For Quick Alerts
ALLOW NOTIFICATIONS  
For Daily Alerts
 

Adelaide Test: ಅಶ್ವಿನ್-ಜಡೇಜಾ ಬದಲಿಗೆ ಏಕೈಕ ಸ್ಪಿನ್ನರ್ ಕಣಕ್ಕೆ!

ಭಾರೀ ಕತೂಹಲ ಮೂಡಿಸಿರುವ ಭಾರತ ಮತ್ತುಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಎರಡನೇ ಪಂದ್ಯವೂ ಡಿಸೆಂಬರ್ 6 ರಂದು ಶುರುವಾಗಲಿದೆ. ಅಡಿಲೇಡ್‌ನಲ್ಲಿ ನಡೆಯಲಿರುವ ಈ ಪಂದ್ಯವೂ ಹಗಲು-ರಾತ್ರಿ ಟೆಸ್ಟ್ ಪಂದ್ಯವಾಗಿದೆ. ಇದಕ್ಕಾಗಿ ಈ ಪಂದ್ಯದಲ್ಲಿ ಪಿಂಕ್ ಬಾಲ್ ಅನ್ನು ಬಳಸಲಾಗುತ್ತಿದೆ. ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸುವುದು ಭಾರತಕ್ಕೆ ಸುಲಭವಿಲ್ಲ. ಹಗಲು-ರಾತ್ರಿ ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಯಾ ಮೇಲುಗೈ ಸಾಧಸಿದೆ.

ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಆಡುವ ಹನ್ನೊಂದರ ಬಳಗದ ಆಯ್ಕೆಯೇ ದೊಡ್ಡ ಸವಾಲಾಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಏಕೈಕ ಸ್ಪಿನ್ನರ್‌ ಅನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಇದಕ್ಕೂ ಮುನ್ನ ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಸ್ಟಾರ್ ಸ್ಪಿನ್ನರ್‌ಗಳಾದ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಅವರನ್ನು ಟೀಮ್ ಇಂಡಿಯಾ ಆಡುವ ಹನ್ನೊಂದರ ಬಳಗದಿಂದ ಕೈ ಬಿಡಲಾಗಿತ್ತು. ಇವರ ಬದಲಿಗೆ ಯುವ ಆಟಗಾರರಾದ ಹರ್ಷಿತ್ ರಾಣಾ ಮತ್ತು ನಿತೀಶ್ ಕುಮಾರ್ ರೆಡ್ಡಿ ಅವರನ್ನು ಆಡಿಸಲಾಗಿತ್ತು. ಈಗ ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿಯೂ ಅಶ್ವಿನ್ ಮತ್ತು ಜಡೇಜಾ ಅವರಿಗೆ ಆಡುವ ಅವಕಾಶ ಸಿಗುವ ಸಾಧ್ಯತೆ ಕಡಿಮೆಯಿದೆ.

IND vs AUS Only One Spinner Likely to Play in Adelaide Test With Ashwin and Jadeja Being Replaced

ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಮತ್ತು ಜಡೇಜಾ ಏಕೈಕ ಸ್ಪಿನ್ನರ್ ಕಣಕ್ಕೀಳಿಯುವ ಸಾಧ್ಯತೆಯಿದೆ. ಜೊತೆಗೆ ನಿತೀಶ್ ಕುಮಾರ್ ರೆಡ್ಡಿ ಹಾಗೂ ಹರ್ಷಿತ್ ರಾಣಾ ಜೋಡಿಯನ್ನು ಮುಂದುವರೆಸುವ ಟೀಮ್ ಇಂಡಿಯಾ ಪ್ಲ್ಯಾನ್ ಮಾಡಿದೆ ಎಂದು ವರದಿಗಳು ಹೇಳಿವೆ. ಅಲ್ಲದೆ, ಟೀಮ್ ಇಂಡಿಯಾ ಆಡುವ ಹನ್ನೊಂದರ ಬಳಗದಲ್ಲಿ ಏಕೈಕ ಸ್ಪಿನ್ನರ್ ಆಗಿ ವಾಷಿಂಗ್ಟನ್ ಸುಂದರ್ ಅವರನ್ನು ಆಡಿಸಲಿ ಕೋಚ್ ಗೌತಮ್ ಗಂಭೀರ್ ಬಯಸಿದ್ದಾರೆ ಎನ್ನಲಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ್ಲೂ ಭಾರತ ಪರ ಏಕೈಕ ಸ್ಪಿನ್ನರ್ ಆಗಿ ವಾಷಿಂಗ್ಟನ್ ಸುಂದರ್ ಆಡಿದ್ದರು. ಪರ್ತ್ ಟೆಸ್ಟ್‌ ಪಂದ್ಯದ ಎರಡು ಇನ್ನಿಂಗ್ಸ್‌ಗಳಲ್ಲಿ 2 ವಿಕೆಟ್ ಪಡೆದಿದ್ದ ಸುಂದರ್ ಬ್ಯಾಟಿಂಗ್ ಮೂಲಕ 33 ರನ್‌ಗಳನ್ನು ಕಲೆ ಹಾಕಿದ್ದರು. ಇದಲ್ಲದೆ, ಇತ್ತೀಚೆಗೆ ಪ್ರೈಮ್ ಮಿನಿಸ್ಟರ್ಸ್​ ಇಲೆವೆನ್ ವಿರುದ್ಧದ ಅಭ್ಯಾಸ ಪಂದ್ಯದಲ್ಲೂ ಸುಂದರ್ 42 ರನ್‌​​ಗಳನ್ನು ಗಳಿಸಿದ್ದರು. ಹೀಗಾಗಿ ಟೀಮ್ ಇಂಡಿಯಾ ಆಡುವ ಹನ್ನೊಂದರ ಬಳಗದಲ್ಲಿ ವಾಷಿಂಗ್ಟನ್ ಸುಂದರ್ ಅವರನ್ನು ಮುಂದುವರೆಸಲು ಗೌತಮ್ ಗಂಭೀರ್ ನಿರ್ಧಾರಿಸಿದ್ದಾರೆ ಎಂದು ವರದಿಯಾಗಿದೆ.

ಅಡಿಲೇಡ್ ಟೆಸ್ಟ್ ಪಂದ್ಯಕ್ಕೆ ಸಂಭಾವ್ಯ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಶುಭಮನ್‌ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ , ನಿತೀಶ್‌ಕುಮಾರ್ ರೆಡ್ಡಿ , ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಜಸ್​​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

Story first published: Wednesday, December 4, 2024, 15:12 [IST]
Other articles published on Dec 4, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+