For Quick Alerts
ALLOW NOTIFICATIONS  
For Daily Alerts
 

Gabba Test: ಕಾಂಗೂರು ಪಡೆಗೆ ಕಾಡಿದ ಜಸ್ಪ್ರೀತ್ ಬುಮ್ರಾ; ಕಪಿಲ್ ದೇವ್ ದಾಖಲೆ ಬ್ರೇಕ್

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಅದ್ಭುತವಾಗಿ ಬೌಲಿಂಗ್ ಮಾಡುತ್ತಿದ್ದಾರೆ. ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ದೊಡ್ಡ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇದೀಗ ಬ್ರಿಸ್ಬೇನ್‌ನ ಗಬ್ಬಾದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ಗಳನ್ನು ಪಡೆದು ಮಿಂಚಿದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಬುಮ್ರಾ ಎರಡು ವಿಕೆಟ್ ಪಡೆದ ವಿಶೇಷ ದಾಖಲೆ ಸೃಷ್ಟಿಸಿದ್ದಾರೆ. ಈ ಮೂಲಕ ಭಾರತ ತಂಡದ ದಂತಕಥೆ ಕಪಿಲ್ ದೇವ್ ಅವರ ದಾಖಲೆಯನ್ನು ಮುರಿದಿದ್ದಾರೆ.

ಜಸ್ಪ್ರೀತ್ ಬುಮ್ರಾ ಗಬ್ಬಾ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಎರಡು ವಿಕೆಟ್ ಪಡೆಯುವ ಮೂಲಕ
ಆಸ್ಟ್ರೇಲಿಯಾ ನೆಲದಲ್ಲಿ ಅತಿ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ಭಾರತದ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ಈ ದಾಖಲೆ ಕಪಿಲ್ ದೇವ್ ಅವರ ಹೆಸರಿನಲ್ಲಿತ್ತು. ಇದುವರೆಗೆ ಬುಮ್ರಾ ಆಸ್ಟ್ರೇಲಿಯಾದಲ್ಲಿ 20 ಇನ್ನಿಂಗ್ಸ್‌ಗಳಲ್ಲಿ 52 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಇದರಲ್ಲಿ ಮೂರು ಬಾರಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಕಪಿಲ್ ದೇವ್ 51 ವಿಕೆಟ್‌ಗಳನ್ನು ಹೊಂದಿದ್ದಾರೆ. ಕಪಿಲ್ ದೇವ್ ಆಸ್ಟ್ರೇಲಿಯಾದಲ್ಲಿ ಐದು ಬಾರಿ 5 ವಿಕೆಟ್ ಗೊಂಚಲು ಪಡೆದಿದ್ದಾರೆ.

IND vs AUS Jasprit Bumrah breaks Kapil Dev s record

ಗಬ್ಬಾ ಟೆಸ್ಟ್ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಮೊದಲ ಇನ್ನಿಂಗ್ಸ್‌ನಲ್ಲಿ ಆರು ವಿಕೆಟ್‌ಗಳನ್ನು ಕಬಳಿಸಿದರು. ಬಳಿಕ ಎರಡನೇ ಇನ್ನಿಂಗ್ಸ್‌ನಲ್ಲಿ ಉಸ್ಮಾನ್ ಖವಾಜಾ ಮತ್ತು ಮಾರ್ನಸ್ ಲಬುಸ್ಚಾಗ್ನೆ ಅವರನ್ನು ಔಟ್ ಮಾಡುವ ಮೂಲಕ ಕಪಿಲ್ ದೇವ್ ಅವರ ದಾಖಲೆಯನ್ನು ಬುಮ್ರಾ ಅಳಿಸಿದರು. ಆಸ್ಟ್ರೇಲಿಯಾದಲ್ಲಿ 50 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆದ ಭಾರತದ ಬೌಲರ್‌ಗಳು ಎಂಬ ದಾಖಲೆಯನ್ನು ಬುಮ್ರಾ ಮತ್ತು ಕಪಿಲ್ ದೇವ್ ಮಾತ್ರ ಹೊಂದಿದ್ದಾರೆ. ನಂತರ ಭಾರತದ ತಂಡದ ದಿಗ್ಗಜ ಸ್ಪಿನ್ನರ್ ಅನಿಲ್ ಕುಂಬ್ಳೆ 49 ವಿಕೆಟ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಕುಂಬ್ಳೆ ದಾಖಲೆ ಮೇಲೆ ಕಣ್ಣು

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಜಸ್ಪ್ರೀತ್ ಬುಮ್ರಾ ಅವರು ಅನಿಲ್ ಕುಂಬ್ಳೆ ದಾಖಲೆಯನ್ನು ಮುರಿಯುವ ಅವಕಾಶವನ್ನು ಹೊಂದಿದ್ದಾರೆ. ಸೆನಾ (ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ನ್ಯೂಜಿಲೆಂಡ್, ಆಸ್ಟ್ರೇಲಿಯಾ) ದೇಶಗಳಲ್ಲಿ ಅನಿಲ್ ಕುಂಬ್ಳೆ ಅತ್ಯಂತ ಯಶಸ್ವಿ ಟೆಸ್ಟ್ ಬೌಲರ್ ಎನಿಸಿಕೊಂಡಿದ್ದಾರೆ. ಈ ದೇಶಗಳಲ್ಲಿ ಟೆಸ್ಟ್ ಆಡುವಾಗ ಅವರು ಒಟ್ಟು 141 ವಿಕೆಟ್ ಪಡೆದಿದ್ದಾರೆ. ಪ್ರಸಕ್ತ ಟೆಸ್ಟ್ ಸರಣಿಯಲ್ಲಿ ಬುಮ್ರಾ 9 ವಿಕೆಟ್ ಪಡೆದರೆ, ಅನಿಲ್ ಕುಂಬ್ಳೆ ಅವರನ್ನು ಹಿಂದಿಕ್ಕಿ ಸೆನಾ ದೇಶಗಳಲ್ಲಿ ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ಬೌಲರ್ ಎಂಬ ಹೆಗ್ಗಳಿಕೆ ಪಾತ್ರರಾಗಲಿದ್ದಾರೆ. ಬುಮ್ರಾ ಪ್ರಸ್ತುತ 133 ವಿಕೆಟ್‌ಗಳನ್ನು ಹೊಂದಿದ್ದಾರೆ.

ಸೆನಾ ದೇಶಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಸ್

  • ಅನಿಲ್ ಕುಂಬ್ಳೆ - 141
  • ಜಸ್ಪ್ರೀತ್ ಬುಮ್ರಾ - 133*
  • ಇಶಾಂತ್ ಶರ್ಮಾ - 130
  • ಮೊಹಮ್ಮದ್ ಶಮಿ - 123
  • ಜಹೀರ್ ಖಾನ್ - 119
  • ಕಪಿಲ್ ದೇವ್ - 117

Story first published: Wednesday, December 18, 2024, 10:34 [IST]
Other articles published on Dec 18, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+