Ind Vs Aus 4th Test: ಟೆಸ್ಟ್ ಕ್ರಿಕೆಟ್‌ನಲ್ಲಿ ಶುಭಮನ್ ಗಿಲ್ ಎರಡನೇ ಶತಕ: ಉತ್ತಮ ಸ್ಥಿತಿಯಲ್ಲಿ ಭಾರತ

ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ 4ನೇ ಟೆಸ್ಟ್‌ನಲ್ಲಿ ಶುಭಮನ್ ಗಿಲ್ ಶತಕ ಬಾರಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಶುಭಮನ್ ಗಿಲ್ ಎರಡನೇ ಶತಕ ಬಾರಿಸಿದ್ದು, ಸದ್ಯ ಭಾರತ ಉತ್ತಮ ಪರಿಸ್ಥಿತಿಯಲ್ಲಿದೆ.
ಎರಡನೇ ದಿನದಾಟದ ಅಂತ್ಯಕ್ಕೆ ತಮ್ಮ ಮೊದಲ ಇನ್ನಿಂಗ್ಸ್‌ನಲ್ಲಿ 35 ರನ್ ಗಳಿಸಿದ್ದ ಭಾರತ ಮೂರನೇ ದಿನ ಉತ್ತಮ ಆರಂಭ ಪಡೆದುಕೊಂಡಿತು. ಮೊದಲನೇ ವಿಕೆಟ್‌ಗೆ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ 74 ರನ್ ಗಳಿಸಿದರು. 35 ರನ್ ಗಳಿಸಿದ್ದ ರೋಹಿತ್ ಶರ್ಮಾ ಕುಹ್ನೆಮನ್ ಬೌಲಿಂಗ್‌ನಲ್ಲಿ ಲ್ಯಾಬುಸ್ಚಾಗ್ನೆಗೆ ಕ್ಯಾಚ್ ನೀಡಿ ಔಟಾದರು.
ನಂತರ ಶುಭಮನ್ ಗಿಲ್ ಮತ್ತು ಚೇತೇಶ್ವರ ಪೂಜಾರಾ ಉತ್ತಮ ಜೊತೆಯಾಟ ಆಡಿದರು. ಎರಡನೇ ವಿಕೆಟ್‌ಗೆ 113 ರನ್‌ಗಳನ್ನು ಕಲೆಹಾಕಿದರು. ಚೇತೇಶ್ವರ ಪೂಜಾರ 121 ಎಸೆತಗಳಲ್ಲಿ 3 ಬೌಂಡರಿ ಸಹಿತ ತಾಳ್ಮೆಯ 42 ರನ್ ಗಳಿಸಿ ಔಟಾದರು.
ಯುವ ಆಟಗಾರ ಶುಭಮನ್ ಗಿಲ್ ಮಾತ್ರ ಅತ್ಯುತ್ತಮ ಇನ್ನಿಂಗ್ಸ್ ಆಡಿದರು. 193 ಎಸೆತಗಳಲ್ಲಿ ತಮ್ಮ ಟೆಸ್ಟ್ ಕ್ರಿಕೆಟ್‌ನ ಎರಡನೇ ಶತಕವನ್ನು ಪೂರೈಸಿದರು. 10 ಬೌಂಡರಿ 1 ಭರ್ಜರಿ ಸಿಕ್ಸರ್ ನೆರವಿನಿಂದ ಅಜೇಯ ಶತಕ ಪೂರೈಸಿದರು.

ಭಾರತದಲ್ಲಿ ಮೊದಲನೇ ಟೆಸ್ಟ್ ಶತಕ
ಶುಭಮನ್ ಗಿಲ್ ಟೆಸ್ಟ್ ಕ್ರಿಕೆಟ್‌ನಲ್ಲಿ 2ನೇ ಶತಕ ಗಳಿಸಿದರು, ಅವರು ಭಾರತದಲ್ಲಿ ಗಳಿಸಿದ ಮೊದಲ ಟೆಸ್ಟ್ ಶತಕ ಇದಾಗಿದೆ. 2022ರ ಡಿಸೆಂಬರ್ ನಲ್ಲಿ ನಡೆದ ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ತಮ್ಮ ಮೊದಲ ಶತಕ ಗಳಿಸಿದ್ದರು. 2023ರ ಆರಂಭದಿಂದಲೂ ಅತ್ಯುತ್ತಮ ಫಾರ್ಮ್‌ನಲ್ಲಿರುವ ಗಿಲ್ ಈಗ ಮತ್ತೊಂದು ಅತ್ಯುತ್ತಮ ಇನ್ನಿಂಗ್ಸ್ ಆಡುತ್ತಿದ್ದಾರೆ.
ಆತ್ಮವಿಶ್ವಾಸದಿಂದಲೇ ಆಸ್ಟ್ರೇಲಿಯಾದ ಎಲ್ಲಾ ಬೌಲರ್ ಗಳನ್ನು ಎದುರಿಸಿದ ಗಿಲ್ ಭಾರತಕ್ಕೆ ಮರೆಯಲಾಗದ ಇನ್ನಿಂಗ್ಸ್ ಆಡುತ್ತಿದ್ದಾರೆ. 3ನೇ ಸೆಷನ್‌ಗೆ ಮುನ್ನ ಉತ್ತಮವಾಗಿ ಆಡುತ್ತಿದ್ದ ಪೂಜಾರ ಟಾಡ್ ಮರ್ಫಿ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದರು.

ಉತ್ತಮ ಸ್ಥಿತಿಯಲ್ಲಿ ಭಾರತ ತಂಡ
ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 480 ರನ್ ಗಳಿಸಿದ ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ ಸದ್ಯ ಉತ್ತಮ ಸ್ಥಿತಿಯಲ್ಲಿದೆ. ಮೂರನೇ ಸೆಷನ್ ಆರಂಭಕ್ಕೆ ಮುನ್ನ ಭಾರತ 2 ವಿಕೆಟ್ ಕಳೆದುಕೊಂಡು 188 ರನ್ ಗಳಿಸಿದ್ದು, 282 ರನ್‌ಗಳ ಹಿನ್ನಡೆಯಲ್ಲಿದೆ.
ಇನ್ನೂ ಎರಡು ದಿನಗಳ ಆಟ ಬಾಕಿ ಇದ್ದು, ಭಾರತ ಉತ್ತಮವಾಗಿ ಬ್ಯಾಟಿಂಗ್ ಮಾಡಿದರೆ ಪಂದ್ಯವನ್ನು ಗೆಲ್ಲುವ ಅಥವಾ ಡ್ರಾ ಮಾಡಿಕೊಳ್ಳಲು ಅವಕಾಶ ಇದೆ. ಭಾರತ ಈ ಪಂದ್ಯವನ್ನು ಗೆದ್ದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ನೇರವಾಗಿ ಅರ್ಹತೆ ಪಡೆಯಲಿದೆ. ಒಂದು ವೇಳೆ ಡ್ರಾ ಮಾಡಿಕೊಂಡರೆ, ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದ ಫಲಿತಾಂಶಕ್ಕಾಗಿ ಕಾಯಬೇಕಾಗುತ್ತದೆ.
ಶ್ರೀಲಂಕಾ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡರೆ ಅಥವಾ ಸೋತರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್‌ನಿಂದ ಹೊರಬೀಳಲಿದ್ದು, ಭಾರತ ಫೈನಲ್‌ಗೆ ಅರ್ಹತೆ ಪಡೆಯಲಿದೆ. ಆಸ್ಟ್ರೇಲಿಯಾ ಈಗಾಗಲೇ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದು, ಫೈನಲ್ ಪಂದ್ಯ ಜೂನ್ 7 ರಿಂದ ಇಂಗ್ಲೆಂಡ್‌ನ ಇಂಗ್ಲೆಂಡ್‌ನ ಓವಲ್‌ನಲ್ಲಿ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications