ಅಕ್ಷರ್ ಪಟೇಲ್ ಗಾಯದ ಬಗ್ಗೆ ಅಧಿಕೃತ ಮಾಹಿತಿ ನೀಡಿದ ಅಗರ್ಕರ್
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಇಂದು ಟೀಮ್ ಇಂಡಿಯಾ ಬಳಗವನ್ನು ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ಆಲ್‌ರೌಂಡರ್ ಅಕ್ಷರ್ ಪಟೇಲ್ ಗಾಯದ ಕುರಿತಾಗಿ ಅಗರ್ಕರ್ ಮಾಹಿತಿ ಹಂಚಿಕೊಂಡಿದ್ದಾರೆ. ಅಕ್ಷರ್ ಪಟೇಲ್ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಿಗೂ ಅಲಭ್ಯವಾಗಿದ್ದಾರೆ.
ಮಾಧ್ಯಮಗಳ ಜೊತೆಗೆ ಮಾತನಾಡಿದ ಅಜಿತ್ ಅಗರ್ಕರ್ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಪಂದ್ಯಕ್ಕೆ ಅಕ್ಷರ್ ಪಟೇಲ್ ಲಭ್ತವಾಗುವ ನಿರೀಕ್ಷೆಯಿದೆ ಎಂದು ಮಾಹಿತಿ ನಿಡಿದ್ದಾರೆ. "ಅಕ್ಷರ್ ಪಟೇಲ್ ಸರಣಿಯ ಮೂರನೇ ಪಂದ್ಯಕ್ಕೆ ಲಭ್ಯವಾಗುವ ನಿರೀಕ್ಷೆಯಲ್ಲಿದ್ದೇವೆ. ಆರ್ ಅಶ್ವಿನ್ ಹಾಗೂ ವಾಶಿಂಗ್ಟನ್ ಸುಂದರ್ ಕೂಡ ಮೂರನೇ ಪಂದ್ಯಕ್ಕೆ ಲಭ್ಯವಾಗಿರಲಿದ್ದಾರೆ" ಎಂದು ಅಗರ್ಕರ್ ಮಾಹಿತಿ ನೀಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಪಂದ್ಯಗಳಲ್ಲಿ ನಾಯಕ ರೋಹಿತ್ ಶರ್ಮಾ ಸೇರಿದಂತೆ ಕೆಲ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ವಿರಾಟ್ ಕೊಹ್ಲಿ ಹಾರ್ದಿಕ್ ಪಾಂಡ್ಯ ಕೂಡ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಆದರೆ ಅಂತಿಮ ಪಂದ್ಯಕ್ಕೆ ಈ ಆಟಗಾರರು ಲಭ್ಯವಾಗಲಿದ್ದು ರೋಹಿತ್ ಶರ್ಮಾ ನಾಯಕತ್ವದಲ್ಲಿಯೇ ಸರಣಿಯ ಕೊನೆಯ ಪಂದ್ಯವನ್ನು ಭಾರತ ಆಡಲಿದೆ.
ಮೊದಲ ಎರಡು ಪಂದ್ಯಗಳಿಗೆ ಟೀಮ್ ಇಂಡಿಯಾ: ಕೆಎಲ್ ರಾಹುಲ್ (ನಾಯಕ & ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ
ಅಂತಿಮ ಏಕದಿನ ಪಂದ್ಯಕ್ಕೆ ಟೀಮ್ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, (ಉಪನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್*, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಆರ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications