Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs AUS: ಪರ್ತ್ ಟೆಸ್ಟ್‌ಗೆ ಮುನ್ನ ಟೀಮ್ ಇಂಡಿಯಾಗೆ ಡಬಲ್ ಗುಡ್‌ ನ್ಯೂಸ್‌!

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಪರ್ತ್‌ನ ಆಪ್ಟಸ್ ಸ್ಟೇಡಿಯಂ ಆತಿಥ್ಯ ವಹಿಸಿದೆ. ನವೆಂಬರ್ 22 ರಂದು ಉಭಯ ತಂಡಗಳು ಮುಖಾಮುಖಿಯಾಗಲಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಭಾರತ ತಂಡದಿಂದ ಒಂದರ ಹಿಂದೊಂದು ಕೆಟ್ಟ ಸುದ್ದಿಗಳು ಬರುತ್ತಲೇ ಇವೆ. ಆದರೆ ಇದೀಗ ಭಾರತ ತಂಡಕ್ಕೆ ಸಂತಸದ ಸುದ್ದಿಯೊಂದು ತಲುಪಿದೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಆಸ್ಟ್ರೇಲಿಯಾಕ್ಕೆ ಹಾರಲು ಸಿದ್ಧರಾಗಿದ್ದಾರೆ.

ರೋಹಿತ್ ಅನುಪಸ್ಥಿತಿಯಲ್ಲಿ, ಪರ್ತ್ ಟೆಸ್ಟ್‌ಗೆ ತಂಡದ ನಾಯಕತ್ವವು ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ವಹಿಸಿಕೊಂಡಿದ್ದಾರೆ. ಆದರೆ ಮುಂದಿನ ಪಂದ್ಯಕ್ಕೂ ಮುನ್ನ ರೋಹಿತ್ ನಾಯಕತ್ವ ವಹಿಸಿಕೊಳ್ಳಲು ತಂಡವನ್ನು ಸೇರಿಕೊಳ್ಳಲಿದ್ದಾರೆ. ಜೊತೆಗೆ ಸ್ಟಾರ್ ವೇಗದ ಬೌಲರ್ ಕೂಡ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

IND vs AUS Double good news for Team India before the Perth Test

ವರದಿಗಳ ಪ್ರಕಾರ, ಪರ್ತ್ ಟೆಸ್ಟ್ ವೇಳೆ ರೋಹಿತ್ ಶರ್ಮಾ ಭಾರತ ತಂಡದೊಂದಿಗೆ ಇರಲಿದ್ದಾರೆ. ಅವರು ನವೆಂಬರ್ 24 ರಂದು ತಂಡವನ್ನು ಸೇರುವ ನಿರೀಕ್ಷೆಯಿದೆ. ಹಿಟ್‌ಮ್ಯಾನ್ ತನ್ನ ಎರಡನೇ ಮಗುವಿನ ಜನನದ ಕಾರಣ ಪರ್ತ್ ಟೆಸ್ಟ್‌ನಿಂದ ಹೊರಗುಳಿದಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಡಿಸೆಂಬರ್ 6-10 ರಂದು ಅಡಿಲೇಡ್‌ನಲ್ಲಿ ನಡೆಯಲಿದ್ದು, ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಕಮಾಂಡ್ ರೋಹಿತ್ ಶರ್ಮಾ ಕೈಯಲ್ಲಿರಲಿದೆ.

ಅಭ್ಯಾಸ ಪಂದ್ಯ

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಗಾಗಿ ರೋಹಿತ್ ಶರ್ಮಾ ಮುಂಬೈನಲ್ಲಿ ಅಭ್ಯಾಸ ನಡೆಸಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದೀಗ ಎರಡನೇ ಟೆಸ್ಟ್‌ಗೆ ಸೇರುವ ಮುನ್ನ ರೋಹಿತ್ ಶರ್ಮಾ ಟೀಮ್ ಇಂಡಿಯಾ ಪರ ಅಭ್ಯಾಸ ಪಂದ್ಯವನ್ನೂ ಆಡಲಿದ್ದಾರೆ. ಪಂದ್ಯವು ನವೆಂಬರ್ 30 ರಿಂದ ಡಿಸೆಂಬರ್ 1 ರವರೆಗೆ ಕ್ಯಾನ್‌ಬೆರಾದ ಮನುಕಾ ಓವರ್‌ನಲ್ಲಿ ನಡೆಯಲಿದೆ.

ಆಸ್ಟ್ರೇಲಿಯಾಕ್ಕೆ ಹಾರಲಿರುವ ವೇಗಿ

ಪರ್ತ್ ಟೆಸ್ಟ್‌ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟೀಮ್ ಇಂಡಿಯಾ ಹಂಗಾಮಿ ನಾಯಕ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಶಮಿ ಬಗ್ಗೆ ಬಿಗ್ ಅಪ್ಡೇಟ್‌ ನೀಡಿದ್ದಾರೆ. ' ಶಮಿ ಭಾಯ್ ಕ್ರಿಕೆಟ್‌ ಆಡಲು ಆರಂಭಿಸಿದ್ದು, ಅವರು ಭಾರತ ತಂಡ ಅವಿಭಾಜ್ಯ ಅಂಗವಾಗಿದ್ದಾರೆ. ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಕೂಡ ಅವರ ಮೇಲೆ ನಿಗಾ ವಹಿಸಿದೆ ಎಂಬುದು ನನಗೆ ಗೊತ್ತಿದೆ. ಈ ವಿಷಯಗಳು ಕಾರ್ಯರೂಪಕ್ಕೆ ಬರುತ್ತವೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.

Story first published: Thursday, November 21, 2024, 21:05 [IST]
Other articles published on Nov 21, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+