Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆಸ್ಟ್ರೇಲಿಯಾ ವಿರುದ್ಧ ಸರಣಿ ಕ್ಲೀನ್ ಸ್ವೀಪ್ ಮಾಡುತ್ತಾ ಭಾರತ?: ವಿಶ್ವಕಪ್‌ಗೂ ಮುನ್ನ ರೋಹಿತ್ ಪಡೆ ಭರ್ಜರಿ ಸಿದ್ಧತೆ

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯ ಇಂದು ನಡೆಯಲಿದೆ. ಈಗಾಗಲೇ ಟೀಮ್ ಇಂಡಿಯಾ ಮೊಸಲ ಎರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಸರಣಿಯನ್ನು ತ್ನದಾಗಿಸಿಕೊಂಡಿದ್ದು ಇದೀಗ ವೈಟ್‌ವಾಶ್ ಮಾಡುವ ಗುರಿಯನ್ನು ಹೊಂದಿದೆ.

ರಾಜ್‌ಕೋಟ್‌ನಲ್ಲಿ ಈ ಸರಣಿಯ ಕೊನೆಯ ಪಂದ್ಯ ಆಯೋಜನೆಯಾಗಲಿದ್ದು ಬ್ಯಾಟರ್‌ಗಳಿಗೆ ಈ ಮೈದಾನ ಕೂಡ ಸ್ವರ್ಗ ಎನಿಸಿಕೊಂಡಿದೆ. ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿರುವ ಟೀಮ್ ಇಂಡಿಯಾ ಈ ಪಂದ್ಯದಲ್ಲಿಯೂ ಮಿಂಚುವ ವಿಶ್ವಾಸವನ್ನು ಹೊಂದಿದ್ದು ಈ ಮೂಲಕ ಅದ್ಭುತ ಆತ್ಮವಿಶ್ವಾಸದೊಂದಿಗೆ ಮೆಗಾ ಟೂರ್ನಿಯಲ್ಲಿ ಕಣಕ್ಕಿಳಿಯುವ ವಿಶ್ವಾಸ ಹೊಂದಿದೆ.

Ind vs Aus ODI series: Team India eye on series whitewash against Australia

ಆದರೆ ಅತ್ತ ಆಸ್ಟ್ರೇಲಿಯಾ ಬಲಿಷ್ಠ ಆಟಗಾರರ ಪಡೆಯನ್ನು ಹೊಂದಿದ್ದರೂ ಕೂಡ ಸತತವಾಗಿ ನಿರಾಸೆಗೆ ಒಳಗಾಗುತ್ತಿರುವುದು ಅಚ್ಚರಿಯ ಸಂಗತಿ. ಆಸ್ಟ್ರೇಲಿಯಾ ತಂಡ ಏಕದಿನ ಮಾದರಿಯಲ್ಲಿ ಕಳೆದ ಐದು ಪಂದ್ಯಗಳಲ್ಲಿ ಸತತವಾಗಿ ಸೋಲು ಅನುಭವಿಸುತ್ತಾ ಬಂದಿದೆ. ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದ ಆಸ್ಟ್ರೇಲಿಯಾ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾಗಿಯಾಗಿತ್ತು. ಆದರೆ ಆ ಸರಣಿಯಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಆಸಿಸ್ ತಂಡ ಭರ್ಜರಿ ಗೆಲುವು ಸಾಧಿಸಿದ್ದರೂ ಕೊನೆಯ ಮೂರು ಪಂದ್ಯಗಳಲ್ಲಿ ಸೀತು ಆಘಾತಕಾರಿಯಾಗಿ ಸರಣಿಯನ್ನು ಕಳೆದುಕೊಂಡಿತ್ತು. ಅದಾದ ಬಳಿಕ ಭಾರತ ಪ್ರವಾಸ ಕೈಗೊಂಡಿರುವ ಆಸಿಸ್ ಮೊದಲ ಎರಡು ಏಕದಿನ ಪಂದ್ಯಗಳಲ್ಲಿಯೂ ಸೋಲು ಅನುಭವಿಸಿದೆ.

ಇನ್ನು ವಿಶ್ವಕಪ್‌ಗೆ ಬಲಿಷ್ಠ ತಂಡವನ್ನು ಪ್ರಕಟಿಸಿರುವ ಆಸ್ಟ್ರೇಲಿಯಾ ತಂಡ ಸತತವಾಗಿ ಅನುಭವಿಸುತ್ತಿರುವ ಕಳಪೆ ಪ್ರದರ್ಶಣದಿಂದಾಗಿ ಬೇಸತ್ತಿದೆ. ಈ ಮೂಲಕ ವಿಶ್ವಕಪ್‌ಗೆ ಉನ್ನ ಭಾರೀ ಹಿನ್ನಡೆಯನ್ನು ಕೂಡ ಅನುಭವಿಸಿದೆ. ಆದರೆ ಈ ಅವಧಿಯಲ್ಲಿ ಕೆಲ ಪ್ರಯೋಗಗಳನ್ನು ನಡೆಸಿರುವುದು ಪೂರ್ಣ ಸಾಮ್ಥ್ಯದೊಂದಿಗೆ ಆಸ್ಟ್ರೇಲಿಯಾ ತಂಡ ಕಣಕ್ಕಿಳಿದಿರಲಿಲ್ಲ ಎನ್ನುವುದು ಕೂಡ ಗಮನಾರ್ಹ. ಹಾಗಿದ್ದೂ ಈ ಪ್ರದರ್ಶನ ಆಸ್ಟ್ರೇಲಿಯಾ ತಂಡದ ಮಟ್ಟಿಗೆ ಉತ್ತಮವಲ್ಲ ಎನ್ನುವುದು ಸ್ಪಷ್ಟ.

ಇನ್ನು ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಅಂತಿಮ ಪಂದ್ಯದ ಮೂಲಕ ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ತಂಡಕ್ಕೆ ಮರಳುತ್ತಿದ್ದಾರೆ. ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಕುಲ್‌ದೀಪ್ ಯಾದವ್ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಅಲಭ್ಯವಾಗಿದ್ದರು. ಆದರೆ ಇವರು ಅಂತಿಮ ಪಂದ್ಯಕ್ಕೆ ತಂಡಕ್ಕೆ ಮರಳಿದ್ದು ರಾಜ್‌ಕೋಟ್‌ಗೆ ಈಗಾಗಲೇ ತಂಡದ ಜೊತೆಗೆ ಸೇರಿಕೊಂಡಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್

ಆಸ್ಟ್ರೇಲಿಯಾ ತಂಡ: ಸ್ಟೀವನ್ ಸ್ಮಿತ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಮ್ಯಾಥ್ಯೂ ಶಾರ್ಟ್, ಡೇವಿಡ್ ವಾರ್ನರ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಶ್ ಇಂಗ್ಲಿಸ್, ಕ್ಯಾಮರೂನ್ ಗ್ರೀನ್, ಸೀನ್ ಅಬ್ಬೋಟ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್, ತನ್ವೀರ್ ಸಂಘ, ಮಾರ್ಕಸ್ ಸ್ಟೊಯಿನಿಸ್, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಮಾರ್ಷ್

Story first published: Wednesday, September 27, 2023, 8:32 [IST]
Other articles published on Sep 27, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+