Jasprit Bumrah: ಆಸ್ಟ್ರೇಲಿಯಾ ತಂಡಕ್ಕೆ ತಲೆನೋವಾದ ಜಸ್ಪ್ರೀತ್ ಬುಮ್ರಾ
ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡದ ಬ್ಯಾಟರ್‌ಗಳಿಗೆ ಭಾರತ ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಏಕಾಂಗಿಯಾಗಿ ಕಾಟ ನೀಡುತ್ತಿದ್ದಾರೆ. ಅದರಲ್ಲೂ ಆಸ್ಟ್ರೇಲಿಯಾದ ಸ್ಟಾರ ಬ್ಯಾಟರ್ ಉಸ್ಮಾನ್ ಖವಾಜಾ ಅವರಿಗೆ ಬುಮ್ರಾ ತಲೆನೋವಾಗಿ ಪರಿಣಮಿಸಿದ್ದಾರೆ. ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಬುಮ್ರಾ ಮತ್ತೊಮ್ಮೆ ಖವಾಜಾ ಅವರ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಾರಿಯ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಖವಾಜಾ ಮೊದಲ ಬಾರಿಗೆ 50 ರನ್ ಗಳಿಸಿದರು. ಆದರೆ, ಖವಾಜಾ ಅದನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸಲು ಬುಮ್ರಾ ಅವಕಾಶ ನೀಡಲಿಲ್ಲ.
ಜಸ್ಪ್ರೀತ್ ಬುಮ್ರಾ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಸತತವಾಗಿ ವಿಕೆಟ್‌ಗಳನ್ನು ಕಬಳಿಸುತ್ತಿದ್ದಾರೆ. ಪರ್ತ್‌ನಲ್ಲಿ ಮೊದಲ ಟೆಸ್ಟ್ ಪಂದ್ಯಲ್ಲಿ ಬುಮ್ರಾ 8 ವಿಕೆಟ್ ಪಡೆದರೆ, ಅಡಿಲೇಡ್‌ನಲ್ಲಿ 4 ಮತ್ತು ಗಬ್ಬಾ ಟೆಸ್ಟ್‌ನಲ್ಲಿ 9 ವಿಕೆಟ್ ಉರುಳಿಸಿದ್ದಾರೆ. ಈಗ ಮೆಲ್ಬೋರ್ನ್‌ನಲ್ಲಿಯೂ ಬುಮ್ರಾ ಮೊದಲ ದಿನವೇ ಆಸ್ಟ್ರೇಲಿಯಾಕ್ಕೆ ವಿಲನ್ ಆಗಿದ್ದಾರೆ. ಆಸೀಸ್ ಬ್ಯಾಟರ್‌ಗಳಿಗೆ ಬುಮ್ರಾ ತಮ್ಮ ತಾಕತ್ತು ಪ್ರದರ್ಶನ ಮಾಡಿದ್ದಾರೆ.

ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಯುವ ಸ್ಫೋಟಕ ಆರಂಭಿಕ ಬ್ಯಾಟರ್ ಸ್ಯಾಮ್ ಕಾನ್‌ಸ್ಟಾಸ್ ಅವರೊಂದಿಗೆ ಉಸ್ಮಾನ್ ಖವಾಜಾ ಅದ್ಭುತ ಜೊತೆಯಾಟವಾಡಿದರು. ಬುಮ್ರಾ ಬೌಲಿಂಗ್‌ನಲ್ಲಿ ಸ್ಯಾಮ್ ಕಾನ್‌ಸ್ಟಾಸ್ ಮಿಂಚಿನ ಬ್ಯಾಟಿಂಗ್ ಮಾಡಿದರು. ಇತ್ತ ಕ್ರೀಸ್‌ಗೆ ಕಚ್ಚಿ ನಿಂತ ಖವಾಜಾ ಅವರು 121 ಎಸೆತಗಳಲ್ಲಿ 57 ರನ್‌ಗಳ ಇನಿಂಗ್ಸ್ ಆಡಿ ಔಟದರು.
5ನೇ ಬಾರಿಗೆ ಬುಮ್ರಾ ಬಲೆಗೆ ಖವಾಜಾ
ಉಸ್ಮಾನ್ ಖವಾಜಾ ಬುಮ್ರಾ ಬಲೆಗೆ ಬೀಳುತ್ತಿರುವುದು ಇದೇ ಮೊದಲ ಅಥವಾ ಎರಡನೇ ಬಾರಿ ಅಲ್ಲ. ಕಳೆದ 7 ಇನ್ನಿಂಗ್ಸ್‌ಗಳಲ್ಲಿ ಜಸ್ಪ್ರೀತ್ ಬುಮ್ರಾ 7 ಬಾರಿ ಖವಾಜಾಗೆ ಪೆವಿಲಿಯನ್ ಹಾದಿ ತೋರಿಸಿದ್ದಾರೆ. ಈ ವೇಳೆ, ಬುಮ್ರಾ ಸ್ಪೋಟಕ ಬ್ಯಾಟರ್ ಟ್ರಾವಿಸ್ ಹೆಡ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು. ಮೊದಲ ದಿನವೇ 3 ಪ್ರಮುಖ ವಿಕೆಟ್‌ಗಳನ್ನು ಕಬಳಿಸಿದರೂ, ಇನ್ನೊಂದು ತುದಿಯಿಂದ ಯಾವುದೇ ಬೆಂಬಲ ಸಿಗದ ಆಸೀಸ್ ಪಡೆ 300ರ ಗಡಿ ದಾಟಿತು. ಹೀಗಾಗಿ ಎರಡನೇ ದಿನದಾಟ ಕ್ರಿಕೆಟ್ ಅಭಿಮಾನಿಗಳಲ್ಲಿ ರೋಚಕತೆ ಹುಟ್ಟು ಹಾಕಿದೆ.
ಆಸ್ಟ್ರೇಲಿಯಾ ವಿರುದ್ಧದ ಜಸ್ಪ್ರೀತ್ ಬುಮ್ರಾ ಉತ್ತಮ ಪ್ರದರ್ಶನ ನೀಡಿದ್ದಾರೆ. ಈಗಾಗಲೇ ಆಡಿರುವ ಮೊದಲ 3 ಟೆಸ್ಟ್ ಪಂದ್ಯಗಳಲ್ಲಿ 21 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಈ ಮೂಲಕ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಸಾಧನೆ ಮಾಡಿದ್ದಾರೆ. ಇದೀಗ ಮೆಲ್ಬೋರ್ನ್ ಟೆಸ್ಟ್ ಪಂದ್ಯದಲ್ಲಿ ಬುಮ್ರಾ ಎಷ್ಟು ವಿಕೆಟ್ ಪಡೆಯುತ್ತಾರೆ ಎಂಬುದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.
ಬಾಕ್ಸಿಂಗ್ ಡೇ ಟೆಸ್ಟ್‌ನ ಮೊದಲ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ 4 ಅರ್ಧಶತಕಗಳ ಇನ್ನಿಂಗ್ಸ್ ಕಂಡಿದೆ. ಮಾರ್ನಸ್ ಲ್ಯಾಬುಸ್ಚಾಗ್ನೆ, ಸ್ಟೀವ್ ಸ್ಮಿತ್, ಸ್ಯಾಮ್ ಕಾನ್ಸ್ಟಾಸ್ ಮತ್ತು ಖವಾಜಾ ಅವರ ಅರ್ಧಶತಕಗಳ ನೆರವಿನಿಂದ ಆಸೀಸ್ 311 ರನ್ ಗಳಿಸಿದೆ. ಸ್ಟೀವ್ ಸ್ಮಿತ್ 68 ರನ್ ಗಳಿಸಿ ಅಜೇಯರಾಗುಳಿದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications