IND vs AUS: ಟೆಸ್ಟ್ ಕ್ರಿಕೆಟ್‌ನಲ್ಲಿ ಅನಿಲ್ ಕುಂಬ್ಳೆ ದಾಖಲೆ ಸರಿಗಟ್ಟಿದ ರವಿಚಂದ್ರನ್ ಅಶ್ವಿನ್

ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡವನ್ನು 91 ರನ್‌ಗಳಿಗೆ ಆಲೌಟ್ ಮಾಡುವ ಮೂಲಕ ಭಾರತ ತಂಡ ಇನ್ನಿಂಗ್ಸ್ ಹಾಗೂ 132 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದ್ದಲ್ಲದೆ, ನಾಲ್ಕು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ.
ನಾಗ್ಪುರ ಟೆಸ್ಟ್‌ನಲ್ಲಿ ಭಾರತದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ 31ನೇ ಬಾರಿಗೆ 5 ವಿಕೆಟ್ ಗೊಂಚಲು ಪಡೆದ ಹೆಗ್ಗಳಿಕೆಗೆ ಪಾತ್ರರಾದರು. ಕನ್ನಡಿಗ ಅನಿಲ್ ಕುಂಬ್ಳೆ 35 ಬಾರಿ 5 ವಿಕೆಟ್ ಗೊಂಚಲು ಪಡೆದಿದ್ದಾರೆ. ಗುರುವಾರವಷ್ಟೇ ಅತಿ ವೇಗವಾಗಿ 450 ಟೆಸ್ಟ್ ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ರವಿಚಂದ್ರನ್ ಅಶ್ವಿನ್ ಪಾತ್ರರಾಗಿದ್ದರು.
ರವಿಚಂದ್ರನ್ ಅಶ್ವಿನ್ ಕಳೆದ 10 ಟೆಸ್ಟ್ ಪಂದ್ಯಗಳಲ್ಲಿ ತಮ್ಮ ಮೊದಲ 5 ವಿಕೆಟ್ ಕಬಳಿಸುವ ಮೂಲಕ ತವರಿನಲ್ಲಿ ಅತಿ ಹೆಚ್ಚು ಅಂದರೆ, 25 ಬಾರಿ 5 ವಿಕೆಟ್ ಗೊಂಚಲು ಪಡೆದ ಮಾಜಿ ಲೆಗ್‌ಸ್ಪಿನ್ನರ್ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಸರಿಗಟ್ಟಿದರು.

ಆಸ್ಟ್ರೇಲಿಯಾ ತಂಡದ ಬ್ಯಾಟ್ಸ್‌ಮನ್‌ಗಳಾದ ಉಸ್ಮಾನ್ ಖವಾಜಾ, ಡೇವಿಡ್ ವಾರ್ನರ್, ಮ್ಯಾಥ್ಯೂ ರೆನ್ಶಾ, ಪೀಟರ್ ಹ್ಯಾಂಡ್ಸ್‌ಕಾಂಬ್ ಮತ್ತು ಅಲೆಕ್ಸ್ ಕ್ಯಾರಿ ಅವರ ವಿಕೆಟ್‌ಗಳನ್ನು ಅಶ್ವಿನ್ ಪಡೆದರು.
ಅನಿಲ್ ಕುಂಬ್ಳೆ 1990ರಿಂದ 2018 ರವರೆಗಿನ ಕ್ರಿಕೆಟ್ ವೃತ್ತಿಜೀವನದಲ್ಲಿ 25 ಬಾರಿ ಭಾರತದಲ್ಲಿ 5 ವಿಕೆಟ್ ಗಳಿಕೆ ಮಾಡಿದ್ದರೆ, ರವಿಚಂದ್ರನ್ ಅಶ್ವಿನ್ ಕೇವಲ 11 ವರ್ಷಗಳ ಟೆಸ್ಟ್ ಕ್ರಿಕೆಟ್ ವೃತ್ತಿಜೀವನದಲ್ಲಿ ಆ ದಾಖಲೆಯನ್ನು ಸರಿಗಟ್ಟಿದರು. ಅಶ್ವಿನ್ 2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಚೊಚ್ಚಲ ಪಂದ್ಯವನ್ನಾಡಿದ್ದರು.
ಇದೇ ವೇಳೆ ರವಿಚಂದ್ರನ್ ಅಶ್ವಿನ್ ಅವರು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಎರಡನೇ ಬೌಲರ್ ಎನಿಸಿಕೊಂಡರು.

ಶನಿವಾರದಂದು ಅವರು ತಮ್ಮ 4ನೇ ವಿಕೆಟ್ ಪಡೆದಾಗ ರವಿಚಂದ್ರನ್ ಅಶ್ವಿನ್ ಅವರು 97 ವಿಕೆಟ್‌ಗಳೊಂದಿಗೆ ನಾಥನ್ ಲಿಯಾನ್ (95 ವಿಕೆಟ್) ಮತ್ತು ಹರ್ಭಜನ್ ಸಿಂಗ್ (95 ವಿಕೆಟ್) ಅವರನ್ನು ಹಿಂದಿಕ್ಕಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟೆಸ್ಟ್‌ಗಳಲ್ಲಿ ಅತಿ ಹೆಚ್ಚು ವಿಕೆಟ್‌ಗಳ ಪಟ್ಟಿಯಲ್ಲಿ ಅನಿಲ್ ಕುಂಬ್ಳೆ (111 ವಿಕೆಟ್) ನಂತರದ ಸ್ಥಾನದಲ್ಲಿದ್ದಾರೆ.
ರವಿಚಂದ್ರನ್ ಅಶ್ವಿನ್ ಅವರು 35 ಬಾರಿ 5 ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಸರಿಗಟ್ಟಲು ಇನ್ನೂ ನಾಲ್ಕು ಬಾರಿ 5 ವಿಕೆಟ್ ಪಡೆಯಬೇಕಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications