IND vs AUS 3rd ODI: ವಾರ್ನರ್, ಮಾರ್ಷ್, ಸ್ಮಿತ್ ಸ್ಫೋಟಕ ಬ್ಯಾಟಿಂಗ್; ಭಾರತಕ್ಕೆ ಬೃಹತ್ ಗುರಿ ನೀಡಿದ ಆಸೀಸ್
ಬುಧವಾರ, ಸೆಪ್ಟೆಂಬರ್ 27ರಂದು ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಆತಿಥೇಯ ಭಾರತ ತಂಡದ ವಿರುದ್ಧ ಪ್ರವಾಸಿ ಆಸ್ಟ್ರೇಲಿಯಾ ತಂಡವು ಬೃಹತ್ ಮೊತ್ತ ಕಲೆಹಾಕಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ ತಂಡ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 352 ರನ್‌ಗಳನ್ನು ಪೇರಿಸಿದ್ದು, ಭಾರತಕ್ಕೆ 353 ರನ್‌ಗಳ ಬೃಹತ್ ಗುರಿ ನೀಡಲಾಗಿದೆ.

ಬ್ಯಾಟಿಂಗ್ ಇನ್ನಿಂಗ್ಸ್ ತೆರೆದ ಡೇವಿಡ್ ವಾರ್ನರ್ ಮತ್ತು ಮಿಚೆಲ್ ಮಾರ್ಷ್ ಆರಂಭದಿಂದಲೇ ಆಕ್ರಮಣಕಾರಿ ಆಟವಾಡಿದರು. ಮೊದಲ ವಿಕೆಟ್‌ಗೆ ಈ ಜೋಡಿ 8.1 ಓವರ್‌ಗಳಲ್ಲಿ 78 ರನ್‌ಗಳ ಜೊತೆಯಾಟವಾಡಿದರು.
34 ಎಸೆತಗಳಲ್ಲಿ 6 ಬೌಂಡರಿ ಮತ್ತು 4 ಸಿಕ್ಸರ್ ಸಮೇತ 56 ರನ್ ಗಳಿಸಿದ್ದ ಡೇವಿಡ್ ವಾರ್ನರ್ ಅವರು ಪ್ರಸಿದ್ಧ್ ಕೃಷ್ಣ ಅವರ ಬೌಲಿಂಗ್‌ನಲ್ಲಿ ವಿಕೆಟ್ ಕೀಪರ್ ಕೆಎಲ್ ರಾಹುಲ್‌ಗೆ ಕ್ಯಾಚ್ ನೀಡಿ ಔಟಾದರು.
ಇನ್ನೊಬ್ಬ ಆರಂಭಿಕ ಮಿಚೆಲ್ ಮಾರ್ಷ್ ಆಕರ್ಷಕ ಬೌಂಡರಿ ಮತ್ತು ಸಿಕ್ಸರ್‌ಗಳ ಮೂಲಕ ತಂಡದ ಮೊತ್ತ ಹೆಚ್ಚಿಸಿದರು. ಸ್ಟೀವನ್ ಸ್ಮಿತ್ ಜೊತೆಗೆ ಎರಡನೇ ವಿಕೆಟ್‌ಗೆ 137 ರನ್‌ಗಳ ಜೊತೆಯಾಟ ನಿರ್ಮಿಸಿದರು. 84 ಎಸೆತಗಳನ್ನು ಎದುರಿಸಿ 13 ಬೌಂಡರಿ ಮತ್ತು 3 ಸಿಕ್ಸರ್‌ಗಳ ಮೂಲಕ 96 ರನ್ ಗಳಿಸಿದ್ದಾಗ ವಿಕೆಟ್ ಒಪ್ಪಿಸಿದರು ಮತ್ತು ಕೇವಲ 4 ರನ್‌ಗಳಿಂದ ಶತಕ ವಂಚಿತರಾದರು.
ಇನ್ನು ಸ್ಟೀವನ್ ಸ್ಮಿತ್ ಕೂಡ ಭಾರತೀಯ ಬೌಲರ್‌ಗಳನ್ನು ಕಾಡಿದರು ಮತ್ತು 61 ಎಸೆತಗಳಲ್ಲಿ 8 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 74 ರನ್ ಬಾರಿಸಿದರು. ಆ ಬಳಿಕ ಮಾರ್ನಸ್ ಲ್ಯಾಬುಸ್ಚಾಗ್ನೆ 58 ಎಸೆತಗಳಲ್ಲಿ 9 ಬೌಂಡರಿ ಸಮೇತ 72 ರನ್ ಸಿಡಿಸಿದರು.
ಅಲೆಕ್ಸ್ ಕ್ಯಾರಿ 11 ರನ್, ಗ್ಲೆನ್ ಮ್ಯಾಕ್ಸ್‌ವೆಲ್ 5 ರನ್, ಕ್ಯಾಮೆರಾನ್ ಗ್ರೀನ್ 9 ರನ್, ಪ್ಯಾಟ್ ಕಮ್ಮಿನ್ಸ್ ಅಜೇಯ 19 ರನ್, ಮಿಚೆಲ್ ಸ್ಟಾರ್ಕ್ ಅಜೇಯ 1 ರನ್ ಗಳಿಸಿದರು.
ಬೌಲಿಂಗ್‌ನಲ್ಲಿ ಭಾರತ ತಂಡದ ಪರ ಜಸ್ಪ್ರೀತ್ ಬುಮ್ರಾ 10 ಓವರ್‌ಗಳಲ್ಲಿ 81 ರನ್ ನೀಡಿ 3 ವಿಕೆಟ್ ಪಡೆದರೆ, ಕುಲದೀಪ್ ಯಾದವ್ 6 ಓವರ್‌ಗಳಲ್ಲಿ 48 ರನ್ ನೀಡಿ 2 ವಿಕೆಟ್ ಕಬಳಿಸಿದರು. ಉಳಿದಂತೆ ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ್ ಕೃಷ್ಣ ತಲಾ ಒಂದೊಂದು ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications