IND vs AUS 2nd ODI; ಭಾರತ vs ಆಸ್ಟ್ರೇಲಿಯಾ 2ನೇ ಏಕದಿನ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

ಭಾನುವಾರ, ಮಾರ್ಚ್ 19ರಂದು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯ ವಿಶಾಖಪಟ್ಟಣದ ವೈಎಸ್ ರಾಜಶೇಖರ್ ರೆಡ್ಡಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ.
ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ಮೂರು ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಗೆದ್ದು, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ವಶಪಡಿಸಿಕೊಳ್ಳುವ ಗುರಿಯನ್ನು ಭಾರತ ತಂಡ ಹೊಂದಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್‌ಗಳ ಜಯದೊಂದಿಗೆ ಭಾರತ ತಂಡ ಈಗಾಗಲೇ 1-0 ಅಂತರದ ಮುನ್ನಡೆ ಸಾಧಿಸಿದೆ.
ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಎರಡು ಬದಲಾವಣೆ ಮಾಡಿದೆ. ನಾಯಕ ರೋಹಿತ್ ಶರ್ಮಾ ಮರಳಿರುವುದರಿಂದ, ಇಶಾನ್ ಕಿಶನ್ ಹೊರಗುಳಿದಿದ್ದಾರೆ. ಇನ್ನು ಆಲ್‌ರೌಂಡರ್ ಸ್ಥಾನದಲ್ಲಿ ಶಾರ್ದೂಲ್ ಠಾಕೂರ್ ಬದಲಿಗೆ ಅಕ್ಷರ್ ಪಟೇಲ್ ಸ್ಥಾನ ಪಡೆದಿದ್ದಾರೆ.
ಇದೇ ವೇಳೆ, ಆಸ್ಟ್ರೇಲಿಯಾ ತಂಡದಲ್ಲಿಯೂ ಎರಡು ಬದಲಾವಣೆಗಳಾಗಿದ್ದು, ಗ್ಲೆನ್ ಮ್ಯಾಕ್ಸ್‌ವೆಲ್ ಬದಲಿಗೆ ನಾಥನ್ ಎಲ್ಲಿಸ್, ಜೋಶ್ ಇಂಗ್ಲಿಸ್ ಬದಲಿಗೆ ಅಲೆಕ್ಸ್ ಕ್ಯಾರಿ ಸ್ಥಾನ ಪಡೆದಿದ್ದಾರೆ.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ:
ಭಾರತ vs ಆಸ್ಟ್ರೇಲಿಯ 2ನೇ ಏಕದಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಬಹುದು.
ಭಾರತ vs ಆಸ್ಟ್ರೇಲಿಯ 2ನೇ ಏಕದಿನ ಪಂದ್ಯದ ಆಡುವ 11ರ ಬಳಗ
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಕುಲದೀಪ್ ಯಾದವ್.
ಆಸ್ಟ್ರೇಲಿಯಾ ತಂಡ: ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್ (ನಾಯಕ), ಮಿಚೆಲ್ ಮಾರ್ಷ್, ಮಾರ್ನಸ್ ಲ್ಯಾಬುಶ್ಚಾಗ್ನೆ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮಾರ್ಕಸ್ ಸ್ಟೊಯಿನಿಸ್, ಕ್ಯಾಮೆರಾನ್ ಗ್ರೀನ್, ನಾಥನ್ ಎಲ್ಲಿಸ್, ಸೀನ್ ಅಬಾಟ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications