Ind vs Aus 1st ODI: ಆಸಿಸ್ ಬ್ಯಾಟಿಂಗ್ ವಿಭಾಗದ ಬಗ್ಗೆ ದೊಡ್ಡ ಸುಳಿವು ಬಿಟ್ಟು ಕೊಟ್ಟ ಮುಖ್ಯ ಕೋಚ್

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ಶುಕ್ರವಾರ ನಡೆಯಲಿದೆ. ಟೆಸ್ಟ್ ಸರಣಿಯಲ್ಲಿ ಭಾರತದ ವಿರದ್ಧ ಆಸ್ಟ್ರೇಲಿಯಾ 1-2 ಅಂತರದಿಂದ ಸೋಲು ಅನುಭವಿಸಿದ ಬಳಿಕ ಏಕದಿನ ಮಾದರಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಹಂಬಲದಲ್ಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಎರಡು ಬಲಿಷ್ಠ ತಂಡಗಳ ನಡುವಿನ ಹಣಾಹಣಿ ತೀವ್ರ ಕುತೂಹಲ ಮೂಡಿಸಿದೆ.
ಈ ಪಂದ್ಯದ ಹಿನ್ನೆಲೆಯಲ್ಲಿ ಮಾತನಾಡಿರುವ ಆಸ್ಟ್ರೇಲಿಯಾ ತಂಡದ ಮುಖ್ಯ ಕೋಚ್ ಆಂಡ್ರ್ಯೋ ಮೆಕ್ ಡೊನಾಲ್ಡ್ ತಂಡದ ಆಡುವ ಬಳಗದ ಬಗ್ಗೆ ಪ್ರಮುಖ ಸುಳಿವೊಂದನ್ನು ಬಿಟ್ಟುಕೊಟ್ಟಿದ್ದಾರೆ. ವಾಂಖೆಡೆಯಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಬ್ಯಾಟಿಂಗ್ ವಿಭಾಗದ ಯೋಜನೆಯ ಬಗ್ಗೆ ಮೆಕ್‌ಡೊನಾಲ್ಡ್ ಮಾತನಾಡಿದ್ದಾರೆ.
"ತಂಡದ ಸಂಯೋಜನೆಯ ಬಗ್ಗೆ ನಾವು ಒಂದೆರಡು ಬಾರಿ ಮಾತುಗಳನ್ನಾಡಿದ್ದೇವೆ. ಯಾವ ಸಂಯೋಜನೆಯಲ್ಲಿ ಕಣಕ್ಕಿಳಿಯಬೇಕು ಎಂಬುದರ ಬಗ್ಗೆ ಚರ್ಚೆಗಳನ್ನು ನಡೆಸಿದ್ದೇವೆ" ಎಂದಿದ್ದಾರೆ ಆಸ್ಟ್ರೇಲಿಯಾ ತಂಡದ ಕೋಚ್ ಮೆಕ್‌ಡೊನಾಲ್ಡ್. ಈ ಸಂದರ್ಭದಲ್ಲಿ ಬ್ಯಾಟಿಂಗ್ ವಿಭಾಗವನ್ನು ಮತ್ತಷ್ಟು ಆಳಕ್ಕಿಳಿಸುವ ಯೋಜನೆಯಿದೆ ಎಂದು ಅವರು ಹೇಳಿಕೆ ನೀಡಿದ್ದಾರೆ.
"ನಾವು ಬ್ಯಾಟಿಂಗ್ ವಿಭಾಗವನ್ನು 8ನೇ ಕ್ರಮಾಂಕದ ವರೆಗೆ ವಿಸ್ತರಿಸುವ ಯೋಜನೆ ಹೊಂದಿದ್ದೇವೆ. ನಾವು ಅದನ್ನು ಈ ಹಿಂದೆಯೂ ಪ್ರಯತ್ನ ಪಟ್ಟಿದ್ದೆವು. ವಿಶ್ವಕಪ್‌ನತ್ತ ಹೆಜ್ಜೆಯಿಡುತ್ತಿರುವ ಕಾರಣ ಸಂಯೋಜನೆಯಲ್ಲಿ ಬದಲಾವಣೆ ಮಾಡಿಕೊಳ್ಳುವ ಪ್ರಯತ್ನಗಳು ನಡೆಯಲಿದೆ. ಈ ತಂಡದಲ್ಲಿ ಸಾಕಷ್ಟು ಆಲ್‌ರೌಂಡರ್‌ಗಳು ಆಯ್ಕೆಯಾಗಿದ್ದಾರೆ. ಅವರೆಲ್ಲಾ ಒಂದು ತಂಡವಾಗಿ ಆಡುವ ಅವಕಾಶವಿದೆ. ಇಲ್ಲಿ ನಾಉ ಕೆಲ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬಹುದು" ಎಂದಿದ್ದಾರೆ ಆಸ್ಟ್ರೇಲಿಯಾದ ಮುಖ್ಯ ಕೋಚ್.
ಇನ್ನು ಆಸ್ಟ್ರೇಲಿಯಾ ತಂಡಕ್ಕೆ ಈ ಸರಣಿಯ ಮೂಲಕ ಇಬ್ಬರು ಪ್ರಮುಖ ಆಟಗಾರರು ಕಮ್‌ಬ್ಯಾಕ್ ಮಾಡುತ್ತಿದ್ದಾರೆ. ಗಾಯದ ಕಾರಣದಿಂದಾಗಿ ತಂಡದಿಂದ ಹೊರಗುಳಿದಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಶಾನ್ ಮಾರ್ಶ್ ಮತ್ತೆ ತಂಡಕ್ಕೆ ಮರಳಿದ್ದು ಈ ಮೂಲಕ ಆಸಿಸ್ ಪಡೆ ಮತ್ತಷ್ಟು ಬಲಿಷ್ಠವಾಗಿದೆ. ಇನ್ನು ಟೆಸ್ಟ್ ಸರಣಿಯಿಂದ ಅರ್ಧಕ್ಕೆ ತವರಿಗೆ ವಾಪಸಾಗಿದ್ದ ಡೇವಿಡ್ ವಾರ್ನರ್ ಕೂಡ ಈ ಸರಣಿಯಲ್ಲಿ ಆಡಲಿದ್ದಾರೆ.
ಟೀಮ್ ಇಂಡಿಯಾ ಸ್ಕ್ವಾಡ್: ಶುಬ್ಮನ್ ಗಿಲ್, ಇಶಾನ್ ಕಿಶನ್(ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ(ನಾಯಕ), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಾಲ್, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಜಯದೇವ್ ಉನದ್ಕತ್
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಶೈನ್, ಗ್ಲೆನ್ ಮ್ಯಾಕ್ಸ್‌ವೆಲ್, ಅಲೆಕ್ಸ್ ಕ್ಯಾರಿ(ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಆಷ್ಟನ್ ಅಗರ್, ಶಾನ್ ಅಬಾಟ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಮಿಚೆಲ್ ಮಾರ್ಷ್, ಮಾರ್ಕಸ್ ಸ್ಟೊಯಿನಿಸ್, ಜೋಶ್ ಇಂಗ್ಲಿಸ್, ನಾಥನ್ ಎಲ್ಲಿಸ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications