IND vs AUS 2nd Test: ಆಸ್ಟ್ರೇಲಿಯಾ ತಂಡಕ್ಕೆ 'ಸ್ಪಿನ್ ಭಯ' ಹುಟ್ಟಿಸಿದ ಭಾರತದ ಮಾಜಿ ಕ್ರಿಕೆಟಿಗ; ಕಾರಣವೇನು?

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಎರಡನೇ ಪಂದ್ಯ ಇಂದು (ಶುಕ್ರವಾರ, ಫೆಬ್ರವರಿ 17) ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಪ್ರಾರಂಭವಾಗಿದ್ದು, ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ಇನ್ನು ನಾಗ್ಪುರದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇನ್ನಿಂಗ್ಸ್ ಮತ್ತು 132 ರನ್‌ಗಳಿಂದ ಭರ್ಜರಿ ಗೆಲುವು ಪಡೆದ ಭಾರತ ತಂಡ ನಾಲ್ಕು ಪಂದ್ಯಗಳ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಪ್ರವಾಸಿ ತಂಡದ ಮೇಲೆ ಪ್ರಾಬಲ್ಯ ಸಾಧಿಸಿದೆ.
IND vs AUS 2nd Test: ಭಾರತ vs ಆಸ್ಟ್ರೇಲಿಯಾ 2ನೇ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಭಾರತದ ಲೆಜೆಂಡ್ ಸ್ಪಿನ್ನರ್ ಅನಿಲ್ ಕುಂಬ್ಳೆ 1999ರಲ್ಲಿ ಪಾಕಿಸ್ತಾನದ ವಿರುದ್ಧ ಒಂದೇ ಇನ್ನಿಂಗ್ಸ್‌ನಲ್ಲಿ 10 ವಿಕೆಟ್ ಕಬಳಿಸಿದ್ದರು ಎಂದು ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡಕ್ಕೆ ಭಾರತದ ಮಾಜಿ ಕ್ರಿಕೆಟಿಗ ಅಜಯ್ ಜಡೇಜಾ ಎಚ್ಚರಿಕೆ ನೀಡಿದ್ದಾರೆ.

ಪಾಕಿಸ್ತಾನದ ವಿರುದ್ಧ ವಿಶ್ವದಾಖಲೆಯ 10 ವಿಕೆಟ್
"ದೆಹಲಿ ಸ್ಟೇಡಿಯಂನಲ್ಲಿ ತುಂಬಾ ಕಡಿಮೆ ಬೌನ್ಸ್ ಕಡಿಮೆಯಿದ್ದು, ವೇಗದ ಬೌಲರ್‌ಗಳಿಗಿಂತ ಸ್ಪಿನ್ನರ್‌ಗಳಿಗೆ ನೆರವು ನೀಡುವುದನ್ನು ನಿರೀಕ್ಷಿಸಬಹುದು. ಈ ಹಿಂದೆ ಅನಿಲ್ ಕುಂಬ್ಳೆ ಇದೇ ಮೈದಾನದಲ್ಲಿ ಪಾಕಿಸ್ತಾನದ ವಿರುದ್ಧ ವಿಶ್ವದಾಖಲೆಯ 10 ವಿಕೆಟ್ ಗೊಂಚಲನ್ನು ಪಡೆದಿದ್ದಾರೆ," ಎಂದು ಭಾರತದ ಮಾಜಿ ಬ್ಯಾಟ್ಸ್‌ಮನ್ ಅಜಯ್ ಜಡೇಜಾ ಕ್ರಿಕ್‌ಬಜ್‌ನಲ್ಲಿ ತಿಳಿಸಿದರು.
ಭಾರತದ ಸ್ಟಾರ್ ಸ್ಪಿನ್ನರ್‌ಗಳಾದ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಮೊದಲ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ತಂಡಕ್ಕೆ ಕಂಟಕವಾಗಿ ಪರಿಣಮಿಸಿದರು. ಇವರಿಬ್ಬರ ಜೊತೆ ಅಕ್ಷರ್ ಪಟೇಲ್ ಸಹ ಸ್ಪಿನ್ ವಿಭಾಗದಲ್ಲಿದ್ದಾರೆ.

ಸೂರ್ಯಕುಮಾರ್ ಬದಲಿಗೆ ಶ್ರೇಯಸ್ ಅಯ್ಯರ್ ತಂಡಕ್ಕೆ ವಾಪಸ್
ಇನ್ನು ಬೆನ್ನು ನೋವಿನಿಂದಾಗಿ ಮೊದಲ ಪಂದ್ಯವನ್ನು ತಪ್ಪಿಸಿಕೊಂಡಿದ್ದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಇದೀಗ ಫಿಟ್ ಆಗಿ ಎರಡನೇ ಪಂದ್ಯದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಶ್ರೇಯಸ್ ಅಯ್ಯರ್ ತಂಡಕ್ಕೆ ವಾಪಸ್ಸಾಗಿದ್ದರಿಂದ ಸೂರ್ಯಕುಮಾರ್ ಯಾದವ್ ಭಾರತದ ಆಡುವ 11ರ ಬಳಗದಿಂದ ಹೊರಗುಳಿದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಪಂದ್ಯ ಭಾರತೀಯ ಮಧ್ಯಮ ಕ್ರಮಾಂಕದ ಅನುಭವಿ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ಅವರಿಗೆ 13 ವರ್ಷಗಳ ಕ್ರಿಕೆಟ್ ವೃತ್ತಿಜೀವನದ 100ನೇ ಟೆಸ್ಟ್ ಪಂದ್ಯವಾಗಿದೆ.

100ನೇ ಟೆಸ್ಟ್ ಪಂದ್ಯ ಆಡುತ್ತಿರುವ ಚೇತೇಶ್ವರ ಪೂಜಾರ
ಚೇತೇಶ್ವರ ಪೂಜಾರ ಅವರು 100ನೇ ಟೆಸ್ಟ್ ಪಂದ್ಯದಲ್ಲಿ 20ನೇ ಟೆಸ್ಟ್ ಶತಕ ಬಾರಿಸುವುದರೊಂದಿಗೆ ಸ್ಮರಣೀಯವಾಗಿಸಲು ಎದುರು ನೋಡುತ್ತಿದ್ದಾರೆ.
ಭಾರತ ತಂಡವು ಈ ಪಂದ್ಯದಲ್ಲಿ ಒಂದು ಬದಲಾವಣೆಯನ್ನು ಮಾಡಿದ್ದು, ಮೊದಲ ಪಂದ್ಯದಲ್ಲಿ 8 ರನ್ ಗಳಿಸಿದ್ದ ಸೂರ್ಯಕುಮಾರ್ ಯಾದವ್ ಬದಲಿಗೆ ಅತ್ಯುತ್ತಮ ಫಾರ್ಮ್‌ನಲ್ಲಿರುವ ಶ್ರೇಯಸ್ ಅಯ್ಯರ್ ಸ್ಥಾನ ಪಡೆದಿದ್ದಾರೆ.
ಇದೇ ವೇಳೆ ಆಸ್ಟ್ರೇಲಿಯಾ ತಂಡವು ರೇನ್‌ಶಾ ಬದಲಿಗೆ ಎಡಗೈ ಬ್ಯಾಟರ್ ಮ್ಯಾಥ್ಯೂ ಕುಹ್ನೆಮನ್‌ಗೆ ಚೊಚ್ಚಲ ಟೆಸ್ಟ್ ಪಂದ್ಯ ಆಡಲು ಅವಕಾಶ ನೀಡಿದೆ. ದೆಹಲಿಯಲ್ಲಿ ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ಭಾರತದ ಅನುಭವಿ ಬ್ಯಾಟ್ಸ್‌ಮನ್ ಚೇತೇಶ್ವರ ಪೂಜಾರ ತಮ್ಮ 13 ವರ್ಷಗಳ ವೃತ್ತಿಜೀವನದ 100ನೇ ಟೆಸ್ಟ್ ಪಂದ್ಯವಾಡಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ಆಡುವ 11ರ ಬಳಗ
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಕೆಎಸ್ ಭರತ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶ್ಚಾಗ್ನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಪೀಟರ್ ಹ್ಯಾಂಡ್ಸ್‌ಕಾಂಬ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಟಾಡ್ ಮರ್ಫಿ, ನಾಥನ್ ಲಿಯಾನ್, ಮ್ಯಾಥ್ಯೂ ಕುಹ್ನೆಮನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications