Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind Vs Aus 4th Test: ಉಸ್ಮಾನ್ ಖವಾಜಾ ಭರ್ಜರಿ ಶತಕ: ಮೊದಲ ದಿನ ಉತ್ತಮ ರನ್ ಕಲೆಹಾಕಿದ ಆಸ್ಟ್ರೇಲಿಯಾ

Ind Vs Aus 4th Test: Khawaja Scored An Unbeaten Century, Powering Australia To A Score Of 255 Runs

ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ 4ನೇ ಟೆಸ್ಟ್‌ನ ಮೊದಲ ದಿನ ಆಸ್ಟ್ರೇಲಿಯಾ ಮೇಲುಗೈ ಸಾಧಿಸಿದೆ. ಮೊದಲ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿದೆ. ಆರಂಭಿಕ ಬ್ಯಾಟರ್ ಉಸ್ಮಾನ್ ಖವಾಜಾ ಅಜೇಯ ಶತಕ ಗಳಿಸುವ ಮೂಲಕ ಮಿಂಚಿದರು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿತು. ಆರಂಭಿಕ ಟ್ರಾವಿಸ್ ಹೆಡ್ ಉಮೇಶ್ ಯಾದವ್‌ ಬೌಲಿಂಗ್‌ನಲ್ಲಿ ಜೀವದಾನ ಪಡೆದರು ದೊಡ್ಡ ಮೊತ್ತ ಗಳಿಸಲು ಸಾಧ್ಯವಾಗಲಿಲ್ಲ, 32 ರನ್ ಗಳಿಸಿದ ಅವರು ಅಶ್ವಿನ್‌ ಬೌಲಿಂಗ್‌ನಲ್ಲಿ ಜಡೇಜಾಗೆ ಕ್ಯಾಚ್ ನೀಡಿ ಔಟಾದರು.

ನಂತರ ಬಂದ ಮಾರ್ನಸ್ ಲ್ಯಾಬುಸ್ಚಾಗ್ನೆ 3 ರನ್ ಗಳಿಸಿದ್ದಾಗ ಶಮಿಗೆ ಬೌಲ್ಡ್ ಆಗುವ ಮೂಲಕ ಪೆವಿಲಿಯನ್ ಸೇರಿಕೊಂಡರು. ನಾಯಕ ಸ್ಟೀವ್ ಸ್ಮಿತ್ ಖವಾಜಾ ಜೊತೆಗೂಡಿ ಉತ್ತಮ ಜೊತೆಯಾಟ ಆಡಿದರು. ಈ ಜೋಡಿ 3ನೇ ವಿಕೆಟ್‌ಗೆ 79 ರನ್‌ಗಳನ್ನು ಕಲೆಹಾಕಿದರು. ಸ್ಟೀವ್ ಸ್ಮಿತ್ 38 ರನ್ ಗಳಿಸಿದ್ದಾಗ ಜಡೇಜಾ ಬೌಲಿಂಗ್‌ನಲ್ಲಿ ಔಟಾದರು.

ಪೀಟರ್ ಹ್ಯಾಂಡ್ಸ್‌ಕಾಂಬ್ 17 ರನ್ ಗಳಿಸಿದ್ದಾಗ ಶಮಿ ಕ್ಲೀನ್ ಬೌಲ್ಡ್‌ ಮಾಡುವ ಮೂಲಕ ಅವರನ್ನು ವಾಪಸ್ ಕಳುಹಿಸಿದರು. ಇದರ ನಂತರ ಆಸ್ಟ್ರೇಲಿಯಾ ಯಾವುದೇ ವಿಕೆಟ್ ಕಳೆದುಕೊಳ್ಳದೆ ಕೊನೆಯವರೆಗೂ ಬ್ಯಾಟಿಂಗ್ ಮಾಡಿತು. ಖವಾಜಾ ಮತ್ತು ಕ್ರಿಸ್ ಗ್ರೀನ್ ದಿನದಾಟದ ಕೊನೆಯಲ್ಲಿ ಉತ್ತಮವಾಗಿ ರನ್ ಗಳಿಸಿದರು.

ಉಸ್ಮಾನ್ ಖವಾಜಾ ಶತಕದ ಆಸರೆ

ಉಸ್ಮಾನ್ ಖವಾಜಾ ಶತಕದ ಆಸರೆ

ಆರಂಭದಲ್ಲಿ ನಿಧಾನಗತಿಯಲ್ಲಿ ಬ್ಯಾಟಿಂಗ್ ಆರಂಭಿಸಿದ ಖವಾಜಾ ದಿನಪೂರ್ತಿ ಎಚ್ಚರಿಕೆಯಿಂದ ಆಡಿದರು. 251 ಎಸೆತಗಳನ್ನು ಎದುರಿಸಿದ ಅವರು 15 ಬೌಂಡರಿ ಸಹಿತ ಅಜೇಯ 104 ರನ್ ಗಳಿಸಿದ್ದು ಎರಡನೇ ದಿನಕ್ಕೆ ವಿಕೆಟ್ ಕಾಯ್ದುಕೊಂಡಿದ್ದಾರೆ. ಆಸ್ಟ್ರೇಲಿಯಾದ ಸ್ಟಾರ್ ಆಲ್‌ರೌಂಡರ್ ಕ್ಯಾಮೆರಾನ್ ಗ್ರೀನ್‌ ಖವಾಜಾಗೆ ಉತ್ತಮವಾಗಿ ಜೊತೆಯಾದರು.

ಈ ಜೋಡಿ 5ನೇ ವಿಕೆಟ್‌ಗೆ ಅಜೇಯ 85 ರನ್ ಕಲೆಹಾಕಿದೆ. ಕ್ಯಾಮೆರಾನ್ ಗ್ರೀನ್ 64 ಎಸೆತಗಳಲ್ಲಿ 8 ಬೌಂಡರಿ ಸಹಿತ ಅಜೇಯ 49 ರನ್ ಗಳಿಸಿದ್ದು, ಎರಡನೇ ದಿನಕ್ಕೆ ವಿಕೆಟ್ ಉಳಿಸಿಕೊಂಡಿದ್ದಾರೆ. ಭಾರತದ ಪರವಾಗಿ ಮೊಹಮ್ಮದ್ ಶಮಿ ಎರಡು ವಿಕೆಟ್ ಪಡೆದರೆ, ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ತಲಾ ಒಂದು ವಿಕೆಟ್ ಪಡೆದರು.

ಭಾರತಕ್ಕೆ ಗೆಲ್ಲಲೇಬೇಕಾದ ಪಂದ್ಯ

ಭಾರತಕ್ಕೆ ಗೆಲ್ಲಲೇಬೇಕಾದ ಪಂದ್ಯ

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ಗೆ ನೇರವಾಗಿ ಅರ್ಹತೆ ಪಡೆಯಬೇಕಾದರೆ ಭಾರತ ಈ ಪಂದ್ಯವನ್ನು ಗೆಲ್ಲಲೇಬೇಕಾಗಿದೆ. ಈ ಪಂದ್ಯವನ್ನು ಗೆದ್ದರೆ ಭಾರತ ಐಸಿಸಿ ರ್‍ಯಾಂಕಿಂಗ್‌ನಲ್ಲಿ ನಂಬರ್ 1 ತಂಡವಾಗಲಿದೆ. ಸರಣಿಯಲ್ಲಿ 3-1 ಅಂತರದಲ್ಲಿ ಗೆಲುವು ಸಾಧಿಸಲಿದೆ.

ಎರಡನೇ ದಿನ ಬೇಗನೆ ವಿಕೆಟ್ ಪಡೆದರೆ ಮಾತ್ರ ಭಾರತ ಪಂದ್ಯದಲ್ಲಿ ವಾಪಸಾತಿ ಮಾಡಬಹುದು. ಇಲ್ಲವಾದಲ್ಲಿ ಭಾರತ ಈ ಪಂದ್ಯವನ್ನು ಗೆಲ್ಲುವುದು ಕಷ್ಟವಾಗಲಿದೆ. ಎರಡನೇ ದಿನದಲ್ಲಿ ಮತ್ತಷ್ಟು ರನ್ ಗಳಿಸಿದ ಆಸ್ಟ್ರೇಲಿಯಾ ಡಿಕ್ಲೇರ್ ಮಾಡಿಕೊಳ್ಳುವ ಯೋಚನೆ ಕೂಡ ಮಾಡಬಹುದು.

ಭಾರತ, ಆಸ್ಟ್ರೇಲಿಯಾ ಪ್ಲೇಯಿಂಗ್ XI

ಭಾರತ, ಆಸ್ಟ್ರೇಲಿಯಾ ಪ್ಲೇಯಿಂಗ್ XI

ಭಾರತ: ರೋಹಿತ್ ಶರ್ಮಾ(ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್(ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಉಮೇಶ್ ಯಾದವ್.

ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವನ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೆರಾನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ಮ್ಯಾಥ್ಯೂ ಕುಹ್ನೆಮನ್, ನಾಥನ್ ಲಿಯಾನ್.

Story first published: Thursday, March 9, 2023, 17:04 [IST]
Other articles published on Mar 9, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+