Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs AUS 4th Test: ಟೆಸ್ಟ್ ಕ್ರಿಕೆಟ್‌ನಲ್ಲಿ ಐತಿಹಾಸಿಕ ಸಾಧನೆಯತ್ತ ಕಣ್ಣಿಟ್ಟಿರುವ ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್

IND vs AUS 4th Test: Virat Kohli And Ravichandran Ashwin Eyes On Historic Achievement In Test Cricket

ಗುರುವಾರ, ಮಾರ್ಚ್ 9ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಹಾಗೂ ಅಂತಿಮ ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದ ಪ್ರವಾಸಿ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಇದೇ ವೇಳೆ, ಈ ತಲೆಮಾರಿನ ಇಬ್ಬರು ಅತ್ಯುತ್ತಮ ಭಾರತೀಯ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ ಮತ್ತು ರವಿಚಂದ್ರನ್ ಅಶ್ವಿನ್ ಅವರು ಅಪರೂಪದ ಮೈಲುಗಲ್ಲುಗಳನ್ನು ಸ್ಥಾಪಿಸಲು ಎದುರು ನೋಡುತ್ತಿದ್ದಾರೆ. ಭಾರತೀಯ ತಂಡದ ಇಬ್ಬರೂ ಅನುಭವಿಗಳು ಹಲವು ವರ್ಷಗಳಲ್ಲಿ ಅದ್ಭುತ ಪ್ರದರ್ಶನ ನೀಡಿ, ಕ್ರಿಕೆಟ್‌ನಲ್ಲಿ ಕೆಲವು ಹಳೆಯ ದಾಖಲೆಗಳನ್ನು ಮುರಿದು ಹೊಸ ದಾಖಲೆಗಳನ್ನು ಬರೆದಿದ್ದಾರೆ.

ಬಾರ್ಡರ್-ಗವಾಸ್ಕರ್ ಟ್ರೋಫಿಯ 4ನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತು ರವಿಚಂದ್ರನ್ ಅಶ್ವಿನ್ ಈಗಾಗಲೇ ತಮ್ಮ ಅತ್ಯದ್ಭುತ ಕ್ರಿಕೆಟ್ ವೃತ್ತಿಜೀವನದಲ್ಲಿ ಇನ್ನೂ ಕೆಲವು ಐತಿಹಾಸಿಕ ಮೈಲಿಗಲ್ಲುಗಳನ್ನು ಸ್ಥಾಪಿಸಲಿದ್ದಾರೆ.

ಈ ಸರಣಿಯ ಮೂರು ಪಂದ್ಯಗಳಲ್ಲಿ ಬ್ಯಾಟ್‌ನೊಂದಿಗೆ ಫಾರ್ಮ್ ಕಂಡುಕೊಳ್ಳಲು ಪರದಾಡುತ್ತಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ, ಕೊನೆಯ ಪಂದ್ಯದಲ್ಲಿ ಫಾರ್ಮ್‌ಗೆ ಮರಳಲು ಎದುರು ನೋಡುತ್ತಿದ್ದಾರೆ.

ವಿರಾಟ್ ಕೊಹ್ಲಿ ಭಾರತದಲ್ಲಿ 4000 ಟೆಸ್ಟ್ ರನ್‌ಗಳ ಮೈಲುಗಲ್ಲು

ವಿರಾಟ್ ಕೊಹ್ಲಿ ಭಾರತದಲ್ಲಿ 4000 ಟೆಸ್ಟ್ ರನ್‌ಗಳ ಮೈಲುಗಲ್ಲು

ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಭಾರತದಲ್ಲಿ 4000 ಟೆಸ್ಟ್ ರನ್‌ಗಳ ಮೈಲುಗಲ್ಲು ಸ್ಥಾಪಿಸಲು ಕೇವಲ 42 ರನ್‌ಗಳ ಅವಶ್ಯಕತೆ ಇದೆ. ಈ ಮೊದಲು ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್, ಸುನಿಲ್ ಗವಾಸ್ಕರ್ ಮತ್ತು ವೀರೇಂದ್ರ ಸೆಹ್ವಾಗ್ ಮಾತ್ರ ಭಾರತದ ಪರ ಈ ದಾಖಲೆ ಮಾಡಿದ್ದಾರೆ.

ಅಹಮದಾಬಾದ್ ಟೆಸ್ಟ್‌ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ಹೆಗ್ಗುರುತನ್ನು ತಲುಪಿದರೆ, ಮಾಜಿ ಬ್ಯಾಟರ್ ಹಾಗೂ ಹಾಲಿ ಕೋಚ್ ರಾಹುಲ್ ದ್ರಾವಿಡ್ ಮತ್ತು ಸುನಿಲ್ ಗವಾಸ್ಕರ್ ಅವರನ್ನು ಹಿಂದಿಕ್ಕಿ ಮೂರನೇ ಅತಿ ವೇಗದ ಭಾರತೀಯ ಆಟಗಾರ ಎನಿಸಿಕೊಳ್ಳಲಿದ್ದಾರೆ. ಉಳಿದ ಬ್ಯಾಟರ್‌ಗಳಿಗಿಂತ ವಿರಾಟ್ ಕೊಹ್ಲಿ ಅತ್ಯಧಿಕ ಸರಾಸರಿ (58) ಹೊಂದಿದ್ದಾರೆ ಎಂಬುದನ್ನು ಸಹ ಗಮನಿಸಬಹುದು.

ರವಿಚಂದ್ರನ್ ಅಶ್ವಿನ್ ಕ್ರಿಕೆಟ್‌ನಲ್ಲಿ 700 ವಿಕೆಟ್‌ಗಳಿಗೆ 10 ವಿಕೆಟ್‌

ರವಿಚಂದ್ರನ್ ಅಶ್ವಿನ್ ಕ್ರಿಕೆಟ್‌ನಲ್ಲಿ 700 ವಿಕೆಟ್‌ಗಳಿಗೆ 10 ವಿಕೆಟ್‌

ಇನ್ನು ಭಾರತ ತಂಡದ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 700 ವಿಕೆಟ್‌ಗಳನ್ನು ಪೂರೈಸಲು ರವಿಚಂದ್ರನ್ ಅಶ್ವಿನ್ ಕೇವಲ 10 ವಿಕೆಟ್‌ಗಳ ಅಂತರದಲ್ಲಿದ್ದಾರೆ. ಈ ಪಂದ್ಯದಲ್ಲಿ ದೊಡ್ಡ ಮೈಲುಗಲ್ಲು ಸ್ಥಾಪಿಸಲಿದ್ದಾರೆಯೇ ಎಂದು ಕಾದು ನೋಡಬೇಕಿದೆ.

ತಮಿಳುನಾಡು ಮೂಲದ 36 ವರ್ಷದ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ರಾಷ್ಟ್ರೀಯ ತಂಡಕ್ಕಾಗಿ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 151 ವಿಕೆಟ್‌ಗಳನ್ನು ಪಡೆದರೆ, ಟೆಸ್ಟ್ ಪಂದ್ಯಗಳಲ್ಲಿ 467 ವಿಕೆಟ್‌ಗಳನ್ನು ಗಳಿಸಿದ್ದಾರೆ ಮತ್ತು ಟಿ20 ಪಂದ್ಯಗಳಲ್ಲಿ ಇಲ್ಲಿಯವರೆಗೆ ಒಟ್ಟು 72 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ

ಆಸ್ಟ್ರೇಲಿಯಾ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ

ಇದೇ ವೇಳೆ ಆಸ್ಟ್ರೇಲಿಯಾ ತಂಡದ ವಿರುದ್ಧ ಟೆಸ್ಟ್ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ ಎನಿಸಿಕೊಂಡಿರುವ ಕನ್ನಡಿಗ ಅನಿಲ್ ಕುಂಬ್ಳೆ ದಾಖಲೆಯನ್ನು ಸರಿಗಟ್ಟಲು ರವಿಚಂದ್ರನ್ ಅಶ್ವಿನ್‌ಗೆ ಕೇವಲ 4 ವಿಕೆಟ್‌ಗಳ ಅವಶ್ಯಕತೆ ಇದೆ.

ಬೆಂಗಳೂರು ಮೂಲದ ಅನಿಲ್ ಕುಂಬ್ಳೆ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಕ್ರಿಕೆಟ್ ಸ್ವರೂಪದಲ್ಲಿ ಒಟ್ಟು 111 ವಿಕೆಟ್‌ಗಳನ್ನು ಪಡೆದು, ಭಾರತದ ಪರ ಅಪರೂಪದ ಸಾಧನೆ ಮಾಡಿದ್ದಾರೆ.

ಉಭಯ ತಂಡದ ನಾಯಕರಿಗೆ ಟೆಸ್ಟ್‌ ಕ್ಯಾಪ್ ಹಸ್ತಾಂತರಿಸಿದ ಪ್ರಧಾನಿಗಳು

ಉಭಯ ತಂಡದ ನಾಯಕರಿಗೆ ಟೆಸ್ಟ್‌ ಕ್ಯಾಪ್ ಹಸ್ತಾಂತರಿಸಿದ ಪ್ರಧಾನಿಗಳು

4ನೇ ಟೆಸ್ಟ್‌ ಪಂದ್ಯದ ಮೊದಲ ದಿನದ ಆಟವನ್ನು ವೀಕ್ಷಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಅಂಥೋನಿ ಅಲ್ಬನೀಸ್ ಮೈದಾನದಲ್ಲಿ ಹಾಜರಿದ್ದು, ಇಬ್ಬರೂ ಪ್ರಧಾನಿಗಳು ಉಭಯ ತಂಡದ ನಾಯಕರಿಗೆ ಟೆಸ್ಟ್‌ ಕ್ಯಾಪ್ ಹಸ್ತಾಂತರಿಸಿದರು. ನಂತರ ಇಬ್ಬರೂ ಪ್ರಧಾನಿಗಳು ತೆರೆದ ವಾಹನದಲ್ಲಿ ಮೈದಾನದ ಸುತ್ತ ಮೆರವಣಿಗೆ ಮೂಲಕ ನೆರೆದಿದ್ದ ಪ್ರೇಕ್ಷಕರಿಗೆ ಕೈ ಬೀಸಿದರು.

4ನೇ ಟೆಸ್ಟ್‌ ಪಂದ್ಯ ಆರಂಭಕ್ಕೂ ಮುನ್ನ ಗುಜರಾತ್‌ ಸಂಸ್ಕೃತಿಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಕಲಾವಿದರು ಗುಜರಾತ್‌ನ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ನೃತ್ಯ ಮಾಡುವ ಮೂಲಕ ನೆರೆದಿದ್ದ ಅಪಾರ ಪ್ರೇಕ್ಷರರನ್ನು ರಂಜಿಸಿದರು.

Story first published: Thursday, March 9, 2023, 11:13 [IST]
Other articles published on Mar 9, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+