Virat Kohli: ಪರ್ತ್ ಟೆಸ್ಟ್‌ನಲ್ಲಿ ವಿರಾಟ್ ಎಡವಿದೆಲ್ಲಿ?; ಕೊಹ್ಲಿ ತಪ್ಪನ್ನು ರಿವೀಲ್ ಮಾಡಿದ ಪೂಜಾರ
ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿಯೂ ಭಾರತ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಮ್ಮ ಕಳಪೆ ಫಾರ್ಮ್ ಮುಂದುವರೆಸಿದ್ದಾರೆ. ಟೀಮ್ ಇಂಡಿಯಾಕ್ಕೆ ಕೊಹ್ಲಿ ಫಾರ್ಮ್ ಸಮಸ್ಯೆಯೇ ದೊಡ್ಡ ಚಿಂತೆಯಾಗಿದೆ. ಇದನ್ನು ನೋಡಿದರೆ ವಿರಾಟ್ ಕೊಹ್ಲಿ ದೀರ್ಘಕಾಲದವರೆಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಸದ್ದು ಮಾಡುವುದು ಡೌಟ್ ಎಂಬ ಮಾತುಗಳು ಕೇಳಿ ಬರುತ್ತಿವೆ. ಆಸ್ಟ್ರೇಲಿಯಾ ವಿರುದ್ಧ ಪರ್ತ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರಿಂದ ಬಿಗ್ ಇನ್ನಿಂಗ್ಸ್ ನಿರೀಕ್ಷೆಯಿತ್ತು. ಆದರೆ ವಿರಾಟ್ ಕೊಹ್ಲಿ ನಿರಾಸೆ ಮೂಡಿಸಿದರು.
ಪರ್ತ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ವಿರಾಟ್ ಕೊಹ್ಲಿ ಆರಂಭದಲ್ಲಿ ಉತ್ತಮವಾಗಿ ಕಾಣಿಸಿಕೊಂಡರು. ಆದರೆ ಫಾರ್ಮ್ ಅನ್ನು ವಿರಾಟ್ ಮುಂದುವರೆಸಲು ಸಾಧ್ಯವಾಗಲಿಲ್ಲ. ಕೊಹ್ಲಿ 12 ಎಸೆತಗಳಲ್ಲಿ 5 ರನ್ ಗಳಿಸಿ ಔಟಾದರು. ಇದಾದ ಬಳಿಕ ಅವರು ಟೀಕೆಗಳನ್ನು ಎದುರಿಸುವಂತಾಗಿದೆ. ಈ ಬಾರಿ ಟೀಮ್ ಇಂಡಿಯಾದ ಬ್ಯಾಟರ್ ಚೇತೇಶ್ವರ್ ಪೂಜಾರ ಅವರು ಕೊಹ್ಲಿ ಮಾಡಿದ ತಪ್ಪನ್ನು ರಿವೀಲ್ ಮಾಡಿದ್ದಾರೆ.

ಪೂಜಾರ ಹೇಳಿದ್ದೇನು?
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಚೇತೇಶ್ವರ ಪೂಜಾರ ಕಾಮೆಂಟೆಟರ್ ಆಗಿ ಹೊಸ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯ ಕುರಿತು ಮಾತನಾಡುವಾಗ ಕೊಹ್ಲಿ ಔಟಾಗಲು ಕಾರಣವೇನು ಎಂಬುದನ್ನು ಬಹಿರಂಗಪಡಿಸಿದ್ದಾರೆ.
ಪರ್ತ್ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕ್ರೀಸ್‌ನ ಹಿಂದೆ ನಿಲ್ಲುವ ಬದಲು ತುಂಬಾ ಹೊರಗೆ ನಿಂತಿದ್ದರು ಅದಕ್ಕಾಗಿಯೇ ಅವರು ಔಟಾದರು. ಅಂತಹ ನಿಲುವು ಬೇಕಾಗಿಲ್ಲ ಎಂದು ಚೇತೇಶ್ವರ ಪೂಜಾರ ಸ್ಪಷ್ಟವಾಗಿ ಹೇಳಿದ್ದಾರೆ. ವಿರಾಟ್ ಕ್ರೀಸ್‌ನ ಹೊರಗೆ ನಿಲ್ಲುವ ಬದಲು ಹಿಂದೆ ಉಳಿಯಬೇಕಿತ್ತು. ಹೊಂದಿಕೊಳ್ಳಲು ಸಮಯವಿಲ್ಲದ ಕಾರಣ ಅವರು ಬೌನ್ಸ್ ಆದ ಚೆಂಡನ್ನು ಆಡಲು ಅವಕಾಶ ನೀಡಲಿಲ್ಲ. ಜೋಶ್ ಹೇಜಲ್‌ವುಡ್ ಅವರು ಕೊಹ್ಲಿ ನಿಲುವನ್ನು ಕಂಡು ಅದಕ್ಕೆ ತಕ್ಕಂತೆ ಬೌಲಿಂಗ್ ಮಾಡಿದರು. ಪಿಚ್ ಬೌನ್ಸ್ ಆಗುತ್ತದೆ ಎಂದು ತಿಳಿದಿರುವ ಕಾರಣ ಹೇಜಲ್‌ವುಡ್ ಅದರ ಲಾಭ ಪಡೆದರು ಎಂದು ತಿಳಿಸಿದ್ದಾರೆ.
ಕಳಪೆ ಫಾರ್ಮ್
ಇತ್ತೀಚೆಗೆ ತವರಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕೊಹ್ಲಿ ಮಂಕಾಗಿದ್ದರು. ಕಿವೀಸ್ ವಿರುದ್ಧ ತವರಿನಲ್ಲಿ ಕೊಹ್ಲಿ ಹೆಚ್ಚು ರನ್ ಗಳಿಸಲು ಸಾಧ್ಯವಾಗಲಿಲ್ಲ. ಕಿವೀಸ್ ವಿರುದ್ಧ ಆಡಿದ ಆರು ಇನ್ನಿಂಗ್ಸ್‌ಗಳಲ್ಲಿ ಅವರು ಕೇವಲ 93 ರನ್ ಗಳಿಸಿದ್ದರು. ಟೆಸ್ಟ್ ಕ್ರಿಕೆಟ್‌ನಲ್ಲಿ ಕೊಹ್ಲಿ ಕಳೆದ ಐದು ವರ್ಷಗಳಲ್ಲಿ ಕೇವಲ ಮೂರು ಶತಕಗಳನ್ನು ಬಾರಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications