For Quick Alerts
ALLOW NOTIFICATIONS  
For Daily Alerts
 

IND vs AUS: ಏಕದಿನ ವಿಶ್ವಕಪ್‌ನಲ್ಲಿ ಪಾಂಟಿಂಗ್, ಸಂಗಕ್ಕಾರ ಹಿಂದಿಕ್ಕಿದ ವಿರಾಟ್ ಕೊಹ್ಲಿ; ವಿಶ್ವ ಕ್ರಿಕೆಟ್‌ಗೆ ಈತನೇ ಅಧಿಪತಿ

ಭಾನುವಾರ, ನವೆಂಬರ್ 19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2023ರ ಐಸಿಸಿ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ನಿರ್ಣಾಯಕ ಅರ್ಧಶತಕ ಬಾರಿಸಿದರು.

ಇದೇ ವೇಳೆ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಏಕದಿನ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಎರಡನೇ ಆಟಗಾರರಾದರು. 35 ವರ್ಷದ ಕೊಹ್ಲಿ ಈ ಮೂಲಕ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರನ್ನು ಹಿಂದಿಕ್ಕಿದರು.

IND vs AUS Final: Virat Kohli Surpasses Ricky Ponting, Kumar Sangakkara in ODI World Cup

ಭಾರತದ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು 45 ಪಂದ್ಯಗಳಿಂದ 56.95ರ ಸರಾಸರಿ ಮತ್ತು 88.98ರ ಸ್ಟ್ರೈಕ್ ರೇಟ್‌ನಲ್ಲಿ 2278 ರನ್ ಗಳಿಸಿದ್ದಾರೆ. ಇದರಲ್ಲಿ ಐದು ಶತಕಗಳು ಮತ್ತು 11 ಅರ್ಧಶತಕಗಳನ್ನು ಬಾರಿಸಿದ್ದಾರೆ.

1
1-2023

ಇನ್ನು 2011ರಲ್ಲಿ ತಮ್ಮ ಕೊನೆಯ ವಿಶ್ವಕಪ್‌ನಲ್ಲಿ ಆಡಿದ ರಿಕಿ ಪಾಂಟಿಂಗ್, 46 ಪಂದ್ಯಗಳಿಂದ 45.86 ಸರಾಸರಿ ಮತ್ತು 79.95 ಸ್ಟ್ರೈಕ್ ರೇಟ್‌ನಲ್ಲಿ 1743 ರನ್ ಗಳಿಸಿದರು. ಇದರಲ್ಲಿ ಐದು ಶತಕ ಮತ್ತು ಆರು ಅರ್ಧಶತಕಗಳನ್ನು ಕಲೆಹಾಕಿದ್ದಾರೆ.

ಇದೀಗ ವಿರಾಟ್ ಕೊಹ್ಲಿ ತಮ್ಮ ನಾಲ್ಕನೇ ಏಕದಿನ ವಿಶ್ವಕಪ್ ಆಡಿದ್ದು, ಅವರ ಪ್ರದರ್ಶನವು ಅವರನ್ನು ಕ್ರಿಕೆಟ್ ಲೆಜೆಂಡ್ ಆಗಿ ದೃಢವಾಗಿ ಸ್ಥಾಪಿಸಿದೆ. ಭಾರತದ ಬ್ಯಾಟಿಂಗ್ ಶಕ್ತಿಯು ಅವರ ತಂಡದ ಅಭಿಯಾನದಲ್ಲಿ ಪ್ರಮುಖ ಪಾತ್ರ ವಹಿಸಿತು.

IND vs AUS Final: Virat Kohli Surpasses Ricky Ponting, Kumar Sangakkara in ODI World Cup

ಏಕದಿನ ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಯಾವುದೇ ಆಟಗಾರನಿಗಿಂತ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ವಿರಾಟ್ ಕೊಹ್ಲಿ ನಿರ್ಮಿಸಿದರು.

2023ರ ಏಕದಿನ ವಿಶ್ವಕಪ್‌ನ 11 ಇನ್ನಿಂಗ್ಸ್‌ಗಳಿಂದ 95.62ರ ಸರಾಸರಿ ಮತ್ತು 90.31ರ ಸ್ಟ್ರೈಕ್ ರೇಟ್‌ನಲ್ಲಿ 765 ರನ್ ಗಳಿಸಿ ತಮ್ಮ ಅಭಿಯಾನ ಮುಗಿಸಿದರು.

ಏಕದಿನ ಕ್ರಿಕೆಟ್‌ನಲ್ಲಿ 50ನೇ ಶತಕ ದಾಖಲಿಸಿರುವ ವಿರಾಟ್ ಕೊಹ್ಲಿಯ ಪಯಣ ಅವರ ಕ್ಲಾಸ್ ಮತ್ತು ಸ್ಥೈರ್ಯಕ್ಕೆ ಸಾಕ್ಷಿಯಾಗಿತ್ತು. ಮುಂಬೈನಲ್ಲಿ ನ್ಯೂಜಿಲೆಂಡ್ ವಿರುದ್ಧದ ಅಧಿಕ ಒತ್ತಡದ ಸೆಮಿಫೈನಲ್ ಪಂದ್ಯದ 42ನೇ ಓವರ್‌ನಲ್ಲಿ ಲಾಕಿ ಫರ್ಗುಸನ್ ಬೌಲಿಂಗ್‌ನಲ್ಲಿ ಎರಡು ರನ್‌ಗೆ ಫ್ಲಿಕ್ ಮಾಡುವ ಮೂಲಕ ಈ ಐತಿಹಾಸಿಕ ಮೈಲಿಗಲ್ಲನ್ನು ತಲುಪಿದರು.

ಈ ಶತಕವು ಮಹತ್ವದ ಸಂದರ್ಭವಾಗಿದ್ದು, ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 50 ಶತಕಗಳನ್ನು ಬಾರಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾದರು. ಈ ಮೂಲಕ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಹಿಂದಿನ ದಾಖಲೆಯನ್ನು ಮೀರಿಸಿದೆ.

2023ರ ವಿಶ್ವಕಪ್ ಫೈನಲ್‌ನಲ್ಲಿ ಕುಸಿದಿದ್ದ ಭಾರತ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಜೋಡಿ ನೆರವಾದರು. ಔಟಾಗುವ ಮುನ್ನ ವಿರಾಟ್ ಕೊಹ್ಲಿ 63 ಎಸೆತಗಳಲ್ಲಿ 4 ಬೌಂಡರಿಗಳ ಸಮೇತ 54 ರನ್ ಬಾರಿಸಿದರು.

ಕುಮಾರ ಸಂಗಕ್ಕಾರ ಹಿಂದಿಕ್ಕಿದ ವಿರಾಟ್ ಕೊಹ್ಲಿ

ಐಸಿಸಿ ಪಂದ್ಯಾವಳಿಗಳ ಫೈನಲ್‌ನಲ್ಲಿ ಅತಿ ಹೆಚ್ಚು ರನ್ ದಾಖಲೆಗಾಗಿ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಇದೀಗ ಶ್ರೀಲಂಕಾದ ಮಾಜಿ ಕ್ರಿಕೆಟಿಗ ಕುಮಾರ ಸಂಗಕ್ಕಾರ ಅವರನ್ನು ಹಿಂದಿಕ್ಕಿದರು.

ಕುಮಾರ ಸಂಗಕ್ಕಾರ ಐಸಿಸಿ ಪಂದ್ಯಾವಳಿಗಳ ಫೈನಲ್‌ನಲ್ಲಿ 320 ರನ್ ಗಳಿಸಿದರೆ, ವಿರಾಟ್ ಕೊಹ್ಲಿ ಆ ದಾಖಲೆಯನ್ನು ಮುರಿದರು.

ಏಕದಿನ ವಿಶ್ವಕಪ್‌ನಲ್ಲಿ ಸತತ ಐದು 50+ ಸ್ಕೋರ್‌ಗಳು

5 ಸ್ಟೀವನ್ ಸ್ಮಿತ್- 2015ರಲ್ಲಿ
5 ವಿರಾಟ್ ಕೊಹ್ಲಿ - 2019ರಲ್ಲಿ
5 ವಿರಾಟ್ ಕೊಹ್ಲಿ - 2023ರಲ್ಲಿ

Story first published: Sunday, November 19, 2023, 17:06 [IST]
Other articles published on Nov 19, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+