IND-W vs AUS-W: ಭಾರತ ವನಿತೆಯರ ವಿರುದ್ಧ ಆಸ್ಟ್ರೇಲಿಯಾ ಮಹಿಳಾ ತಂಡಕ್ಕೆ ಭರ್ಜರಿ ಜಯ

ಶುಕ್ರವಾರ, ಡಿಸೆಂಬರ್ 9ರಂದು ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಐದು ಟಿ20 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡವು ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಮಣಿಸಿ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ.
ಭಾರತ ಮಹಿಳಾ ತಂಡ ನೀಡಿದ್ದ 172 ರನ್‌ಗಳ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ವನಿತೆಯರು 18.1 ಓವರ್‌ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು 173 ರನ್ ಗಳಿಸಿ ಗೆಲುವಿನ ನಗೆ ಬೀರಿದರು.
172 ರನ್‌ಗಳ ಚೇಸಿಂಗ್‌ನಲ್ಲಿ ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ನಾಯಕಿ ಅಲಿಸ್ಸಾ ಹೀಲಿ ಮತ್ತು ಬೆತ್ ಮೂನಿ ಉತ್ತಮ ಆರಂಭ ಒದಗಿಸಿದರು. ಮೊದಲ ವಿಕೆಟ್‌ಗೆ 8.5 ಓವರ್‌ಗಳಲ್ಲಿ 73 ರನ್ ಕಲೆ ಹಾಕಿದರು. ಈ ವೇಳೆ ಅಲಿಸ್ಸಾ ಹೀಲಿ 37 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ನಂತರ ಕ್ರೀಸ್‌ಗೆ ಬಂದ ತಾಹ್ಲಿಯಾ ಮೆಕ್‌ಗ್ರಾತ್ 29 ಎಸೆತಗಳಲ್ಲಿ 40 ರನ್ ಬಾರಿಸಿದರು ಮತ್ತು ಮುರಿಯದ ಎರಡನೇ ವಿಕೆಟ್ ಜೊತೆಯಾಟಕ್ಕೆ ಬೆತ್ ಮೂನಿ ಜೊತೆಗೂಡಿ 100 ರನ್‌ಗಳನ್ನು ಸೇರಿಸಿದರು. ಇನ್ನು ಬೆತ್ ಮೂನಿ 57 ಎಸೆತಗಳಲ್ಲಿ 89 ರನ್ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಇದಕ್ಕೂ ಮೊದಲು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮಹಿಳಾ ತಂಡ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 171 ರನ್ ಕಲೆಹಾಕಿತು. ಹೀಗಾಗಿ ಆಸ್ಟ್ರೇಲಿಯಾ ಮಹಿಳಾ ತಂಡಕ್ಕೆ 172 ರನ್‌ಗಳ ಗುರಿ ನೀಡಲಾಗಿದೆ.
ಭಾರತದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಶಫಾಲಿ ವರ್ಮಾ ಮತ್ತು ಸ್ಮೃತಿ ಮಂಧಾನ ಉತ್ತಮ ಅಡಿಪಾಯ ಹಾಕಿದರು. ಮೊದಲ ವಿಕೆಟ್‌ಗೆ 2.5 ಓವರ್‌ಗಳಲ್ಲಿ 28 ರನ್ ಗಳಿಸಿದರು. ಈ ವೇಳೆ 21 ರನ್ ಬಾರಿಸಿ ಉತ್ತಮವಾಗಿ ಆಡುತ್ತಿದ್ದ ಶಫಾಲಿ ವರ್ಮಾ ಎಲಿಸ್ಸೆ ಪೆರ್ರಿ ಬೌಲಿಂಗ್‌ನಲ್ಲಿ ಔಟಾದರು.
ನಂತರ ಬಂದ ಜೆಮಿಮಾ ರೋಡ್ರಿಗಸ್ ಖಾತೆ ತೆರೆಯದೆ ನಿರ್ಗಮಿಸಿದರು. ಈ ವೇಳೆ ಸ್ಮೃತಿ ಮಂಧಾನ ಜೊತೆಗೂಡಿದ ನಾಯಕಿ ಹರ್ಮನ್‌ಪ್ರೀತ್ ಕೌರ್ ತಂಡದ ಮೊತ್ತ ಹೆಚ್ಚಿಸಲು ಪ್ರಯತ್ನಿಸಿದರು. ತಂಡದ ಮೊತ್ತ 8 ಓವರ್‌ಗಳಲ್ಲಿ 59 ರನ್‌ಗಳಾಗಿದ್ದಾಗ 28 ರನ್ ಗಳಿಸಿದ್ದ ಸ್ಮೃತಿ ಮಂಧಾನ ವಿಕೆಟ್ ಒಪ್ಪಿಸಿದರು.

ಅನಂತರ ಕ್ರೀಸ್‌ಗೆ ಬಂದ ದೇವಿಕಾ ವೈದ್ಯ ಅಜೇಯ 25 ರನ್ ಗಳಿಸಿದರೆ, ಹರ್ಮನ್‌ಪ್ರೀತ್ ಕೌರ್ 21ರನ್, ರಿಚಾ ಘೋಷ್ 36 ರನ್ ಮತ್ತು ದೀಪ್ತಿ ಶರ್ಮಾ 36 ರನ್ ಗಳಿಸಿ ಭಾರತ ತಂಡದ ಮೊತ್ತವನ್ನು 170ರ ಗಡಿ ದಾಟಿಸಿದರು.
ಆಸ್ಟ್ರೇಲಿಯಾ ಪರ ಬೌಲಿಂಗ್‌ನಲ್ಲಿ ಎಲಿಸ್ಸೆ ಪೆರ್ರಿ 2 ಓವರ್‌ಗಳಲ್ಲಿ 10 ರನ್ ನೀಡಿ 2 ವಿಕೆಟ್ ಪಡೆದರು. ಉಳಿದಂತೆ ಕಿಮ್ ಗಾರ್ತ್, ಆಶ್ಲೀಗ್ ಗಾರ್ಡ್ನರ್, ಅನ್ನಾಬೆಲ್ ಸದರ್ಲ್ಯಾಂಡ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
ಬೌಲಿಂಗ್‌ನಲ್ಲಿ ಭಾರತ ಪರ ಎಲ್ಲ ಬೌಲರ್‌ಗಳು ಹೆಚ್ಚು ರನ್ ನೀಡಿ ದುಬಾರಿಯಾದರು. ದೇವಿಕಾ ವೈದ್ಯ ಮಾತ್ರ 3 ಓವರ್‌ಗಳಲ್ಲಿ 33 ರನ್ ನೀಡಿ ಏಕೈಕ ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications