IND vs AUS 1st ODI: ಭಾರತ vs ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
ಶುಕ್ರವಾರ, ಸೆಪ್ಟೆಂಬರ್ 22ರಂದು ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಆತಿಥೇಯ ಭಾರತ ಕ್ರಿಕೆಟ್ ತಂಡವು ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಮೊದಲ ಪಂದ್ಯದೊಂದಿಗೆ ಆರಂಭಿಸುತ್ತಿದೆ.
ಟಾಸ್ ಗೆದ್ದ ಭಾರತ ತಂಡದ ನಾಯಕ ಕೆಎಲ್ ರಾಹುಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ, ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

ಖಾಯಂ ನಾಯಕ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ 2023ರ ಏಷ್ಯಾ ಕಪ್ ಪಂದ್ಯಾವಳಿ ವೇಳೆಗೆ ತೊಡೆಯ ಗಾಯದಿಂದ ಚೇತರಿಸಿಕೊಂಡು ಪುನರಾಗಮನ ಮಾಡಿರುವ ಕೆಎಲ್ ರಾಹುಲ್ ಮೊದಲ ಎರಡು ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
ಇನ್ನು ಗಾಯದಿಂದ ಚೇತರಿಸಿಕೊಂಡಿರುವ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಭಾರತ ತಂಡಕ್ಕೆ ಪುನರಾಗಮನ ಮಾಡಿದ್ದು, ವಿಶ್ವಕಪ್‌ಗೆ ಮುನ್ನ ಶುಭ ಸುದ್ದಿಯಾಗಿದೆ. ಇನ್ನು ಏಷ್ಯಾ ಕಪ್ ಫೈನಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ನೀಡಲಾಗಿದೆ.
ಇದೇ ವೇಳೆ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಕೂಡ ಮೊದಲು ಎರಡು ಏಕದಿನ ಪಂದ್ಯಗಳಿಂದ ಹೊರಗುಳಿದಿದ್ದಾರೆ. ರವೀಂದ್ರ ಜಡೇಜಾ ಭಾರತ ತಂಡದ ಉಪನಾಯಕನಾಗಿದ್ದಾರೆ.
ಕಳೆದ ವಾರವಷ್ಟೇ 2023ರ ಏಷ್ಯಾ ಕಪ್ ಟ್ರೋಫಿ ಗೆದ್ದಿರುವ ಭಾರತ ತಂಡ ಉನ್ನತ ಮಟ್ಟದ ಅತ್ಮವಿಶ್ವಾಸದಲ್ಲಿದೆ ಮತ್ತು ಕೊನೆಯ ಐದು ಏಕದಿನ ಪಂದ್ಯಗಳಲ್ಲಿ 4 ಪಂದ್ಯಗಳನ್ನು ಗೆದ್ದಿದೆ.
ಮತ್ತೊಂದೆಡೆ, ಆಸ್ಟ್ರೇಲಿಯಾ ತಂಡವು ಟಿ20 ಸರಣಿಯಲ್ಲಿ ದಕ್ಷಿಣ ಆಫ್ರಿಕಾವನ್ನು ವೈಟ್‌ವಾಶ್ ಮಾಡಿದ ನಂತರ, ಅದೇ ತಂಡದ ವಿರುದ್ಧ ಸತತ ಮೂರು ಏಕದಿನ ಪಂದ್ಯಗಳನ್ನು ಸೋತಿದ್ದು, 2-3 ಅಂತರದಿಂದ ಸರಣಿ ಕಳೆದುಕೊಂಡು ಬರುತ್ತಿದೆ.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
ಭಾರತ vs ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯವು ಟಿವಿಯಲ್ಲಿ Sports18 ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರಪ್ರಸಾರವಾಗಲಿದೆ ಮತ್ತು ಉಚಿತವಾಗಿ JioCinema ವೆಬ್‌ಸೈಟ್ ಮತ್ತು ಅಪ್ಲಿಕೇಶನ್‌ನಲ್ಲಿ ಲೈವ್‌ಸ್ಟ್ರೀಮಿಂಗ್ ಆಗಿ ವೀಕ್ಷಿಸಬಹುದು.
ಭಾರತ vs ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯದ ಆಡುವ 11ರ ಬಳಗ
ಭಾರತ: ರುತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ/ವಿಕೆಟ್ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ.
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಸ್ ಇಂಗ್ಲಿಸ್ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ಮಾರ್ಕಸ್ ಸ್ಟೊಯಿನಿಸ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಮ್ಯಾಥ್ಯೂ ಶಾರ್ಟ್, ಆಡಮ್ ಝಂಪಾ, ಸೀನ್ ಅಬಾಟ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications