IND vs AUS 5th T20: ಆಸೀಸ್ ವಿರುದ್ಧ ಕೊನೆಯ ಪಂದ್ಯ ಗೆದ್ದು ಬೀಗುವುದೇ ಭಾರತ; ಟಾಸ್ ವರದಿ, ಆಡುವ 11ರ ಬಳಗ
ಭಾನುವಾರ, ಡಿಸೆಂಬರ್ 3ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯ ಐದನೇ ಹಾಗೂ ಅಂತಿಮ ಪಂದ್ಯದಲ್ಲಿ ಆತಿಥೇಯ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ತಂಡಗಳು ಪರಸ್ಪರ ಮುಖಾಮುಖಿಯಾಗುತ್ತಿವೆ.
ಕೊನೆಯ ಪಂದ್ಯದಲ್ಲೂ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮ್ಯಾಥ್ಯೂ ವೇಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಆದ್ದರಿಂದ, ಸೂರ್ಯಕುಮಾರ್ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.
ಐದು ಪಂದ್ಯಗಳ ಸರಣಿಯಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡದ ವಿರುದ್ಧ ಆತಿಥೇಯ ಭಾರತ ತಂಡವು ಈಗಾಗಲೇ 3-1 ಅಂತರದಿಂದ ಮುನ್ನಡೆ ಸಾಧಿಸಿದೆ.

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ಆಡುವ 11ರ ಬಳಗ
ಆಸ್ಟ್ರೇಲಿಯಾ: ಟ್ರಾವಿಸ್ ಹೆಡ್, ಜೋಶ್ ಫಿಲಿಪ್, ಬೆನ್ ಮೆಕ್‌ಡರ್ಮಾಟ್, ಆರನ್ ಹಾರ್ಡಿ, ಟಿಮ್ ಡೇವಿಡ್, ಮ್ಯಾಥ್ಯೂ ಶಾರ್ಟ್, ಮ್ಯಾಥ್ಯೂ ವೇಡ್(ವಿಕೆಟ್ ಕೀಪರ್/ನಾಯಕ), ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೇಸನ್ ಬೆಹ್ರೆಂಡಾರ್ಫ್, ತನ್ವೀರ್ ಸಂಘ.
ಭಾರತ: ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಅವೇಶ್ ಖಾನ್, ಮುಖೇಶ್ ಕುಮಾರ್, ಅರ್ಶ್‌ದೀಪ್ ಸಿಂಗ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications