IND vs AUS: ಆಸ್ಟ್ರೇಲಿಯಾ ತಂಡಕ್ಕೆ ಹಿನ್ನಡೆ; ಭಾರತ ವಿರುದ್ಧ ಮೊದಲ ಏಕದಿನ ಪಂದ್ಯಕ್ಕೆ 2 ಸ್ಟಾರ್ ಆಟಗಾರರು ಅಲಭ್ಯ
ಶುಕ್ರವಾರ, ಸೆಪ್ಟೆಂಬರ್ 22ರಂದು ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ನಡೆಯಲಿದೆ.
ಇದೇ ವೇಳೆ ಪ್ರವಾಸಿ ಆಸ್ಟ್ರೇಲಿಯಾ ತಂಡಕ್ಕೆ ಹಿನ್ನಡೆ ಉಂಟಾಗಿದ್ದು, ಇಬ್ಬರು ಸ್ಟಾರ್ ಆಟಗಾರರು ಹೊರಗುಳಿಯಲಿದ್ದಾರೆ. ವಿಶ್ವಕಪ್‌ಗೆ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಗಾಯದ ಸಮಸ್ಯೆ ಕಾಡುತ್ತಿದ್ದು, ಐಸಿಸಿ ಪಂದ್ಯಾವಳಿಗೆ ತಂಡ ಸಂಪೂರ್ಣ ಫಿಟ್ ಆಗಿಲ್ಲವೇ ಎಂಬ ಪ್ರಶ್ನೆ ಕಾಡುತ್ತಿದೆ.
ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಮತ್ತು ಸ್ಟಾರ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಭಾರತ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಿಂದ ಹೊರಗುಳಿಯುವ ಮೂಲಕ ಆಸ್ಟ್ರೇಲಿಯಾ ದೊಡ್ಡ ಹೊಡೆತ ಅನುಭವಿಸುತ್ತಿದೆ.

ಆದಾಗ್ಯೂ, ಈ ಸ್ಟಾರ್ ಜೋಡಿ ಸರಣಿಯ ಉಳಿದ ಎರಡು ಪಂದ್ಯಗಳಿಗೆ ಮರಳಲಿದ್ದಾರೆ ಎಂದು ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಭರವಸೆ ವ್ಯಕ್ತಪಡಿಸಿದ್ದಾರೆ.
ಗಮನಾರ್ಹವಾಗಿ, ಮಿಚೆಲ್ ಸ್ಟಾರ್ಕ್ ಅವರು 2023ರ ಆಶಸ್ ಟೆಸ್ಟ್ ಸರಣಿ ವೇಳೆ ಉಂಟಾದ ತೊಡೆಸಂದು ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ, ಪಾದದ ನೋವಿನಿಂದಾಗಿ ಇತ್ತೀಚಿನ ದಕ್ಷಿಣ ಆಫ್ರಿಕಾ ಸರಣಿಯನ್ನು ತೊರೆದ ಗ್ಲೆನ್ ಮ್ಯಾಕ್ಸ್‌ವೆಲ್ ಅವರು ಶುಕ್ರವಾರ, ಸೆಪ್ಟೆಂಬರ್ 22ರಂದು ತಂಡವನ್ನು ಸೇರಿಕೊಳ್ಳಲಿದ್ದಾರೆ.
ಇವರಲ್ಲದೆ ಮಣಿಕಟ್ಟಿನ ಗಾಯದಿಂದ ಚೇತರಿಸಿಕೊಂಡಿರುವ ನಾಯಕ ಪ್ಯಾಟ್ ಕಮ್ಮಿನ್ಸ್ ಸರಣಿಯ ಮೂರೂ ಪಂದ್ಯಗಳನ್ನು ಆಡುವ ನಿರೀಕ್ಷೆಯಲ್ಲಿದ್ದಾರೆ. ಇದೇ ವೇಳೆ ಸ್ಟಾರ್ ಬ್ಯಾಟರ್ ಸ್ಟೀವನ್ ಸ್ಮಿತ್ ಅವರು ಆಶಸ್ ಸರಣಿ ಸಮಯದಲ್ಲಿ ಅನುಭವಿಸಿದ ಮಣಿಕಟ್ಟಿನ ಗಾಯದಿಂದ ಚೇತರಿಸಿಕೊಂಡ ನಂತರ ತಮ್ಮ ಪುನರಾಗಮನ ಮಾಡಲಿದ್ದಾರೆ.

"ನಾವು ಈ ಪರಿಸ್ಥಿತಿಗಳಿಗೆ ಒಗ್ಗಿಕೊಳ್ಳುವುದರ ನಡುವೆ ಸಮತೋಲನವನ್ನು ಸಾಧಿಸಲು ಬಯಸುತ್ತೇವೆ. ಆಶಾದಾಯಕವಾಗಿ ಕೆಲವು ಪಂದ್ಯಗಳನ್ನು ಗೆಲ್ಲುತ್ತೇವೆ. ಆದರೆ, ನಾವು ವಿಶ್ವಕಪ್‌ನ ಮೊದಲ ಪಂದ್ಯವನ್ನು ಕಳೆದುಕೊಳ್ಳಲು ಬಯಸುವುದಿಲ್ಲ," ಎಂದು ಪ್ಯಾಟ್ ಕಮ್ಮಿನ್ಸ್ ತಿಳಿಸಿದ್ದಾರೆ.
"ನಿಸ್ಸಂದೇಹವಾಗಿ ನಾವು ಕೆಲವು ವಿಭಿನ್ನ ಸಂಯೋಜನೆಗಳನ್ನು ಪ್ರಯತ್ನಿಸುತ್ತೇವೆ. ಕೆಲವು ವಿಭಿನ್ನ ಆಟಗಾರರಿಗೆ ಅವಕಾಶ ಸಿಗುತ್ತವೆ. ಆದರೆ, ಎಲ್ಲದಕ್ಕಿಂತ ಮುಖ್ಯವಾಗಿ ನಾವು ವಿಶ್ವಕಪ್‌ನಲ್ಲಿ ಹೇಗೆ ಆಡುತ್ತೇವೆ ಎಂಬುದಕ್ಕೆ ಸಾಕಷ್ಟು ಹತ್ತಿರವಾಗಿ ರೂಪಿಸಲು ಬಯಸುತ್ತೇವೆ," ಎಂದು ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಹೇಳಿದ್ದಾರೆ.
ತಂಡದಲ್ಲಿ ಸ್ಥಾನ ಪಡೆಯಲು ಮಾರ್ನಸ್ ಲ್ಯಾಬುಸ್ಚಾಗ್ನೆ ಪ್ರಯತ್ನ
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ 5 ಇನ್ನಿಂಗ್ಸ್‌ಗಳಲ್ಲಿ 283 ರನ್ ಮೂಲಕ ಆಸೀಸ್ ಪರ ಅತಿ ಹೆಚ್ಚು ರನ್ ಗಳಿಸಿದ ಮಾರ್ನಸ್ ಲ್ಯಾಬುಸ್ಚಾಗ್ನೆ ಅವರ ಬಗ್ಗೆ ಪ್ಯಾಟ್ ಕಮ್ಮಿನ್ಸ್ ಪ್ರಶಂಸೆ ವ್ಯಕ್ತಪಡಿಸಿದರು. ಮತ್ತೊಂದು ಅದ್ಭುತ ಸರಣಿ ಮೂಲಕ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಬೆಂಬಲಿಸಿದರು.
"ಮಾರ್ನಸ್ ಲಬುಸ್ಚಾಗ್ನೆ ಯಾವಾಗಲೂ ನನ್ನ ತಲೆಯಲ್ಲಿತ್ತಾನೆ. ಆತ ಅದ್ಭುತವಾಗಿ ಆಡಿದ್ದಾನೆ. ದಕ್ಷಿಣ ಆಫ್ರಿಕಾದಲ್ಲಿ ನಮ್ಮ ಅತ್ಯುತ್ತಮ ಬ್ಯಾಟರ್ ಆಗಿದ್ದರು. ಬ್ಯಾಟಿಂಗ್ ಮಾತ್ರವಲ್ಲದೆ, ದಕ್ಷಿಣ ಆಫ್ರಿಕಾ ವಿರುದ್ಧ ಅವರ ಉದ್ದೇಶ ಉತ್ತಮವಾಗಿತ್ತು. ಮೂರು ಪಂದ್ಯಗಳಲ್ಲಿ ಅವಕಾಶವನ್ನು ಪಡೆದರು ಮತ್ತು ತಂಡದಲ್ಲಿ ಸ್ಥಾನ ಪಡೆಯಲು ಉತ್ತಮವಾಗಿ ಆಡುತ್ತಾರೆ ಎಂದು ನನಗೆ ಖಾತ್ರಿಯಿದೆ," ಎಂದು ಅಭಿಪ್ರಾಯಪಟ್ಟರು.
ಮೂರು ಪಂದ್ಯಗಳ ಏಕದಿನ ಸರಣಿಯ ನಂತರ, ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು 2023ರ ವಿಶ್ವಕಪ್‌ನ ತಮ್ಮ ಮೊದಲ ಪಂದ್ಯವನ್ನು ಅಕ್ಟೋಬರ್ 8ರಂದು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಸೆಣಸಾಡಲಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications