For Quick Alerts
ALLOW NOTIFICATIONS  
For Daily Alerts
 

India vs Australia: ಟೆಸ್ಟ್ ಸರಣಿ ಅಂತ್ಯವಾಗುವ ಮುನ್ನವೇ ಏಕದಿನ ಸರಣಿಗೆ ಸಿದ್ಧತೆ ಆರಂಭಿಸಿದ ಆಸಿಸ್

IND VS AUS ODI: Australia ODI players started preparation for ODI series against India

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಅಂತಿಮ ಘಟ್ಟವನ್ನು ತಲುಪಿದೆ. ಈ ಸರಣಿಯ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ಆಯೋಜನೆಯಾಗಲಿದ್ದು ಅದಕ್ಕಾಗಿ ಆಸ್ಟ್ರೇಲಿಯಾದ ಏಕದಿನ ಆಟಗಾರರ ಬಳಗ ಭಾರತಕ್ಕೆ ಬಂದಿಳಿದಿದೆ. ಶನಿವಾರ ಆಸ್ಟ್ರೇಲಿಯಾದ ಏಕದಿನ ಸ್ಪೆಶಲಿಸ್ಟ್ ಆಟಗಾರರು ಭಾರತಕ್ಕೆ ಬಂದಿಳಿದಿದ್ದಾರೆ. ಮಾತ್ರವಲ್ಲದೆ ಆಸಿಸ್ ಆಟಗಾರರು ಅಭ್ಯಾಸವನ್ನು ಕೂಡ ಆರಂಭಿಸಿದ್ದಾರೆ.

ಅಹ್ಮದಾಬಾದ್‌ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಅದ್ಭುತ ಪ್ರದರ್ಶನ ನೀಡಿದ್ದು ಭಾರತಕ್ಕೆ ಪೈಪೋಟಿ ನೀಡುತ್ತಿದೆ. ಈ ಮೂಲಕ ಈ ಪಂದ್ಯವನ್ನು ಗೆದ್ದು ಸರಣಿ ಸಮಬಲಗೊಳಿಸುವ ಪ್ರಯತ್ನದಲ್ಲಿದೆ ಆಸ್ಟ್ರೇಲಿಯಾ. ಹೀಗಾಗಿ ಅಂತಿಮ ಎರಡು ದಿನಗಳ ಆಟ ಈಗ ಸಾಕಷ್ಟು ಕುತೂಹಲ ಮೂಡಿಸಿದೆ.

ಇನ್ನು ಆಸ್ಟ್ರೇಲಿಯಾ ಆಟಗಾರರು ಭಾರತಕ್ಕೆ ಬಂದಿಳಿದ ಬಳಿಕ ನೆಟ್ಸ್‌ನಲ್ಲಿ ಅಭ್ಯಾಸವನ್ನು ಕೂಡ ನಡೆಸಲು ಆರಂಭಿಸಿದ್ದಾರೆ. ಇದರ ವಿಡಿಯೋವನ್ನು ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು ಸರಣಿಗೆ ಆಸ್ಟ್ರೇಲಿಯಾ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಈ ವರ್ಷಾಂತ್ಯದಲ್ಲಿ ಭಾರತದಲ್ಲಿಯೇ ಏಕದಿನ ವಿಶ್ವಕಪ್ ಆಯೋಜನೆಯಾಗಲಿರುವ ಕಾರಣ ಈ ಸರಣಿಯನ್ನು ಆಸ್ಟ್ರೇಲಿಯಾ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.

ಇನ್ನು ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಮಿಚೆಲ್ ಮಾರ್ಶ್ ಗಾಯಗೊಂಡ ಬಳಿಕ ಈ ಸರಣಿಯ ಮೂಲಕ ಸುದೀರ್ಘ ಕಾಲದ ನಂತರ ತಂಡಕ್ಕೆ ಮರಳಲು ಸಜ್ಜಾಗಿದ್ದಾರೆ. ಕಳೆದ ಫೆಬ್ರವರಿಯಲ್ಲಿ ಆಯ್ಕೆ ಮಾಡಿದ 16 ಆಟಗಾರರ ತಂಡದಲ್ಲಿ ಮಾರ್ಶ್ ಕೂಡ ಸ್ಥಾನವನ್ನು ಪಡೆದುಕೊಳ್ಳುವಲಿ ಯಶಸ್ವಿಯಾಗಿದ್ದರು. ಇನ್ನು ಇತ್ತೀಚಗಷ್ಟೇ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಕಳೆದುಕೊಂಡಿರುವ ಆಸ್ಟ್ರೇಲಿಯಾ ನಾಯಕ ಪ್ಯಾಟ್ ಕಮ್ಮಿನ್ಸ್ ಲಭ್ಯತೆಯ ಬಗ್ಗೆ ಕ್ರಿಕೆಟ್ ಆಸ್ಟ್ರೇಲಿಯಾ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ.

ಇನ್ನು ಕಳೆದ ವರ್ಷಾಂತ್ಯದಲ್ಲಿ ಕಡೆದ ಟಿ20 ವಿಶ್ವಕಪ್‌ನ ಬಳಿಕ ಸ್ನೇಹಿತನ ಬರ್ತ್‌ಡೇ ಪಾರ್ಟಿಯಲ್ಲಿ ಕಾಲಿಗೆ ಗಾಯಮಾಡಿಕೊಂಡಿದ್ದ ಗ್ಲೆನ್ ಮ್ಯಾಕ್ಸ್‌ವೆಲ್ ಚೇತರಿಸಿಕೊಂಡು ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ. ಆದರೆ ಅವರು ಈ ಸರಣಿಯಲ್ಲಿ ಕಣಕ್ಕಿಳಿಯಲು ಎಷ್ಟು ಸಮರ್ಥ ಎಂಬುದು ಸದ್ಯದ ಪ್ರಶ್ನೆಯಾಗಿದೆ. ಇನ್ನು ಹ್ಯಾಮ್‌ಸ್ಟ್‌ರಿಂಜ್ ಗಾಯಕ್ಕೆ ತುತ್ತಾಗಿರುವ ಜೇ ರಿಚರ್ಡ್ಸನ್ ಈ ಸರಣಿಯಿಂದ ಹೊರಬಿದ್ದಿದ್ದಾರೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಮಾರ್ಚ್ 17ರಿಂದ ಆರಂಭವಾಗಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ ನಡೆಯಲಿದ್ದು ಅದಾದ ಬಳಿಕ ವಿಶಾಖಪಟ್ಟಣಂ ಹಾಗೂ ಚೆನ್ನೈನಲ್ಲಿ ಅಂತಿಮ ಎರಡು ಪಂದ್ಯಗಳು ಆಯೋಜನೆಯಾಗಲಿದೆ.

ಏಕದಿನ ಸರಣಿಗೆ ಆಯ್ಕೆ ಮಾಡಿರುವ ಆಸ್ಟ್ರೇಲಿಯಾ ತಂಡ ಹೀಗಿದೆ: ಪ್ಯಾಟ್ ಕಮ್ಮಿನ್ಸ್ (ನಾಯಕ), ಶಾನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಸ್‌ಶೈನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ.

Story first published: Sunday, March 12, 2023, 9:16 [IST]
Other articles published on Mar 12, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+