For Quick Alerts
ALLOW NOTIFICATIONS  
For Daily Alerts
 

IND vs AUS 1st T20: ಜೋಶ್ ಇಂಗ್ಲಿಸ್ ಸ್ಫೋಟಕ ಶತಕ: ಭಾರತಕ್ಕೆ ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾ

ಗುರುವಾರ, ನವೆಂಬರ್ 23ರಂದು ವಿಶಾಖಪಟ್ಟಣದ ವೈಎಸ್ ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುವ 5 ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯದಲ್ಲಿ ಆತಿಥೇಯ ಭಾರತ ತಂಡದ ವಿರುದ್ಧ ಪ್ರವಾಸಿ ಆಸ್ಟ್ರೇಲಿಯಾ ತಂಡವು ಬೃಹತ್ ಮೊತ್ತ ಕಲೆಹಾಕಿದೆ.

IND vs AUS: India Need 209 Runs To Win Against Australia In 1st T20 Match

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ವಿಕೆಟ್ ಕೀಪರ್-ಬ್ಯಾಟರ್ ಜೋಶ್ ಇಂಗ್ಲಿಸ್ ಅವರ ಸ್ಫೋಟಕ ಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 208 ರನ್‌ಗಳನ್ನು ಗಳಿಸಿದ್ದು, ಭಾರತ ತಂಡಕ್ಕೆ 209 ರನ್‌ಗಳ ದೊಡ್ಡ ಗುರಿ ನೀಡಿದೆ.

ಆಸ್ಟ್ರೇಲಿಯಾ ತಂಡದ ಇನ್ನಿಂಗ್ಸ್ ಆರಂಭಿಸಿದ ಸ್ಟೀವನ್ ಸ್ಮಿತ್ ಮತ್ತು ಮ್ಯಾಥ್ಯೂ ಶಾರ್ಟ್ ಉತ್ತಮ ಆರಂಭ ನೀಡಿದರು. ಮೊದಲ ವಿಕೆಟ್‌ಗೆ ಈ ಜೋಡಿ 4.4 ಓವರ್‌ಗಳಲ್ಲಿ 31 ರನ್ ಗಳಿಸಿತು. ಈ ವೇಳೆ 11 ಎಸೆತಗಳಲ್ಲಿ 3 ಬೌಂಡರಿ ಸಮೇತ 13 ರನ್ ಗಳಿಸಿ ಆಡುತ್ತಿದ್ದ ಮ್ಯಾಥ್ಯೂ ಶಾರ್ಟ್ ಔಟ್ ಆದರು.

ನಂತರ ಬಂದ ಜೋಶ್ ಇಂಗ್ಲಿಸ್ ಆರಂಭಿಕ ಸ್ಟೀವನ್ ಸ್ಮಿತ್ ಜೊತೆಗೂಡಿ ಎರಡನೇ ವಿಕೆಟ್‌ಗೆ 130 ರನ್‌ಗಳ ಜೊತೆಯಾಟ ನಿರ್ಮಿಸಿದರು. 41 ಎಸೆತಗಳಲ್ಲಿ 8 ಬೌಂಡರಿ ನೆರವಿನಿಂದ 52 ರನ್ ಗಳಿಸಿದ್ದ ಸ್ಟೀವನ್ ಸ್ಮಿತ್ ವಿಕೆಟ್ ಒಪ್ಪಿಸಿದರು.

IND vs AUS: India Need 209 Runs To Win Against Australia In 1st T20 Match

ಇನ್ನು ಆಸ್ಟ್ರೇಲಿಯಾ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದ ಜೋಶ್ ಇಂಗ್ಲಿಸ್ 50 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 8 ಸಿಕ್ಸರ್‌ಗಳ ಸಹಾಯದಿಂದ 110 ರನ್‌ಗಳ ಶತಕ ಸಿಡಿಸಿದರು. ಉಳಿದಂತೆ ಮಾರ್ಕಸ್ ಸ್ಟೋಯಿನಿಸ್ 7 ರನ್ ಮತ್ತು ಟಿಮ್ ಡೇವಿಡ್ 13 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್‌ಗಳ ಸಮೇತ 19 ರನ್ ಬಾರಿಸಿದರು.

ಬೌಲಿಂಗ್‌ನಲ್ಲಿ ಭಾರತ ತಂಡದ ಪರ ಎಲ್ಲ ಬೌಲರ್‌ಗಳು ದುಬಾರಿಯಾದರು ಮತ್ತು ಕೇವಲ ಇಬ್ಬರು ತಲಾ ಒಂದೊಂದು ವಿಕೆಟ್ ಪಡೆದರು. ಪ್ರಸಿದ್ಧ್ ಕೃಷ್ಣ 4 ಓವರ್‌ಗಳಲ್ಲಿ 50 ರನ್ ನೀಡಿ 1 ವಿಕೆಟ್ ಪಡೆದರೆ, ರವಿ ಬಿಷ್ಣೋಯ್ 4 ಓವರ್‌ಗಳಲ್ಲಿ 54 ರನ್ ನೀಡಿ 1 ವಿಕೆಟ್ ಕಬಳಿಸಿದರು. ಉಳಿದ ಬೌಲರ್‌ಗಳು ವಿಕೆಟ್ ರಹಿತರಾದರು.

Story first published: Thursday, November 23, 2023, 20:50 [IST]
Other articles published on Nov 23, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+