Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Ind vs Aus: ವಿಶ್ವಕಪ್‌ನಲ್ಲಿ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ಡೇವಿಡ್ ವಾರ್ನರ್

ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ವಿಶ್ವಕಪ್‌ನಲ್ಲಿ ಪ್ರಮುಖ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ವಿಶ್ವಕಪ್ ಟೂರ್ನಿಯಲ್ಲಿ ಅತ್ಯಂತ ವೇಗವಾಗಿ 1,000 ರನ್‌ಗಳನ್ನು ಗಳಿಸಿದ ದಾಖಲೆ ಈಗ ವಾರ್ನರ್ ಪಾಲಾಗಿದೆ. ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಈ ದಾಖಲೆಯನ್ನು ಭಾರತದ ವಿರುದ್ಧದ ಪಂದ್ಯದಲ್ಲಿ ಮುರಿದಿದ್ದಾರೆ ಆಸಿಸ್ ಆರಂಭಿಕ ಆಟಗಾರ.

ಹಾರ್ದಿಕ್ ಪಾಂಡ್ಯ ಅವರ ಎಸೆತವನ್ನು ಬೌಂಡರಿಗೆ ಬಾರಿಸುವ ಮೂಲಕ ಡೇವಿಡ್ ವಾರ್ನರ್ ಏಕದಿನ ವೀಶ್ವಕಪ್‌ನಲ್ಲಿ 1000 ರನ್‌ಗಳ ಮೈಲಿಗಲ್ಲು ದಾಟಿದ್ದಾರೆ. ಈ ಸಾಧನೆಗಾಗಿ ವಾರ್ನರ್ ಕೇವಲ 19 ಇನ್ನಿಂಗ್ಸ್‌ಗಳನ್ನು ಮಾತ್ರವೇ ಬಳಸಿಕೊಂಡಿದ್ದಾರೆ. ಈ ಮೂಲಕ 20 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದ ಸಚಿನ್ ತೆಂಡೂಲ್ಕರ್ ಹಾಗೂ ಎಬಿ ಡಿವಿಲಿಯರ್ಸ್ ಅವರ ದಾಖಲೆಯನ್ನು ಮುರಿದಂತಾಗಿದೆ. ಈ ಸಾಧನೆ ಮಾಡಲು ಈ ಪಂದ್ಯದಲ್ಲಿ ವಾರ್ನರ್‌ಗೆ 8 ರನ್‌ಗಳ ಅಗತ್ಯವಿತ್ತು.

IND vs AUS: David Warner break Sachin Tendulkar record of fastest 1000 runs in World cup

ಡೇವಿಡ್ ವಾರ್ನರ್ ಏಕದಿನ ವಿಶ್ವಕಪ್‌ನಲ್ಲಿ ಸತತವಾಗಿ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿದ್ದಾರೆ. ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಗೆ ಹೆಸರುವಾಸಿಯಾದ ವಾರ್ನರ್ ಆಸ್ಟ್ರೇಲಿಯಾ ತಂಡಕ್ಕೆ ಪ್ರಬಲ ಅಸ್ತ್ರವಾಗಿದ್ದಾರೆ. ಈ ಬಾರಿಯ ವಿಶ್ವಕಪ್ ಟೂರ್ನಿಗೂ ಮುನ್ನ ವಾರ್ನರ್ ತಮ್ಮ ಲಯಕ್ಕೆ ಮರಳಿದ್ದು ಉತ್ತಮ ಪ್ರದರ್ಶನ ನೀಡುವ ವಿಶ್ವಾಸ ಮೂಡಿಸಿದ್ದಾರೆ.

ಇನ್ನು ಈ ಪಂದ್ಯದಲ್ಲಿಯೂ ವಾರ್ನರ್ ಆಸ್ಟ್ರೇಲಿಯಾಗೆ ಉತ್ತಮ ಆರಂಭವನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಆರಂಭಿಕ ಆಟಗಾರ ಮಿಚೆಲ್ ಮಾರ್ಶ್ ತಂಡ 5 ರನ್‌ಗಳಿಸಿದ್ದಾಗ ವಿಕೆಟ್ ಕಳೆದುಕೊಂಡಿದ್ದರೂ ಸ್ಮಿತ್ ಜೊತೆಗೆ ಸೇರಿಕೊಂಡು ಅರ್ಧ ಶತಕದ ಜೊತೆಯಾಟವನ್ನು ನೀಡಿದರು. 52 ಎಸೆತಗಳನ್ನು ಎದುರಿಸಿದ ವಾರ್ನರ್ 41 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡಿದ್ದಾರೆ. ಕುಲ್‌ದೀಪ್ ಯಾದವ್ ಅವರ ಬೌಲಿಂಗ್‌ನಲ್ಲಿ ಅವರಿಗೇ ಕ್ಯಾಚ್ ನೀಡಿ ವಾರ್ನರ್ ನಿರ್ಗಮಿಸಿದರು.

ಆಸ್ಟ್ರೇಲಿಯಾ ಆಡುವ ಬಖಗ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್

ಭಾರತ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್

Story first published: Sunday, October 8, 2023, 16:17 [IST]
Other articles published on Oct 8, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+