರ್ಧಾರಕ್ಕೆ ಅಭಿಮಾನಿಗಳ ಪ್ರಶ್ನೆ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಅಹ್ಮದಾಬಾದ್‌ನ ಮೊಟೆರಾ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲ ಎರಡು ದಿನಗಳಲ್ಲಿ ಆಸ್ಟ್ರೇಲಿಯಾ ತಂಡ ಭರ್ಜರಿ ಮುನ್ನಡೆ ಸಾಧಿಸಿದ್ದು ಟೀಮ್ ಇಂಡಿಯಾ ಹಿನ್ನಡೆ ಕಂಡಿದೆ. ಆಸ್ಟ್ರೇಲಿಯಾ ಪರವಾಗಿ ಅನುಭವಿ ಆಟಗಾರ ಉಸ್ಮಾನ್ ಖವಾಜ ಸ್ಮರಣೀಯ ಇನ್ನಿಂಗ್ಸ್ ಆಡಿದ್ದು ಬರೊಬ್ಬರಿ 422 ಎಸೆತ ಎದುರಿಸಿ ಭರ್ಜರಿ 180 ರನ್‌ಗಳಿಸಿ ವಿಕೆಟ್ ಕಳೆದುಕೊಂಡಿದ್ದಾರೆ. ಕ್ಯಾಮರೂನ್ ಗ್ರೀನ್ ಕೂಡ ಅಮೋಘ ಪ್ರದರ್ಶನ ನೀಡಿದ್ದು ಶತಕ ಸಿಡಿಸಿದರು.
ಉಸ್ಮಾನ್ ಖವಾಜ ಹಾಗೂ ಕ್ಯಾಮರೂನ್ ಗ್ರೀನ್ ಜೋಡಿ ಭಾರತ ತಂಡದ ಬೌಲರ್‌ಗಳನ್ನು ಇನ್ನಿಲ್ಲದಂತೆ ಕಾಡಿದ್ದಾರೆ. ಈ ಜೋಡಿ ದ್ವಿಶತಕದ ಜೊತೆಯಾಟ ನೀಡುವ ಮೂಲಕ ಆಸ್ಟ್ರೇಲಿಯಾ ತಂಡ ಈ ಪಂದ್ಯದಲ್ಲಿ ಬೃಹತ್ ಮೊತ್ತ ಗಳಿಸಲು ಕಾರಣವಾದರು. ಈ ಜೋಡಿಯನ್ನು ಬೇರ್ಪಡಿಸಲು ಭಾರತದ ಬೌಲರ್‌ಗಳು ಮಾಡಿದ ಎಲ್ಲಾ ಪ್ರಯತ್ನಗಳು ವಿಫಲವಾದವು. ಹೀಗಾಗಿ ಹತಾಶರಾದ ಟೀಮ್ ಇಂಡಿಯಾದ ಬೌಲರ್‌ಗಳು 128ನೇ ಓವರ್‌ನಲ್ಲಿ ಮೊದಲ ಡಿಆರ್‌ಎಸ್ ಮನವಿ ಸಲ್ಲಿಸಿತು.
ರವೀಂದ್ರ ಜಡೇಜಾ ಎಸೆದ ಈ ಓವರ್‌ನಲ್ಲಿ ಉಸ್ಮಾನ್ ಖವಾಜಾ ಚೆಂಡು ಎದುರಿಸುತ್ತಿದ್ದರು. ಈ ಸಂದರ್ಭದಲ್ಲಿ ಜಡ್ಡು ಎಸೆತವನ್ನು ಕಾಲನ್ನು ಮುಂದಕ್ಕಿಟ್ಟು ರಕ್ಷಣಾತ್ಮಕ ಆಟಕ್ಕೆ ಮುಂದಾದರು ಖವಾಜ. ಅದರೆ ಚೆಂಡು ಪ್ಯಾಡ್‌ಗೆ ಬಡಿಯದೆ ಝವಾಜ ಅವರ ಭುಜಕ್ಕೆ ಬಡಿಯಿತು. ಈ ಸಂದರ್ಭದಲ್ಲಿ ಬೌಲರ್ ರವೀಂದ್ರ ಜಡೇಜಾ ಹಾಗೂ ವಿಕೆಟ್ ಕೀಪರ್ ಕೆಎಸ್ ಭರತ್ ಇಬ್ಬರು ಕೂಡ ಬಲವಾಗಿ ಮನವಿ ಮಾಡಿದರು. ಅಂಪೈರ್ ನಾಟೌಟ್ ಎಂದಾದ ನಾಯಕ ರೋಹಿತ್ ಶರ್ಮಾ ಮನವೊಲಿಸಿ ಡಿಆರ್‌ಎಸ್‌ಗೆ ಮೊರೆಹೋಗಲಾಯಿತು.
ಆದರೆ ಡಿಆರ್‌ಎಸ್ ಪರಿಶೀಲನೆಯಲ್ಲಿ ಈ ಚೆಂಡು ವಿಕೆಟ್‌ನ ಸನಿಹದಲ್ಲೇ ಇಲ್ಲ ಎನ್ನುವುದು ಸ್ಪಷ್ಟವಾಗಿತ್ತು. ಹೀಗಾಗಿ ಭಾರತ ತನ್ನ ಒಂದು ಡಿಆರ್‌ಎಸ್ ಕಳೆದುಕೊಂಡಿತು. ಚೆಂಡು ಬರಿಗಣ್ಣಿನಲ್ಲೇ ವಿಕೆಟ್‌ನ ಸನಿಹದಲ್ಲಿ ಇಲ್ಲ ಎಂಬುದು ಸ್ಪಷ್ಟವಾಗುತ್ತಿದ್ದರೂ ವಿಕೆಟ್ ಪಡೆಯದ ಹತಾಶೆಯಲ್ಲಿ ಡಿಆರ್‌ಎಸ್ ಮೊರೆಹೋಗಿತ್ತು ಟೀಮ್ ಇಂಡಿಯಾ. ಆದರೆ ತಂಡದ ಈ ನಿರ್ಧಾರವನ್ನು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸುತ್ತಿದ್ದಾರೆ.
ಇನ್ನು ಬಳಿಕ ಭಾರತ ಆಸಿಸ್ ಆಲ್‌ರೌಂಡರ್ ಕ್ಯಾಮರೂನ್ ಗ್ರೀನ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಯಿತು. 170 ಎಸೆತ ಎದುರಿಸಿದ ಗ್ರೀನ್ 114 ರನ್‌ಗಳಿಸಿ ವಿಕೆಟ್ ಕಳೆದುಕೊಂಡರು. ನಂತರ ಅಲೆಕ್ಸ್ ಕ್ಯಾರಿ ಹಾಗೂ ಮಿಚೆಲ್ ಸ್ಟಾರ್ಕ್ ಕೂಡ ಅಗ್ಗಕ್ಕೆ ವಿಕೆಟ್ ಕಳೆದುಕೊಂಡರು. ಬಳಿಕ 180 ರನ್‌ಗಳಿಸಿ ದ್ವಿಶತಕದತ್ತ ಮುನ್ನುಗ್ಗುತ್ತಿದ್ದ ಉಸ್ಮಾನ್ ಖವಾಜಾ ಅಕ್ಷರ್ ಪಟೇಲ್ ಎಸೆತದಲ್ಲಿ ಎಲ್‌ಬಿಡಬ್ಲ್ಯು ಬಲೆಗೆ ಬಿದ್ದಿದ್ದಾರೆ.
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಶಮಿ
ಬೆಂಚ್: ಮೊಹಮ್ಮದ್ ಸಿರಾಜ್, ಕೆಎಲ್ ರಾಹುಲ್, ಇಶಾನ್ ಕಿಶನ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಕುಲದೀಪ್ ಯಾದವ್
ಆಸ್ಟ್ರೇಲಿಯಾ ಆಡುವ ಬಳಗ: ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಮ್ಯಾಥ್ಯೂ ಕನ್ನೇಮನ್, ಟಾಡ್ ಮರ್ಫಿ, ನಾಥನ್ ಲಿಯಾನ್
ಬೆಂಚ್: ಸ್ಕಾಟ್ ಬೋಲ್ಯಾಂಡ್, ಮ್ಯಾಟ್ ರೆನ್ಶಾ, ಮಿಚೆಲ್ ಸ್ವೆಪ್ಸನ್, ಲ್ಯಾನ್ಸ್ ಮೋರಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications