IND vs AUS 2nd ODI: ಭಾರತ vs ಆಸ್ಟ್ರೇಲಿಯಾ 2ನೇ ಏಕದಿನ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
ಭಾನುವಾರ, ಸೆಪ್ಟೆಂಬರ್ 24ರಂದು ಇಂದೋರ್‌ನ ಹೋಳ್ಕರ್ ಸ್ಟೇಡಿಯಂನಲ್ಲಿ ಮೂರು ಪಂದ್ಯಗಳ ಸರಣಿಯ 2ನೇ ಏಕದಿನ ಪಂದ್ಯದಲ್ಲಿ ಆತಿಥೇಯ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗುತ್ತಿವೆ.
ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ಹಂಗಾಮಿ ನಾಯಕ ಸ್ಟೀವನ್ ಸ್ಮಿತ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಆದ್ದರಿಂದ ಕೆಎಲ್ ರಾಹುಲ್ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಕೆಎಲ್ ರಾಹುಲ್ ನಾಯಕತ್ವದ ಭಾರತ ತಂಡ ಎರಡು ದಿನಗಳ ಹಿಂದೆ ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್‌ಗಳಿಂದ ಗೆಲ್ಲುವ ಮೂಲಕ 1-0 ಮುನ್ನಡೆ ಪಡೆದಿದ್ದು, ಸರಣಿ ವಶಪಡಿಸಿಕೊಳ್ಳಲು ಎದುರು ನೋಡುತ್ತಿದೆ.
ಇನ್ನು ಖಾಯಂ ನಾಯಕ ಪ್ಯಾಟ್ ಕಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡವು ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಲು ಪ್ರಬಲ ಪುನರಾಗಮನ ಗುರಿಯನ್ನು ಹೊಂದಿದೆ.
ಭಾರತ ತಂಡದಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ ಅವರ ಸೇವೆಯನ್ನು ಕಳೆದುಕೊಳ್ಳಲಿದೆ. ಅವರು ತಂಡದ ಮ್ಯಾನೇಜ್‌ಮೆಂಟ್‌ನಿಂದ ಅನುಮತಿ ಪಡೆದು ತಮ್ಮ ಕುಟುಂಬವನ್ನು ಭೇಟಿ ಮಾಡಲು ತೆರಳಿದ್ದಾರೆ.

ಎರಡನೇ ಪಂದ್ಯಕ್ಕೆ ಜಸ್ಪ್ರೀತ್ ಬುಮ್ರಾ ಬದಲಾಗಿ ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವಕಾಶ ಪಡೆದುಕೊಂಡಿದ್ದಾರೆ. ರಾಜ್‌ಕೋಟ್‌ನಲ್ಲಿ ನಡೆಯಲಿರುವ ಅಂತಿಮ ಏಕದಿನ ಪಂದ್ಯಕ್ಕೆ ಜಸ್ಪ್ರೀತ್ ಬುಮ್ರಾ ತಂಡವನ್ನು ಸೇರಿಕೊಳ್ಳಲಿದ್ದಾರೆ.
ಭಾರತ vs ಆಸ್ಟ್ರೇಲಿಯಾ 2ನೇ ಏಕದಿನ ಪಂದ್ಯದ ಆಡುವ 11ರ ಬಳಗ
ಭಾರತ: ಇಶಾನ್ ಕಿಶನ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ನಾಯಕ/ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್, ಪ್ರಸಿದ್ಧ್ ಕೃಷ್ಣ
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಮ್ಯಾಥ್ಯೂ ಶಾರ್ಟ್, ಸ್ಟೀವನ್ ಸ್ಮಿತ್ (ನಾಯಕ), ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಸ್ ಇಂಗ್ಲಿಸ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ಸೀನ್ ಅಬಾಟ್, ಸ್ಪೆನ್ಸರ್ ಜಾನ್ಸನ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications