IND VS AUS: ಸಿಡ್ನಿ ಟೆಸ್ಟ್‌ಗೆ ಆಸ್ಟ್ರೇಲಿಯಾ ಪ್ಲೇಯಿಂಗ್-11 ಪ್ರಕಟ; ಮಾರ್ಷ್ ಬದಲಿಗೆ ಹೊಸಬರಿಗೆ ಅವಕಾಶ
ಸಿಡ್ನಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಐದನ ಮತ್ತು ಕೊನೆಯ ಟೆಸ್ಟ್ ಪಂದ್ಯ ನಡೆಯಲಿದೆ. ಜನವರಿ 3 ರಿಂದ ಆರಂಭಾವಾಗಲಿರುವ ಸಿಡ್ನಿ ಟೆಸ್ಟ್ ಪಂದ್ಯಕ್ಕೆ ಆಸ್ಟ್ರೇಲಿಯಾ ತನ್ನ ಪ್ಲೇಯಿಂಗ್-11 ಅನ್ನು ಪ್ರಕಟಿಸಿದೆ. ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ಫ್ಲಾಪ್ ಆಟಗಾರನಿಗೆ ತಂಡದ ಪ್ಲೇಯಿಂಗ್ ಹನ್ನೊಂದರಿಂದ ಹೊರಬರುವ ದಾರಿಯನ್ನು ತೋರಿಸಿದ್ದಾರೆ. ಕಳಪೆ ಫಾರ್ಮ್ ಸಮಸ್ಯೆ ಎದುರಿಸುತ್ತಿರುವ ವೇಗದ ಬೌಲಿಂಗ್ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಅವರನ್ನು ಸಿಡ್ನಿ ಟೆಸ್ಟ್‌ಗಾಗಿ ಆಸ್ಟ್ರೇಲಿಯಾದ ಪ್ಲೇಯಿಂಗ್ ಹನ್ನೊಂದರಿಂದ ಕೈಬಿಡಲಾಗಿದೆ.
ಗುರುವಾರ ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ (ಎಸ್‌ಸಿಜಿ) ಸುದ್ದಿಗಾರರೊಂದಿಗೆ ಮಾತನಾಡಿದ ನಾಯಕ ಪ್ಯಾಟ್ ಕಮ್ಮಿನ್ಸ್, ಬಾಕ್ಸಿಂಗ್ ಡೇ ಟೆಸ್ಟ್‌ನ ನಂತರ ತಮ್ಮ ಆಡುವ ಹನ್ನೊಂದರಲ್ಲಿ ಬದಲಾವಣೆ ಮಾಡಿರುವ ಬಗ್ಗೆ ತಿಳಿಸಿದ್ದಾರೆ. ಭಾರತ ಎದುರು ಕಳಪೆ ಆಟವಾಡಿರುವ ಮಿಚೆಲ್ ಮಾರ್ಷ್ ಬದಲಿಗೆ ಬ್ಯೂ ವೆಬ್‌ಸ್ಟರ್ ಅವರಿಗೆ ಅವಕಾಶ ನೀಡಿರುವ ಬಗ್ಗೆ ಖಚಿತಪಡಿಸಿದ್ದಾರೆ.

ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ ಅಂತಿಮ ಟೆಸ್ಟ್ ಪಂದ್ಯದಲ್ಲಿ ಬ್ಯೂ ವೆಬ್‌ಸ್ಟರ್ ಪಾದಾರ್ಪಣೆ ಮಾಡುವ ಅವಕಾಶವನ್ನು ಪಡೆಯಲಿದ್ದಾರೆ. ಯುವ ಆಲ್‌ರೌಂಡರ್ ವೆಬ್‌ಸ್ಟರ್ ಮಾರ್ಚ್ 2022 ರಿಂದ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 57.10 ರ ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. ಅಲ್ಲದೆ, ಅವರು 31.70 ರ ಸರಾಸರಿಯಲ್ಲಿ 81 ವಿಕೆಟ್‌ಗಳನ್ನು ಪಡೆದಿದ್ದಾರೆ. ತಮ್ಮ ಕೊನೆಯ 3 ಪ್ರಥಮ ದರ್ಜೆ ಪಂದ್ಯಗಳಲ್ಲಿ 12 ವಿಕೆಟ್ ಕಬಳಿಸಿದ್ದು, ಈ ಪ್ರದರ್ಶನದಿಂದಾಗಿ ಅವರು ರಾಷ್ಟ್ರೀಯ ಹಿರಿಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಮಿಚೆಲ್ ಸ್ಟಾರ್ಕ್ ಫಿಟ್
ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಪಕ್ಕೆಲುಬಿನ ಗಾಯದ ಹೊರತಾಗಿಯೂ ಭಾರತ ವಿರುದ್ಧದ 5 ನೇ ಟೆಸ್ಟ್‌ನಲ್ಲಿ ಆಡಲು ಫಿಟ್ ಎಂದು ಕಮ್ಮಿನ್ಸ್ ಹೇಳಿದ್ದಾರೆ. ಅವರು ಈ ಪಂದ್ಯವನ್ನು ಎಂದಿಗೂ ಬಿಡುವುದಿಲ್ಲ. ಸ್ಟಾರ್ಕ್ ಅವರನ್ನು ಬುಧವಾರ ಪಕ್ಕೆಲುಬಿನ ಸ್ಕ್ಯಾನ್‌ಗೆ ಕಳುಹಿಸಲಾಗಿತ್ತು. ಇದು ಸಾಮಾನ್ಯ ಪ್ರಕ್ರಿಯೆ ಎಂದು ಕಮ್ಮಿನ್ಸ್ ನುಡಿದಿದ್ದಾರೆ.
ಭಾರತದ ವಿರುದ್ಧ 5ನೇ ಟೆಸ್ಟ್‌ಗೆ ಆಸ್ಟ್ರೇಲಿಯಾ ಪ್ಲೇಯಿಂಗ್-11
ಸ್ಯಾಮ್ ಕಾನ್‌ಸ್ಟಾಸ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್‌ಚಾಗ್ನೆ, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಬ್ಯೂ ವೆಬ್‌ಸ್ಟರ್, ಅಲೆಕ್ಸ್ ಕ್ಯಾರಿ (ವಿಕೆಟ್‌ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications