For Quick Alerts
ALLOW NOTIFICATIONS  
For Daily Alerts
 

IND vs AUS: ಆಸ್ಟ್ರೇಲಿಯಾ ವಿರುದ್ಧ ಸರಣಿ ಸೋಲು; ವಿಶ್ವಕಪ್ ಮುನ್ನ ಏಕದಿನ ನಂ.1 ಸ್ಥಾನ ಕಳೆದುಕೊಂಡ ಭಾರತ

IND vs AUS: Team India Series Defeat Against Australia; India Loses No.1 ODI Ranking Before The World Cup 2023

ಬುಧವಾರ, ಮಾರ್ಚ್ 22ರಂದು ಚೆನ್ನೈನಲ್ಲಿ ನಡೆದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ 21 ರನ್‌ಗಳ ಭರ್ಜರಿ ಗೆಲುವಿನೊಂದಿಗೆ ಭಾರತ ತಂಡದ ವಿರುದ್ಧ ಆಸ್ಟ್ರೇಲಿಯಾ ತಂಡ ಅಪರೂಪದ ಏಕದಿನ ಸರಣಿಯನ್ನು ಗೆದ್ದುಕೊಂಡಿತು.

ಹಂಗಾಮಿ ನಾಯಕನಾಗಿ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ತಂಡವನ್ನು ಈ ಸರಣಿಯಲ್ಲಿ ಮುನ್ನಡೆಸಿದರು. ಇದೇ ವೇಳೆ ಐಸಿಸಿ ಪುರುಷರ ಏಕದಿನ ತಂಡದ ಶ್ರೇಯಾಂಕದಲ್ಲಿ ಹೊಸ ವಿಶ್ವ ನಂ.1 ತಂಡವಾಗಿದೆ. ಇನ್ನು 1-2 ಅಂತರದ ಸರಣಿ ಸೋಲಿನೊಂದಿಗೆ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ವಿಶ್ವ ನಂ.1 ಸ್ಥಾನದಿಂದ ಕೆಳಗಿಳಿದಿದೆ.

IPL 2023: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿರಾಮ, ಇನ್ನೇನಿದ್ದರೂ ಐಪಿಎಲ್ ಹಂಗಾಮ; ಫ್ರಾಂಚೈಸಿ ಸೇರಲಿರುವ ಕ್ರಿಕೆಟಿಗರು

ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ 21 ರನ್‌ಗಳ ಗೆಲುವಿನಿಂದ ಆಸ್ಟ್ರೇಲಿಯಾ ತಂಡ ಭಾರತಕ್ಕಿಂತ ಒಂದು ರೇಟಿಂಗ್ ಪಾಯಿಂಟ್ ಹೆಚ್ಚಿಗೆ ಪಡೆದು ಅಗ್ರಸ್ಥಾನಕ್ಕೇರಿದೆ. ಭಾರತ ತಂಡ 112.638 ರೇಟಿಂಗ್ ಪಾಯಿಂಟ್ ಹೊಂದಿದ್ದರೆ, ಆಸ್ಟ್ರೇಲಿಯಾ ತಂಡ ಸರಣಿ ಗೆಲುವಿನೊಂದಿಗೆ 113.286 ರೇಟಿಂಗ್ ಪಾಯಿಂಟ್‌ಗಳನ್ನು ಗಳಿಸಿದೆ.

IND vs AUS: Team India Series Defeat Against Australia; India Loses No.1 ODI Ranking Before The World Cup 2023

ಅಂತಿಮ ಏಕದಿನ ಪಂದ್ಯಕ್ಕೂ ಮುನ್ನ ಭಾರತ ತಂಡ 114 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ತಂಡ 112 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿ ಎರಡನೇ ಸ್ಥಾನದಲ್ಲಿತ್ತು.

ನಾಲ್ಕು ವರ್ಷಗಳ ಬಳಿಕ ತವರಿನಲ್ಲಿ ಏಕದಿನ ಸರಣಿ ಸೋತ ಭಾರತ
ಮುಂಬೈನಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಏಕದಿನ ಪಂದ್ಯವನ್ನು ಆತಿಥೇಯ ತಂಡ ಐದು ವಿಕೆಟ್‌ಗಳಿಂದ ಗೆಲುವು ಸಾಧಿಸಿತ್ತು. ನಂತರ ವಿಶಾಖಪಟ್ಟಣದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ 10 ವಿಕೆಟ್‌ಗಳಿಂದ ಹೀನಾಯ ಸೋಲು ಅನುಭವಿಸಿತು.

ಮೂರನೇ ಏಕದಿನ ಪಂದ್ಯವನ್ನು ಆಸ್ಟ್ರೇಲಿಯಾ ತಂಡ 21 ರನ್‌ಗಳ ಜಯದೊಂದಿಗೆ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿತು. ಈ ಮೂಲಕ ಭಾರತ ತಂಡ 4 ವರ್ಷಗಳ ಬಳಿಕ ತವರಿನಲ್ಲಿ ಏಕದಿನ ಸರಣಿ ಸೋಲು ಮುಖಭಂಗ ಅನುಭವಿಸಿತು. 2019ರಲ್ಲಿ ಕೊನೆಯ ಬಾರಿಗೆ ತವರಿನಲ್ಲಿ ಏಕದಿನ ಸರಣಿ ಸೋಲು ಕಂಡಿತ್ತು.

IND vs AUS: Team India Series Defeat Against Australia; India Loses No.1 ODI Ranking Before The World Cup 2023

ಮೂರನೇ ಏಕದಿನ ಪಂದ್ಯದಲ್ಲಿ 270 ರನ್‌ಗಳ ಗೆಲುವಿನ ಗುರಿಯನ್ನು ಬೆನ್ನಟ್ಟಿದ ಆತಿಥೇಯ ಭಾರತ ತಂಡ 248 ರನ್‌ಗಳಿಗೆ ಸರ್ವಪತನ ಕಂಡಿತು. ಆಸ್ಟ್ರೇಲಿಯಾದ ಲೆಗ್ ಸ್ಪಿನ್ನರ್ ಆಡಮ್ ಝಂಪಾ ನಾಲ್ಕು ವಿಕೆಟ್‌ ಕಬಳಿಸಿ ಮಿಂಚಿದರು.

10 ಓವರ್‌ಗಳಲ್ಲಿ 45 ನೀಡಿದ ಆಡಮ್ ಝಂಪಾ ಅವರು ಶುಭ್ಮನ್ ಗಿಲ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಅವರ ವಿಕೆಟ್ ಪಡೆದು 'ಪಂದ್ಯಶ್ರೇಷ್ಠ ಪ್ರಶಸ್ತಿ'ಗೆ ಭಾಜನರಾದರು.

ಪಂದ್ಯದ ನಂತರ ಮಾತನಾಡಿದ ಆಡಮ್ ಝಂಪಾ, "ನಾನು ಭಾರತದಲ್ಲಿ ಸ್ವಲ್ಪ ಯಶಸ್ಸನ್ನು ಕಂಡಿದ್ದೇನೆ. ಭಾರತ ವಿರುದ್ಧ ಆಡುವುದು ಯಾವಾಗಲೂ ಸವಾಲಾಗಿರುತ್ತದೆ ಮತ್ತು ಕಠಿಣವಾಗಿರುತ್ತದೆ," ಎಂದರು.

"ವಿರಾಟ್ ಕೊಹ್ಲಿ, ಸೂರ್ಯಕುಮಾರ್ ವಿಕೆಟ್ ಪಡೆದ ಆಶ್ಟನ್ ಅಗರ್ ಪಂದ್ಯದ ಗತಿಯನ್ನು ಬದಲಾಯಿಸಿದರು. ಈ ಪಂದ್ಯಶ್ರೇಷ್ಠ ಪ್ರಶಸ್ತಿ ಅರ್ಹನೆಂದು ನಾನು ಭಾವಿಸುವುದಿಲ್ಲ. ನನಗಿಂತ ಮೊದಲು ಬೌಲಿಂಗ್ ಮಾಡಿದ ಹುಡುಗರಿಗೆ ಅಭಿನಂದನೆಗಳು. ನಮ್ಮ ತಂಡದ ಯೋಜನೆಯಲ್ಲಿ ನಾವು ಪರಸ್ಪರ ನಂಬಿಕೆ ಹೊಂದಿದ್ದೇವೆ," ಎಂದು ಆಡಮ್ ಝಂಪಾ ತಿಳಿಸಿದರು.

ಇನ್ನು ಈ ಏಕದಿನ ಸರಣಿಯಲ್ಲಿ ಮೊದಲ ಬಾರಿಗೆ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾದ ಆಲ್‌ರೌಂಡರ್ ಮಿಚೆಲ್ ಮಾರ್ಷ್, ಮೂರು ಪಂದ್ಯಗಳಲ್ಲಿ 194 ರನ್ ಗಳಿಸಿದ್ದಕ್ಕಾಗಿ 'ಸರಣಿ ಶ್ರೇಷ್ಠ' ಪ್ರಶಸ್ತಿ ಪಡೆದರು. ಮೂರನೇ ಪಂದ್ಯದಲ್ಲಿ 47 ಎಸೆತಗಳಲ್ಲಿ 47 ರನ್ ಬಾರಿಸಿದರು.

Story first published: Thursday, March 23, 2023, 9:50 [IST]
Other articles published on Mar 23, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+