IND vs AUS: ಟೀಮ್ ಇಂಡಿಯಾ ಓಪನರ್ ಬಗ್ಗೆ ಸುಳಿವು ಕೊಟ್ಟ ಕೋಚ್ ಗೌತಮ್ ಗಂಭೀರ್
ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಸ್ಕಾರ್ ಟ್ರೋಫಿ ಟೆಸ್ಟ್ ಸರಣಿಯೂ ನವೆಂಬರ್ 22 ರಿಂದ ಪ್ರಾರಂಭವಾಗಲಿದೆ. ಆಸ್ಟ್ರೇಲಿಯಾ ನೆಲದಲ್ಲಿ ಭಾರತ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 2024ರ ನವೆಂಬರ್ 22 ರಿಂದ 2025 ರ ಜನವರಿ 7 ರವರೆಗೆ 5 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಗಾಗಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದೆ. ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ಟೀಮ್ ಇಂಡಿಯಾ ಹೆಡ್ ಕೋಚ್ ಗೌತಮ್ ಗಂಭೀರ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕೆಲವು ಪ್ರಮುಖ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಡುವ ಬಗ್ಗೆ ಅನುಮಾನಗಳಿವೆ. ಇದಲ್ಲದೇ, ರೋಹಿತ್ ಶರ್ಮಾ ಎರಡನೇ ಟೆಸ್ಟ್ ಪಂದ್ಯದಿಂದಲ್ಲೂ ದೂರ ಉಳಿಯಬಹುದು. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಟೆಸ್ಟ್ ಪಂದ್ಯಗಳು ಕ್ರಮವಾಗಿ ಪರ್ತ್, ಅಡಿಲೇಡ್, ಬ್ರಿಸ್ಬೇನ್, ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ನಡೆಯಲಿವೆ.
ಇಂತಹ ಪರಿಸ್ಥಿತಿಯಲ್ಲಿ ರೋಹಿತ್ ಶರ್ಮಾ ಅವರು ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಆಡಲು ಸಾಧ್ಯವಾಗದಿದ್ದರೆ, ಟೀಮ್ ಇಂಡಿಯಾಕ್ಕೆ ಓಪನ್ ಮಾಡುವವರು ಯಾರು? ಎಂಬ ಪ್ರಶ್ನೆಗಳು ಅಭಿಮಾನಿಗಳಲ್ಲಿ ಮೂಡಿವೆ. ಇದೀಗ ಕೋಚ್ ಗೌತಮ್ ಗಂಭೀರ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೌತಮ್ ಗಂಭೀರ್, 'ರೋಹಿತ್ ಶರ್ಮಾ ಲಭ್ಯವಿಲ್ಲದಿದ್ದರೆ ನಾವು ಮೊದಲ ಟೆಸ್ಟ್‌ಗೂ ಮುನ್ನ ನಿರ್ಧಾರ ತೆಗೆದುಕೊಳ್ಳುತ್ತೇವೆ. ಕೆಎಲ್ ರಾಹುಲ್, ಅಭಿಮನ್ಯು ಈಶ್ವರನ್ ಆರಂಭಿಕ ಬ್ಯಾಟರ್ ಆಗಿ ಇದ್ದಾರೆ. ನಾವು ಸಾಧ್ಯವಾದಷ್ಟು ಅತ್ಯುತ್ತಮ ಆಟಗಾರರ ಜೊತೆ ಆಡಲು ಪ್ರಯತ್ನಿಸುತ್ತೇವೆ. ರಣಜಿ ಟ್ರೋಫಿಯಲ್ಲಿ ಅಸ್ಸಾಂ ವಿರುದ್ಧ ಅಭಿಮನ್ಯು ಈಶ್ವರನ್ ಉತ್ತಮ ಪ್ರದರ್ಶನ ನೀಡಿದರು ಎಂದು ಹೇಳಿದ್ದಾರೆ.
ನಾಯಕ ಯಾರು?
ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ರೋಹಿತ್ ಶರ್ಮಾ ಲಭ್ಯವಿಲ್ಲದಿದ್ದರೆ ಟೀಮ್ ಇಂಡಿಯಾವನ್ನು ಮುನ್ನಡೆಸುವವರು ಯಾರು ಎಂಬ ಮತ್ತೊಂದು ಪ್ರಶ್ನೆ ಕೂಡ ಎದ್ದಿದೆ. ಒಂದು ವೇಳೆ ರೋಹಿತ್ ಶರ್ಮಾ ಮೊದಲೆರಡು ಪಂದ್ಯಗಳಲ್ಲಿ ಕಾಣಿಸಿಕೊಳ್ಳದಿದ್ದರೆ ಜಸ್ಪ್ರೀತ್ ಬುಮ್ರಾ ಅವರು ಭಾರತ ಟೆಸ್ಟ್ ತಂಡದ ನಾಯಕತ್ವ ವಹಿಸಬಹುದು ಎಂದು ಗೌತಮ್ ಗಂಭೀರ್ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಭಾರತಕ್ಕೆ ಕೋಚ್ ಆಗಿರುವುದು ಗೌರವ ಮತ್ತು ಭಾಗ್ಯ. ನಾವು ಎದುರಿಸುತ್ತಿರುವ ಟೀಕೆಗಳನ್ನು ನಾವು ಸ್ವೀಕರಿಸುತ್ತೇವೆ. ನಾವೀಗ ಮುಂದೆ ಸಾಗಬೇಕಾಗಿದೆ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications