Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND-W vs AUS-W: ಭಾರತ vs ಆಸ್ಟ್ರೇಲಿಯಾ ಮೊದಲ ಟಿ20 ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ

IND vs AUS: India Women vs Australia Women 1st T20 Toss Report, Playing 11 And Live Score

ಭಾರತ ಮಹಿಳಾ ಕ್ರಿಕೆಟ್ ತಂಡವು ಶುಕ್ರವಾರ (ಡಿಸೆಂಬರ್ 9) ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಐದು ಟಿ20 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡವನ್ನು ಎದುರಿಸುತ್ತಿದೆ.

ಟಾಸ್ ಗೆದ್ದ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಅಲಿಸ್ಸಾ ಹೀಲಿ ಮೊದಲು ಬೌಲಿಂಗ್ ಆಯ್ದುಕೊಂಡರೆ, ಹರ್ಮನ್‌ಪ್ರೀತ್ ನಾಯಕತ್ವದ ಭಾರತೀಯ ಮಹಿಳಾ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಎರಡು ತಿಂಗಳು ಬಾಕಿ ಇರುವಾಗ, ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತೀಯ ಮಹಿಳಾ ತಂಡವು ಐದು ಟಿ20 ಪಂದ್ಯಗಳ ನಂತರ ಹೇಗೆ ಸಜ್ಜಾಗಿರುತ್ತಾರೆ ಎಂಬುದನ್ನು ಕಾದು ನೊಡಬೇಕು.

ತವರಿನಲ್ಲಿ ನಡೆಯುವ ಟಿ20 ಸರಣಿಯಲ್ಲಿ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಹೆಚ್ಚಿನ ರನ್ ಗಳಿಸುವ ನಿರೀಕ್ಷೆ ಇದೆ. ಮತ್ತೊಬ್ಬ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಅವರು ಶಾರ್ಟ್ ಬಾಲ್ ವಿರುದ್ಧದ ದೌರ್ಬಲ್ಯವನ್ನು ಮೆಟ್ಟಿ ನಿಂತು ಬ್ಯಾಟಿಂಗ್ ಮಾಡಬೇಕಿದೆ.

ಇನ್ನು ಜೆಮಿಮಾ ರೋಡ್ರಿಗಸ್ ರಾಷ್ಟ್ರೀಯ ತಂಡಕ್ಕೆ ಮರಳಿದ ನಂತರ ಉತ್ತಮ ಬ್ಯಾಟಿಂಗ್ ಫಾರ್ಮ್‌ನಲ್ಲಿದ್ದಾರೆ. ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಕೂಡ ಸ್ಥಿರವಾಗಿ ಆಡುತ್ತಿದ್ದಾರೆ. ಹರ್ಲೀನ್ ಡಿಯೋಲ್ ಮತ್ತು ಯಾಸ್ತಿಕಾ ಭಾಟಿಯಾ ಅವರು ಚಾಲೆಂಜರ್ ಟ್ರೋಫಿಯಲ್ಲಿ ಹೆಚ್ಚಿನ ರನ್ ಗಳಿಸಿ ಭರವಸೆ ಮೂಡಿಸಿದ್ದಾರೆ.

ಮಹಿಳಾ ತಂಡದ ಮುಖ್ಯ ಕೋಚ್ ರಮೇಶ್ ಪೊವಾರ್ ಅವರನ್ನು ಟಿ20 ಸರಣಿಗೂ ಮೊದಲೇ ಎನ್‌ಸಿಎಗೆ ವರ್ಗಾವಣೆ ಮಾಡಲಾಗಿದೆ ಮತ್ತು ಭಾರತದ ಮಾಜಿ ಬ್ಯಾಟ್ಸ್‌ಮನ್ ಹೃಷಿಕೇಶ್ ಕಾನಿಟ್ಕರ್ ಅವರನ್ನು ನಿಯೋಜಿತ ಬ್ಯಾಟಿಂಗ್ ಕೋಚ್ ಆಗಿ ನೇಮಿಸಲಾಗಿದೆ.

ಆಟಗಾರರೊಂದಿಗಿನ ಭಿನ್ನಾಭಿಪ್ರಾಯಗಳಿಂದಾಗಿ ಮಾಜಿ ಮುಖ್ಯ ಕೋಚ್ ರಮೇಶ್ ಪೊವಾರ್ ಅವರನ್ನು ಎನ್‌ಸಿಎಗೆ ವರ್ಗಾಹಿಸಲಾಗಿದೆ ಎಂಬ ಹೇಳಿಕೆಯನ್ನು ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ತಳ್ಳಿಹಾಕಿದ್ದಾರೆ. ಇನ್ನು ಹೃಷಿಕೇಶ್ ಕಾನಿಟ್ಕರ್ ಈಗ ಬ್ಯಾಟಿಂಗ್ ಕೋಚ್ ಆಗಿ ಸೇರ್ಪಡೆಯಾಗಿರುವುದರಿಂದ ಭಾರತ ತಂಡವು ಉತ್ತಮಗೊಳ್ಳಲಿದೆ ಎಂದು ಹೇಳಿದರು.

ಭಾರತ vs ಆಸ್ಟ್ರೇಲಿಯಾ ಮಹಿಳಾ ತಂಡಗಳ ಸಂಭಾವ್ಯ 11ರ ಬಳಗ
ಭಾರತ: ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ದೇವಿಕಾ ವೈದ್ಯ, ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ರಾಧಾ ಯಾದವ್, ಅಂಜಲಿ ಸರ್ವಾನಿ, ಮೇಘನಾ ಸಿಂಗ್, ರೇಣುಕಾ ಸಿಂಗ್,

ಆಸ್ಟ್ರೇಲಿಯಾ: ಅಲಿಸ್ಸಾ ಹೀಲಿ (ನಾಯಕಿ), ಬೆತ್ ಮೂನಿ, ಎಲಿಸ್ಸೆ ಪೆರ್ರಿ, ಆಶ್ಲೀಗ್ ಗಾರ್ಡ್ನರ್, ತಾಲಿಯಾ ಮೆಕ್‌ಗ್ರಾತ್, ಗ್ರೇಸ್ ಹ್ಯಾರಿಸ್, ಅನ್ನಾಬೆಲ್ ಸದರ್ಲ್ಯಾಂಡ್, ಜೆಸ್ ಜೊನಾಸೆನ್, ಅಲಾನಾ ಕಿಂಗ್, ಕಿಮ್ ಗಾರ್ತ್, ಮೇಗನ್ ಶುಟ್

Story first published: Friday, December 9, 2022, 18:44 [IST]
Other articles published on Dec 9, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+