Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs AUS: ಅಂತಿಮ ಟಿ20 ಪಂದ್ಯದಲ್ಲೂ ಆಸೀಸ್ ವಿರುದ್ಧ ಭಾರತದ ದಿಗ್ವಿಜಯ; 4-1 ಅಂತರದಲ್ಲಿ ಸರಣಿ ಜಯ

ಭಾನುವಾರ, ಡಿಸೆಂಬರ್ 3ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐದು ಪಂದ್ಯಗಳ ಟಿ20 ಸರಣಿಯ ಐದನೇ ಹಾಗೂ ಅಂತಿಮ ಪಂದ್ಯದಲ್ಲಿ ಆತಿಥೇಯ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ರೋಚಕ ಗೆಲುವು ಸಾಧಿಸುವ ಮೂಲಕ ಸರಣಿಯನ್ನು 4-1 ಅಂತರದಿಂದ ವಶಪಡಿಸಿಕೊಂಡಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಭಾರತ ತಂಡ ಶ್ರೇಯಸ್ ಅಯ್ಯರ್ ಅವರ ಅಮೋಘ ಅರ್ಧಶತಕದ ಸಹಾಯದಿಂದ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 160 ರನ್‌ಗಳನ್ನು ಕಲೆಹಾಕಿತು.

IND vs AUS: India Beat Australia By 6 Runs In 5th T20 Match And Clinches Series 4-1

161 ರನ್‌ಗಳ ಸವಾಲಿನ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಬೆನ್ ಮೆಕ್‌ಡರ್ಮಾಟ್ ಅವರ ಅರ್ಧಶತಕದ ಹೊರತಾಗಿಯೂ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 154 ರನ್ ಗಳಿಸಿತು ಮತ್ತು 6 ರನ್‌ಗಳ ಸೋಲು ಅನುಭವಿಸಿತು.

ಆಸ್ಟ್ರೇಲಿಯಾ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಟ್ರಾವಿಸ್ ಹೆಡ್ ಮತ್ತು ಜೋಶ್ ಫಿಲಿಪ್ ಉತ್ತಮ ಆರಂಭ ನೀಡುವಲ್ಲಿ ವಿಫಲರಾದರು. ತಂಡದ ಮೊತ್ತ 22 ರನ್‌ಗಳಾಗಿದ್ದಾಗ 4 ರನ್ ಗಳಿಸಿದ್ದ ಜೋಶ್ ಫಿಲಿಪ್ ವಿಕೆಟ್ ಒಪ್ಪಿಸಿದರು.

ನಂತರ ಬಂದ ಬೆನ್ ಮೆಕ್‌ಡರ್ಮಾಟ್ ಅರ್ಧಶತಕ ಗಳಿಸಿ ತಂಡವನ್ನು ಗೆಲ್ಲಿಸಲು ಪ್ರಯತ್ನಪಟ್ಟರು ಮತ್ತು 36 ಎಸೆತಗಳನ್ನು ಎದುರಿಸಿ 5 ಸಿಕ್ಸರ್‌ಗಳನ್ನು ಸಿಡಿಸಿ 54 ರನ್ ಬಾರಿಸಿ ಔಟಾದರು. ಇದಕ್ಕೂ ಮುನ್ನ ವೇಗವಾಗಿ ರನ್ ಗಳಿಸುತ್ತಿದ್ದ ಟ್ರಾವಿಸ್ ಹೆಡ್ 18 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 28 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

IND vs AUS: India Beat Australia By 6 Runs In 5th T20 Match And Clinches Series 4-1

ಇನ್ನು ಆರನ್ ಹಾರ್ಡಿ 6 ರನ್ ಗಳಿಸಿದರೆ, ಟಿಮ್ ಡೇವಿಡ್ 17 ರನ್, ಮ್ಯಾಥ್ಯೂ ಶಾರ್ಟ್ 16 ರನ್, ನಾಯಕ ಮ್ಯಾಥ್ಯೂ ವೇಡ್ 22 ರನ್ ಗಳಿಸಿದರು. ನಾಯಕನ ವಿಕೆಟ್ ಬೀಳುತ್ತಿದ್ದಂತೆಯೇ ಆಸ್ಟ್ರೇಲಿಯಾ ತಂಡದ ಸೋಲು ಖಚಿತವಾಯಿತು.

ಬೌಲಿಂಗ್‌ನಲ್ಲಿ ಭಾರತ ತಂಡದ ಪರ ಮುಕೇಶ್ ಕುಮಾರ್ 3 ವಿಕೆಟ್ ಕಬಳಿಸಿದರೆ, ಅರ್ಶ್‌ದೀಪ್ ಸಿಂಗ್ ಮತ್ತು ರವಿ ಬಿಷ್ಣೋಯ್ ತಲಾ ಎರಡು ವಿಕೆಟ್ ಪಡೆದರು. ಉಳಿದಂತೆ ಅಕ್ಷರ್ ಪಟೇಲ್ ಒಂದು ವಿಕೆಟ್ ಕಿತ್ತರು.

ಇದಕ್ಕೂ ಮುನ್ನ ಭಾರತದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಯಶಸ್ವಿ ಜೈಸ್ವಾಲ್ ಮತ್ತು ರುತುರಾಜ್ ಗಾಯಕ್ವಾಡ್ ಉತ್ತಮ ಆರಂಭ ನೀಡಲು ಪ್ರಯತ್ನಿಸಿದರು. ಆದರೆ, ತಂಡದ ಮೊತ್ತ 4 ಓವರ್‌ಗಳಲ್ಲಿ 33 ರನ್‌ಗಳಾಗಿದ್ದಾಗ 15 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ಸಮೇತ 21 ರನ್ ಗಳಿಸಿದ್ದಾಗ ವಿಕೆಟ್ ಒಪ್ಪಿಸಿದರು. ಇನ್ನು 10 ರನ್ ಗಳಿಸಿ ಆಡುತ್ತಿದ್ದ ರುತುರಾಜ್ ಗಾಯಕ್ವಾಡ್ ಕೂಡಾ ಔಟಾದರು.

IND vs AUS: India Beat Australia By 6 Runs In 5th T20 Match And Clinches Series 4-1

ನಂತರ ಬಂದ ಶ್ರೇಯಸ್ ಅಯ್ಯರ್ 37 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಮೂಲಕ 53 ರನ್ ಬಾರಿಸಿ ತಂಡದ ಮೊತ್ತವನ್ನು 150ರ ಗಡಿ ದಾಟುವಂತೆ ನೋಡಿಕೊಂಡರು. ನಾಯಕ ಸೂರ್ಯಕುಮಾರ್ ಯಾದವ್ 5 ರನ್, ರಿಂಕು ಸಿಂಗ್ 6 ರನ್ ಗಳಿಸಿ ಬೇಗನೆ ವಿಕೆಟ್ ನೀಡಿದರು.

ಕೊನೆಯಲ್ಲಿ ಜಿತೇಶ್ ಶರ್ಮಾ 16 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸಹಾಯದಿಂದ 24 ರನ್ ಗಳಿಸಿದರೆ, ಅಕ್ಷರ್ ಪಟೇಲ್ 21 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 31 ರನ್ ಬಾರಿಸಿದರು.

ಬೌಲಿಂಗ್‌ನಲ್ಲಿ ಆಸ್ಟ್ರೇಲಿಯಾ ತಂಡದ ಪರ ಬೆನ್ ದ್ವಾರ್ಶುಯಿಸ್ ಮತ್ತು ಜೇಸನ್ ಬೆಹ್ರೆಂಡಾರ್ಫ್ ತಲಾ ಎರಡು ವಿಕೆಟ್ ಕಬಲಿಸಿದರೆ, ಆರನ್ ಹಾರ್ಡಿ, ತನ್ವೀರ್ ಸಂಘ ಮತ್ತು ನಾಥನ್ ಎಲ್ಲಿಸ್ ತಲಾ ಒಂದೊಂದು ವಿಕೆಟ್ ಪಡೆದರು.

Story first published: Sunday, December 3, 2023, 22:45 [IST]
Other articles published on Dec 3, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+