IND vs AUS 2nd ODI; ಭಾರತ ತಂಡದ ಹೀನಾಯ ಪ್ರದರ್ಶನ; ಸರಣಿ ಸಮಬಲಗೊಳಿಸಿದ ಆಸ್ಟ್ರೇಲಿಯಾ

ಭಾನುವಾರ, ಮಾರ್ಚ್ 19ರಂದು ವಿಶಾಖಪಟ್ಟಣದ ವೈಎಸ್ ರಾಜಶೇಖರ್ ರೆಡ್ಡಿ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ 2ನೇ ಏಕದಿನ ಪಂದ್ಯದಲ್ಲಿ ಆತಿಥೇಯ ತಂಡದ ವಿರುದ್ಧ ಪ್ರವಾಸಿ ತಂಡ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಭಾರತ ತಂಡ ನೀಡಿದ್ದ 118 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಯಾವುದೇ ವಿಕೆಟ್ ನಷ್ಟವಿಲ್ಲದೇ ಕೇವಲ 11 ಓವರ್‌ಗಳಲ್ಲಿ 121 ರನ್ ಬಾರಿಸಿ 10 ವಿಕೆಟ್‌ಗಳ ಜಯ ದಾಖಲಿದ್ದಲ್ಲದೇ, ಮೂರು ಪಂದ್ಯಗಳ ಏಕದಿನ ಸರಣಿಯನ್ನು 1-1 ಅಂತರದಲ್ಲಿ ಸಮಬಲಗೊಳಿಸಿತು.
ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್ ಆರಂಭಿಸಿದ ಮಿಚೆಲ್ ಮಾರ್ಷ್ ಮತ್ತು ಟ್ರಾವಿಸ್ ಹೆಡ್ ಮುರಿಯದ ಮೊದಲ ವಿಕೆಟ್‌ಗೆ 121 ರನ್ ಗಳಿಸಿದರು. ಮಿಚೆಲ್ ಮಾರ್ಷ್ 30 ಎಸೆತಗಳಲ್ಲಿ 10 ಬೌಂಡರಿಗಳ ಸಮೇತ ಅಜೇಯ 51 ರನ್ ಬಾರಿಸಿದರೆ, ಮಿಚೆಲ್ ಮಾರ್ಷ್ 36 ಎಸೆತಗಳಲ್ಲಿ 6 ಬೌಂಡರಿ 6 ಸಿಕ್ಸರ್‌ಗಳ ನೆರವಿನಿಂದ ಅಜೇಯ 66 ರನ್ ಗಳಿಸಿದರು.

ಭಾರತದ ಪರ ಬೌಲಿಂಗ್‌ನಲ್ಲಿ ಯಾವುದೇ ಬೌಲರ್‌ಗಳು ವಿಕೆಟ್ ಪಡೆಯುವಲ್ಲಿ ವಿಫಲರಾದರು. ಈ ಪಂದ್ಯದಲ್ಲಿ ಭಾರತ ತಂಡದ ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಹೀನಾಯ ಪ್ರದರ್ಶನ ನೀಡಿರುವುದು ವಿಶ್ವಕಪ್ ವರ್ಷದಲ್ಲಿ ಯೋಚನೆ ಮಾಡಬೇಕಾದ ವಿಷಯವಾಗಿದೆ.
ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು ಆಸ್ಟ್ರೇಲಿಯಾ ಬೌಲರ್‌ಗಳನ್ನು ಎದುರಿಸಲು ವಿಫಲವಾಗಿ 26 ಓವರ್‌ಗಳಲ್ಲಿ ಕೇವಲ 117 ರನ್‌ಗಳಿಗೆ ಸರ್ವಪತನ ಕಂಡಿತು.
ಆಸ್ಟ್ರೇಲಿಯಾ ತಂಡದ ವೇಗಿ ಮಿಚೆಲ್ ಸ್ಟಾರ್ಕ್ ಮಾರಕ ಬೌಲಿಂಗ್ ದಾಳಿ ನಡೆಸಿ, ಭಾರತದ ಅಗ್ರಕ್ರಮಾಂಕದ ಬ್ಯಾಟರ್‌ಗಳನ್ನು ಪೆವಿಲಿಯನ್‌ಗೆ ಕಳುಹಿಸುವಲ್ಲಿ ಯಶಸ್ವಿಯಾದರು. ಇದೇ ವೇಳೆ 8 ಓವರ್‌ಗಳಲ್ಲಿ 53 ರನ್ ನೀಡಿ 5 ವಿಕೆಟ್ ಪಡೆದು ಮಿಂಚಿದರು.

ಉಳಿದಂತೆ ಸೀನ್ ಅಬೋಟ್ 6 ಓವರ್‌ಗಳಲ್ಲಿ 23 ರನ್ ನೀಡಿ 3 ವಿಕೆಟ್ ಪಡೆದರೆ, ನಾಥನ್ ಎಲ್ಲಿಸ್ 5 ಓವರ್‌ಗಳಲ್ಲಿ 13 ರನ್ ನೀಡಿ ಉಳಿದ 2 ವಿಕೆಟ್ ಬಾಚಿದರು.
ಆಸ್ಟ್ರೇಲಿಯಾದ ಬೌಲಿಂಗ್ ದಾಳಿಯನ್ನು ಎದುರಿಸುವಲ್ಲಿ ಭಾರತೀಯ ಬ್ಯಾಟರ್‌ಗಳು ಸಂಪೂರ್ಣ ವಿಫಲವಾದರು. ಮೊದಲ ಓವರ್‌ನ್ 3ನೇ ಎಸೆತದಲ್ಲಿಯೇ ಶುಭ್ಮನ್ ಗಿಲ್ ಔಟಾದರು. ನಾಯಕ ರೋಹಿತ್ ಶರ್ಮಾ 13 ರನ್ ಗಳಿಸಿ ವಿಕೆಟ್ ನೀಡಿದರು.
ನಂತರ ಬಂದ ಸೂರ್ಯಕುಮಾರ್ ಯಾದವ್ ಮೊದಲ ಎಸೆತದಲ್ಲೇ ಎಲ್‌ಬಿಡಬ್ಲ್ಯೂ ಆಗಿ ಸೊನ್ನೆ ಸುತ್ತಿದರು. ಮೊದಲ ಪಂದ್ಯದಲ್ಲೂ ಅವರು ಸೊನ್ನೆಗೆ ಔಟಾಗಿದ್ದರು. ಕಳೆದ ಪಂದ್ಯದ ಹೀರೋ ಕೆಎಲ್ ರಾಹುಲ್ ಈ ಪಂದ್ಯದಲ್ಲಿ ಕೇವಲ 9 ರನ್ ಗಳಿಸಿ ಪೆವಿಲಿಯನ್ ಸೇರಿದರು.

ಉತ್ತಮವಾಗಿ ಆಡುತ್ತಿದ್ದ ವಿರಾಟ್ ಕೊಹ್ಲಿ ಕೂಡ ನಾಥನ್ ಎಲ್ಲಿಸ್ ಎಸೆತದಲ್ಲಿ ಎಲ್‌ಬಿಡಬ್ಲ್ಯೂ ಆಗಿ ಔಟಾಗುವ ಮುನ್ನ 35 ಎಸೆತಗಳಲ್ಲಿ 4 ಬೌಂಡರಿಗಳ ಸಮೇತ 31 ರನ್ ಬಾರಿಸಿದರು. ಇದು ತಂಡದ ಪರ ಗರಿಷ್ಠ ಸ್ಕೋರ್ ಆಗಿದೆ.
ಉಪನಾಯಕ ಹಾರ್ದಿಕ್ ಪಾಂಡ್ಯ ತಮ್ಮ ನೈಜ ಆಟ ಆಡಲು ವಿಫಲವಾಗಿ ಕೇವಲ 1 ರನ್ ಗಳಿಸಿ ಔಟಾದರು. ಆಲ್‌ರೌಂಡರ್ ರವೀಂದ್ರ ಜಡೇಜಾ 16 ರನ್ ಗಳಿಸಿ ನಿಧಾನಗತಿಯಲ್ಲಿ ಆಡುತ್ತಿದ್ದಾಗ ವಿಕೆಟ್ ಒಪ್ಪಿಸಿದರು.
ಕೊನೆಯಲ್ಲಿ ಮತ್ತೊಬ್ಬ ಆಲ್‌ರೌಂಡರ್ ಅಕ್ಷರ್ ಪಟೇಲ್ 29 ಎಸೆತಗಳಲ್ಲಿ 1 ಬೌಂಡರಿ ಮತ್ತು 2 ಸಿಕ್ಸರ್‌ಗಳ ನೆರವಿನಿಂದ 29 ರನ್ ಬಾರಿಸಿ ತಂಡದ ಮೊತ್ತ 100ರ ಗಡಿ ತಲುಪುವಲ್ಲಿ ಸಹಕಾರಿಯಾದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications