
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಟೆಸ್ಟ್ ಸರಣಿ ಮುಕ್ತಾಯವಾಗಿದ್ದು ಏಕದಿನ ಮಾದರಿಯಲ್ಲಿ ಮುಖಾಮುಖಿಯಾಗಲು ಎರಡು ತಂಡಗಳು ಸಜ್ಜಾಗುತ್ತಿವೆ. ಈ ವರ್ಷಾಂತ್ಯದಲ್ಲಿ ಭಾರತದಲ್ಲಿಯೇ ವಿಶ್ವ ಕಪ್ ಟೂರ್ನಿ ನಡೆಯಲಿರುವ ಕಾರಣದಿಂದಾಗಿ ಈ ಸರಣಿ ಎರಡು ತಂಡಗಳಿಗೂ ಮುಖ್ಯವಾಗಿದೆ. ಈ ಸರಣಿಯ ಮೊದಲ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗದಲ್ಲಿ ನಡೆಯಲಿದ್ದು ಮಾರ್ಚ್ 17ರಂದು ಈ ಪಂದ್ಯ ಆಯೋಜನೆಯಾಗಲಿದೆ.
ಇನ್ನು ವಾಂಖೆಡೆ ಕ್ರೀಡಾಂಗಣದಲ್ಲಿ ಇದಕ್ಕೂ ಮುನ್ನ ನಡೆದಿದ್ದ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಏಕದಿನ ಮಾದರಿಯಲ್ಲಿ ಮುಖಾಮುಖಿಯಾಗಿದ್ದಾರೆ ಆಸ್ಟ್ರೇಲಿಯಾ ತಂಡಕ್ಕೆ ಭಾರತ 10 ವಿಕೆಟ್‌ಗಳ ಅಂತರದಿಂದ ಶರಣಾಗಿತ್ತು. 2020ರ ಜನವರಿ 14ರಂದು ಈ ಪಂದ್ಯ ನಡೆದಿತ್ತು. ಅಂದು ಭಾರತ ನೀಡಿದ್ದ 256 ರನ್‌ಗಳ ಗುರಿಯನ್ನು ಆಸ್ಟ್ರೇಲಿಯಾ ತಂಡ ಯಾವುದೇ ವಿಕೆಟ್ ಕಳೆದುಕೊಳ್ಳದೆ ಗೆದ್ದುಕೊಂಡಿದ್ದು ಡೇವಿಡ್ ವಾರ್ನರ್ ಅಜೇಯ 128 ರನ್ ಹಾಗೂ ಆರೋನ್ ಫಿಂಚ್ ಅಜೇಯ 110 ರನ್‌ಗಳಿಸಿದ್ದರು.
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ಹೆಡ್ ಟು ಹೆಡ್ ಅಂಕಿಅಂಶ: ಏಕದಿನ ಕ್ರಿಕೆಟ್‌ನ ಇತಿಹಾಸದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಈವರೆಗೆ ಒಟ್ಟು 143 ಪಂದ್ಯಗಳನ್ನು ಆಡಿದೆ. ಈ ಪೈಕಿ ಭಾರತ ತಂಡ 53 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ಆಸ್ಟ್ರೇಲಿಯಾ 80 ಪಂದ್ಯಗಳಲ್ಲಿ ಗೆದ್ದು ಭರ್ಜರಿ ಮೇಲುಗೈ ಸಾಧಿಸಿದೆ. 10 ಪಂದ್ಯಗಳು ಫಲಿತಾಂಶ ಕಂಡಿಲ್ಲ.
ಇನ್ನು ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಏಕದಿನ ಮಾದರಿಯಲ್ಲಿ ಮುಖಾಮುಖಿಯಾಗಿದ್ದಾಗ ಭಾರತ ತಂಡ ಗಳಿಸಿದ ಅತ್ಯಂತ ಗರಿಷ್ಠ ಮೊತ್ತ ಎಂದರೆ 383 ರನ್. ಆಸ್ಟ್ರೇಲಿಯಾ ತಂಡ 389 ರನ್‌ಗಳಿಸಿದ್ದು ಈ ಮುಖಾಮುಖಿಯ ಗರಿಷ್ಠ ಸ್ಕೋರ್ ಎನಿಸಿಕೊಂಡಿದೆ. ಇನ್ನು ಆಸ್ಟ್ರೇಲಿಯಾ ತಂಡ 101 ರನ್‌ಗಳಿಸಿರುವುದು ಈ ಮುಖಾಮುಖಿಯಲ್ಲಿ ಆಸಿಸ್ ತಂಡದ ಕನಿಷ್ಠ ಮೊತ್ತವಾಗಿದ್ದರೆ ಭಾರತದ ಕನಿಷ್ಠ ಸ್ಕೋರ್ 63 ರನ್.
ಮೊದಲ ಪಂದ್ಯಕ್ಕೆ ಹಾರ್ದಿಕ್ ಪಾಂಡ್ಯ ನಾಯಕ: ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಖಾಯಂ ನಾಯಕ ರೋಹಿತ್ ಶರ್ಮಾ ಅಲಭ್ಯವಾಗಿದ್ದಾರೆ. ಕೌಟುಂಬಿಕ ಕಾರಣದಿಂದಾಗಿ ರೋಹಿತ್ ಶರ್ಮಾ ಈ ಪಂದ್ಯದಿಮದ ಹೊರಗುಳಿಯುತ್ತಿದ್ದು ಈ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯಾಗೆ ನಾಯಕತ್ವ ವಹಿಸಲಾಗಿದೆ. ಸರಣಿಯ ಅಂತಿಮ ಎರಡು ಪಂದ್ಯಗಳು ವಿಶಾಖಪಟ್ಟಣಂ ಹಾಗೂ ಚೆನ್ನೈನಲ್ಲಿ ನಡೆಯಲಿದ್ದು ಈ ಪಂದ್ಯದಲ್ಲಿ ರೋಹಿತ್ ಕಣಕ್ಕಿಳಿಯಲಿದ್ದಾರೆ.
ಇನ್ನು ಆಸ್ಟ್ರೇಲಿಯಾ ತಂಡದಲ್ಲಿಯೂ ಪ್ರಮುಖ ಬದಲಾವಣೆಯಾಗಿದೆ. ನಾಯಕ ಪ್ಯಾಟ್ ಕಮ್ಮಿನ್ಸ್ ಏಕದಿನ ಸರಣಿಯಿಂದಲೂ ಸಂಪೂರ್ಣವಾಗಿ ಹೊರಗುಳಿಯಲಿದ್ದಾರೆ. ಹಿಗಾಗಿ ಏಕದಿನ ಸರಣಿಯಲ್ಲಿಯೂ ಅನುಭವಿ ಆಟಗಾರ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ. ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಅಂತಿಮ ಎರಡು ಪಂದ್ಯದಲ್ಲಿ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಿದ್ದು ಒಮದು ಪಂದ್ಯದಲ್ಲಿ ಗೆಲುವು ಹಾಗೂ ಒಂದು ಪಂದ್ಯದಲ್ಲಿ ಡ್ರಾ ಸಾಧಿಸಲುವಲ್ಲಿ ಯಶಸ್ವಿಯಾಗಿದ್ದರು. ಹೀಗಾಗಿ ಟೆಸ್ಟ್ ಸರಣಿಯನ್ನು ಆಸ್ಟ್ರೇಲಿಯಾ 1-2 ಅಂತರದಿಂದ ಭಾರತಕ್ಕೆ ಒಪ್ಪಿಸಿತ್ತು.
ಆಸ್ಟ್ರೇಲಿಯಾ ಸ್ಕ್ವಾಡ್: ಸ್ಟೀವ್ ಸ್ಮಿತ್ (ನಾಯಕ), ಶಾನ್ ಅಬಾಟ್, ಆಷ್ಟನ್ ಅಗರ್, ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಶೈನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ
ಟೀಮ್ ಇಂಡಿಯಾ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆ ಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪ್), ಹಾರ್ದಿಕ್ ಪಾಂಡ್ಯ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಹಾಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನಾದ್ಕಟ್