Josh Hazlewood: ಆಸ್ಟ್ರೇಲಿಯಾದ ಜೋಶ್ ಕಡಿಮೆ ಮಾಡಿದ ಹ್ಯಾಜಲ್‌ವುಡ್
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯ ಬ್ರಿಸ್ಬೇನ್‌ನ ಗಬ್ಬಾದಲ್ಲಿ ನಡೆಯುತ್ತಿದೆ. ಈ ಟೆಸ್ಟ್ ಪಂದ್ಯದ ಮೇಲೆ ಹಿಡಿತ ಸಾಧಿಸಿದರೂ ಆಸ್ಟ್ರೇಲಿಯಾ ತಂಡ ಆತಂಕದಲ್ಲಿದೆ. ಭಾರತ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಗೆಲುವಿನ ನಿರೀಕ್ಷೆಯಲ್ಲಿದೆ. ಆದರೆ ಗಬ್ಬಾದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಆಸ್ಟ್ರೇಲಿಯಾ ಪಂದ್ಯದ ಫಲಿತಾಂಶ ಪಡೆಯುವ ನಿರೀಕ್ಷೆಗೆ ದೊಡ್ಡ ಪೆಟ್ಟು ಬಿದ್ದಿದೆ. ಮತ್ತೊಂದೆಡೆ ಸ್ಟಾರ್ ವೇಗದ ಬೌಲರ್ ಜೋಶ್ ಹ್ಯಾಜಲ್‌ವುಡ್ ನಾಲ್ಕನೇ ದಿನ ಮೈದಾನದಿಂದ ಬೌಲಿಂಗ್ ಮಾಡದೆ ಹೊರನಡೆದಿದ್ದಾರೆ. ಇದು ಕಾಂಗೂರು ಪಡೆಯ ಚಿಂತೆ ಹೆಚ್ಚಿಸಿದೆ.
ಆಸ್ಟ್ರೇಲಿಯಾದ ಸ್ಟಾರ್ ವೇಗದ ಬೌಲರ್ ಜೋಶ್ ಹ್ಯಾಜಲ್‌ವುಡ್ ಕಾಲಿನ ಗಾಯದಿಂದ ಬಳಲುತ್ತಿದ್ದಾರೆ. ಪರಿಣಾಮ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಉಳಿದ ಪಂದ್ಯಗಳಿಂದ ಜೋಶ್ ಹ್ಯಾಜಲ್‌ವುಡ್ ಹೊರಗುಳಿದಿದ್ದಾರೆ. ಅಡಿಲೇಡ್ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವಿಗೆ ಜೋಶ್ ಹ್ಯಾಜಲ್‌ವುಡ್ ಪ್ರಮುಖ ಪಾತ್ರವಹಿಸಿದ್ದರು. ಇದೀಗ ಹ್ಯಾಜಲ್‌ವುಡ್ ಹೊರಗುಳಿದಿರುವುದು ಆಸ್ಟ್ರೇಲಿಯಾ ತಂಡದ ಜೋಶ್ ಕಡಿಮೆ ಮಾಡಿದೆ.

ಜೋಶ್ ಹ್ಯಾಜಲ್‌ವುಡ್ ಹೊರಗುಳಿದಿರುವುದರಿಂದ ಆಸ್ಟ್ರೇಲಿಯಾ ಈಗ ಕೇವಲ 4 ಸ್ಪೆಷಲಿಸ್ಟ್ ಬೌಲರ್‌ಗಳನ್ನು ಹೊಂದಿದೆ. ನಾಯಕ ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್ ಮತ್ತು ನಾಥನ್ ಲಿಯಾನ್ ಜೊತೆಗೆ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಕಾಂಗೂರು ಪಡೆಯ ಬಲವಾಗಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಹ್ಯಾಜಲ್‌ವುಡ್ ಉತ್ತಮ ಬೌಲಿಂಗ್ ಮಾಡಿದ್ದರು. ಅವರು 6 ಓವರ್‌ಗಳಲ್ಲಿ ಕೇವಲ 22 ರನ್‌ಗಳನ್ನು ನೀಡಿ ಒಂದು ವಿಕೆಟ್ ಪಡೆದಿದ್ದರು. ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರನ್ನು ಔಟ್ ಮಾಡುವ ಮೂಲಕ ಭಾರತ ತಂಡಕ್ಕೆ ಹ್ಯಾಜಲ್‌ವುಡ್ ದೊಡ್ಡ ಹೊಡೆತ ನೀಡಿದ್ದರು.
ಗಬ್ಬಾ ಟೆಸ್ಟ್ ಪಂದ್ಯದ ನಾಲ್ಕನೇ ದಿನದ ಮೊದಲ ಸೆಷನ್‌ನಲ್ಲಿ ಹ್ಯಾಜಲ್‌ವುಡ್ ಆಸ್ಟ್ರೇಲಿಯಾ ಪರ ಒಂದು ಓವರ್ ಬೌಲಿಂಗ್ ಮಾಡಿದರು. ಇದಾದ ಬಳಿಕ ಅವರು ಬೌಲಿಂಗ್ ಮಾಡಲಿಲ್ಲ. ಇನ್ನೊಂದೆಡೆ ನಾಯಕ ಕಮಿನ್ಸ್ ಮತ್ತು ಉಪನಾಯಕ ಸ್ಟೀವ್ ಸ್ಮಿತ್ ಅವರು ತಂಡದ ಫಿಸಿಯೋಥೆರಪಿಸ್ಟ್ ಅವರೊಂದಿಗೆ ಮಾತುಕತೆ ನಡೆಸಿದರು. ನಂತರ ಹ್ಯಾಜಲ್‌ವುಡ್ ಅವರು ಮೈದಾನದಿಂದ ಹೊರನಡೆದರು.
ಸೈಡ್ ಸ್ಟ್ರೈನ್ ಕಾರಣ ಅಡಿಲೇಡ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು ಹ್ಯಾಜಲ್‌ವುಡ್ ಆಡಲು ಸಾಧ್ಯವಾಗಿರಲಿಲ್ಲ. ಈ ಪಂದ್ಯದಲ್ಲಿ ಸ್ಕಾಟ್ ಬೋಲ್ಯಾಂಡ್ ಅದ್ಭುತ ಪ್ರದರ್ಶನ ನೀಡಿದ್ದರು. ಆದರೂ ಮೂರನೇ ಟೆಸ್ಟ್ ಪಂದ್ಯಕ್ಕೆ ಸ್ಕಾಟ್ ಬೋಲ್ಯಾಂಡ್ ಬದಲಿಗೆ ಹ್ಯಾಜಲ್‌ವುಡ್ ತಂಡದಲ್ಲಿ ಸ್ಥಾನ ಪಡೆದಿದ್ದರು. ಇದೀಗ ಹೊರಗುಳಿದಿರುವ ಹ್ಯಾಜಲ್‌ವುಡ್ ಬದಲಿಗೆ ಸೀನ್ ಅಬಾಟ್ ಅವರು ಮುಂದಿನ ಪಂದ್ಯಗಳಿಗೆ ಆಸ್ಟ್ರೇಲಿಯಾ ತಂಡವನ್ನು ಸೇರುವ ಸಾಧ್ಯತೆಯಿದೆ.
ಆಸ್ಟ್ರೇಲಿಯಾ ಕ್ರಿಕೆಟ್ ಹೇಳಿಕೆ ಪ್ರಕಾರ, ಹ್ಯಾಜಲ್‌ವುಡ್ ಅವರು ಕಾಲಿನ ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರಿಂದಾಗಿ ಭಾರತ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಹ್ಯಾಜಲ್‌ವುಡ್ ಮತ್ತೊಮ್ಮೆ ಬೌಲಿಂಗ್ ಮಾಡುವುದು ಅನುಮಾನವಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications