IND vs AUS 2nd T20: ಭಾರತ vs ಆಸ್ಟ್ರೇಲಿಯಾ 2ನೇ ಟಿ20 ಪಂದ್ಯಕ್ಕೆ ಮಳೆ ಭೀತಿ; ತಿರುವನಂತಪುರಂ ಹವಾಮಾನ ವರದಿ
ಭಾನುವಾರ, ನವೆಂಬರ್ 26ರಂದು ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಐದು ಪಂದ್ಯಗಳ ಸರಣಿಯ ಎರಡನೇ ಟಿ20 ಪಂದ್ಯದಲ್ಲಿ ಆತಿಥೇಯ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ತಂಡಗಳು ಪರಸ್ಪರ ಮುಖಾಮುಖಿಯಾಗುತ್ತಿವೆ.
ಸರಣಿಯ ಮೊದಲ ಪಂದ್ಯದಲ್ಲಿ ಆರಂಭಿಕ ನೀರಸ ಪ್ರದರ್ಶನದ ನಂತರ, ಭಾರತದ ಯುವ ಬೌಲಿಂಗ್ ವಿಭಾಗವು ಬಲಿಷ್ಠ ಆಸ್ಟ್ರೇಲಿಯನ್ ಬ್ಯಾಟಿಂಗ್ ಲೈನ್ಅಪ್ ಅನ್ನು ಹಿಡಿತಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸಿತು. ನಾಯಕ ಸೂರ್ಯಕುಮಾರ್ ಯಾದವ್ ತಮ್ಮ ಬ್ಯಾಟಿಂಗ್ ಪಡೆಯನ್ನು ಮುಂದೆ ನಿಂತು ಮುನ್ನಡೆಸಿದರು.

ವಿಶಾಖಪಟ್ಟಣಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ವೇಗಿ ಮುಖೇಶ್ ಕುಮಾರ್ ಹೊರತುಪಡಿಸಿ, ಭಾರತದ ಬೌಲರ್‌ಗಳು ದುಬಾರಿಯಾದರು. ರನ್ ಹರಿವು ನಿಯಂತ್ರಣ ಸವಾಲಾಗಿ ಪರಿಣಮಿಸಿತು ಮತ್ತು ನಿಖರತೆಯ ಕೊರತೆಯನ್ನು ಅನುಭವಿಸಿದರು.
ಮ್ಯಾಥ್ಯೂ ವೇಡ್ ನಾಯಕತ್ವದ ಆಸ್ಟ್ರೇಲಿಯಾ ತಂಡದ ಪರವಾಗಿ, ಜೋಶ್ ಇಂಗ್ಲಿಸ್ ಅವರ ಅಮೋಘ ಶತಕ ತಂಡಕ್ಕೆ ಧನಾತ್ಮಕವಾಗಿ ಕಾರ್ಯನಿರ್ವಹಿಸಿದೆ. ವಿಶೇಷವಾಗಿ ಅವರು ಆರಂಭಿಕ ಬ್ಯಾಟರ್ ಆಗಿ ಬಡ್ತಿ ಪಡೆದರು. ಆದರೆ ಸ್ಟೀವನ್ ಸ್ಮಿತ್ ಅವರನ್ನು ಅಗ್ರ ಕ್ರಮಾಂಕದಲ್ಲಿ ಆಡಿಸುವ ನಿರ್ಧಾರ ದೊಡ್ಡ ಫಲ ನೀಡಲಿಲ್ಲ. ಅನುಭವಿ ಬ್ಯಾಟರ್ ವೇಗದ ಬೌಲರ್‌ಗಳನ್ನು ಎದುರಿಸಲು ಹೆಣಗಾಡಿದರು.
ಉಭಯ ತಂಡಗಳು ತಮ್ಮ ಬೌಲಿಂಗ್ ವಿಭಾಗದಲ್ಲಿ ಗಮನಾರ್ಹ ಸುಧಾರಣೆಗಳನ್ನು ಎದುರು ನೋಡುತ್ತಿವೆ. ಎರಡನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಪಿಚ್ ಪರಿಸ್ಥಿತಿಗಳ ಆಧಾರದ ಮೇಲೆ ಲೆಗ್ ಸ್ಪಿನ್ನರ್ ಆಡಮ್ ಝಂಪಾ ಅವರನ್ನು ಆಡಿಸುವ ಸಾಧ್ಯತೆಯಿದೆ.

ಕೇರಳದಲ್ಲಿ ಮಳೆ ಆರ್ಭಟ, ತಿರುವನಂತಪುರಂ ಹವಾಮಾನ ವರದಿ
ಹವಾಮಾನ ಮುನ್ಸೂಚನೆಗಳ ಪ್ರಕಾರ, ನವೆಂಬರ್ 26ರ ಭಾನುವಾರದಂದು ತಿರುವನಂತಪುರಂನಲ್ಲಿ ಶೇ.55ರಷ್ಟು ಮಳೆಯಾಗುವ ಸಾಧ್ಯತೆಯನ್ನು ಸೂಚಿಸುತ್ತವೆ.
ಪಂದ್ಯ ನಡೆಯುವ ಎರಡು ದಿನಗಳ ಹಿಂದೆ ತುಂತುರು ಮಳೆಯಾಗಿದೆ ಮತ್ತು ಪಂದ್ಯದ ದಿನ ಕೆಲವು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದ್ದು, ಇದು ಆಟದ ಮೇಲೆ ಪರಿಣಾಮ ಬೀರಬಹುದು.
Accuweather.com ಪ್ರಕಾರ, ಶೇ.55ರಷ್ಟು ಮಳೆಯ ಸಂಭವನೀಯತೆ ಮತ್ತು ಶೇ.11ರಷ್ಟು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ತಾಪಮಾನವು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ಆಗಿರಲಿದ್ದರೆ, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಳೆಯು ಪಂದ್ಯಕ್ಕೆ ಅಡ್ಡಿಪಡಿಸುವ ಸಾಧ್ಯತೆಯು ಭಾಗಶಃ ಇದ್ದರೂ, ಆದಾಗ್ಯೂ ಪೂರ್ಣ ಪ್ರಮಾಣದ ಪಂದ್ಯವು ನಡೆಯುವ ಸಾಧ್ಯತೆಯೂ ಇದೆ.

ಬ್ಯಾಟರ್‌ಗಳಿಗೆ ಕಡಿಮೆ ಸಹಾಯ ಮಾಡುವ ಪಿಚ್
ಐತಿಹಾಸಿಕವಾಗಿ, ತಿರುವನಂತಪುರಂನ ಗ್ರೀನ್‌ಫೀಲ್ಡ್ ಅಂತಾರಾಷ್ಟ್ರೀಯ ಸ್ಟೇಡಿಯಂನ ಪಿಚ್ ಬೃಹತ್ ಸ್ಕೋರಿಂಗ್ ಪಂದ್ಯಗಳನ್ನು ನೀಡಿಲ್ಲ. ಒಲ್ಲಿ ಹಿಂದಿನ ಅಂತಾರಾಷ್ಟ್ರೀಯ ಪಂದ್ಯಗಳು ಕಡಿಮೆ ಮೊತ್ತದ ಪಂದ್ಯಗಳಿಗೆ ಸಾಕ್ಷಿಯಾಗಿದೆ. ಈ ಕ್ರೀಡಾಂಗಣದಲ್ಲಿ ಕಳೆದ 10 ಪಂದ್ಯಗಳಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ 148 ಆಗಿದೆ.
ಎರಡೂ ತಂಡಗಳಲ್ಲಿ ಬೌಲಿಂಗ್ ಅಸ್ತ್ರಗಳ ಕೊರತೆ ಮತ್ತು ಈ ಮೈದಾನದಲ್ಲಿ ಲೈಟ್‌ಗಳ ಅಡಿಯಲ್ಲಿ ಚೇಸಿಂಗ್ ಕಠಿಣವಾಗುವುದರಿಂದ, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡುವುದು ಇಲ್ಲಿ ಯೋಗ್ಯವಾಗಿದೆ.
ಭಾರತ vs ಆಸ್ಟ್ರೇಲಿಯಾ 2ನೇ ಟಿ20 ಪಂದ್ಯದ ಸಂಭಾವ್ಯ ಆಡುವ 11ರ ಬಳಗ
ಭಾರತ: ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್/ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶಿವಂ ದುಬೆ/ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಅರ್ಶ್‌ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಮುಖೇಶ್ ಕುಮಾರ್.
ಆಸ್ಟ್ರೇಲಿಯಾ: ಮ್ಯಾಥ್ಯೂ ವೇಡ್ (ನಾಯಕ/ ವಿಕೆಟ್ ಕೀಪರ್), ಟ್ರಾವಿಸ್ ಹೆಡ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಆರನ್ ಹಾರ್ಡಿ, ನಾಥನ್ ಎಲ್ಲಿಸ್, ಕೇನ್ ರಿಚರ್ಡ್ಸನ್/ಸೀನ್ ಅಬಾಟ್, ಜೇಸನ್ ಬೆಹ್ರೆನ್‌ಡಾರ್ಫ್, ಆಡಮ್ ಝಂಪಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications