IND vs AUS 2nd Test: ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ 5ನೇ ಭಾರತೀಯ ರವಿಚಂದ್ರನ್ ಅಶ್ವಿನ್

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಎರಡನೇ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಎರಡೂ ತಂಡಗಳ ಮೊದಲ ಇನ್ನಿಂಗ್ಸ್ ಮುಕ್ತಾಯಕ್ಕೆ ಪ್ರವಾಸಿ ತಂಡ 1 ರನ್ ಮುನ್ನಡೆ ಸಾಧಿಸಿತು.
ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 263 ರನ್‌ಗಳಿಗೆ ಆಲೌಟ್ ಆಗಿದ್ದರೆ, ಆತಿಥೇಯ ಭಾರತ ತಂಡ ಎರಡನೇ ದಿನದ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 262 ರನ್‌ಗಳಿಗೆ ಸರ್ವಪತನ ಕಂಡಿತು.
ಭಾರತದ ಪರ ಬ್ಯಾಟಿಂಗ್‌ನಲ್ಲಿ ಅಕ್ಷರ್ ಪಟೇಲ್ 74 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 44 ರನ್, ರೋಹಿತ್ ಶರ್ಮಾ 32 ರನ್, ರವಿಚಂದ್ರನ್ ಅಶ್ವಿನ್ 37 ರನ್ ಮತ್ತು ರವೀಂದ್ರ ಜಡೇಜಾ 26 ರನ್ ಗಳಿಸಿದರು. ರವಿಚಂದ್ರನ್ ಅಶ್ವಿನ್ ಮತ್ತು ಅಕ್ಷರ್ ಪಟೇಲ್ ಎಂಟನೇ ವಿಕೆಟ್‌ಗೆ 114 ರನ್ ಜೊತೆಯಾಟ ನೀಡಿ ಭಾರತದ ಹಿನ್ನಡೆ ಅಂತರವನ್ನು ತಗ್ಗಿಸಿದರು.

ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 5000 ರನ್ ಮತ್ತು 700 ವಿಕೆಟ್
ಭಾರತದ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 5000 ರನ್ ಮತ್ತು 700 ವಿಕೆಟ್‌ಗಳ ಗಳಿಸುವ ಮೂಲಕ ತಮ್ಮ ಸಾಧನೆಗಳ ಕಿರೀಟಕ್ಕೆ ಶನಿವಾರ ಮತ್ತೊಂದು ಗರಿಯನ್ನು ಸೇರಿಸಿದರು. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ತಮಿಳುನಾಡಿನ ರವಿಚಂದ್ರನ್ ಅಶ್ವಿನ್ ಈ ಸಾಧನೆ ಮಾಡಿದರು.
ರವಿಚಂದ್ರನ್ ಅಶ್ವಿನ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 5000 ರನ್ ಮತ್ತು 700 ವಿಕೆಟ್‌ಗಳ ದ್ವಿಸಾಧನೆಯನ್ನು ಪೂರೈಸಿದ ಐದನೇ ಭಾರತೀಯ ಕ್ರಿಕೆಟಿಗರೆನಿಸಿದರು. ವಿನೂ ಮಂಕಡ್, ಶ್ರೀನಿವಾಸ್ ವೆಂಕಟರಾಘವನ್, ಕಪಿಲ್ ದೇವ್ ಮತ್ತು ಅನಿಲ್ ಕುಂಬ್ಳೆ ಈ ಮೈಲುಗಲ್ಲನ್ನು ತಲುಪಿದ ಇತರ ನಾಲ್ವರು ಭಾರತದ ಕ್ರಿಕೆಟಿಗರಾಗಿದ್ದಾರೆ.

ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 5000 ರನ್ ಪೂರೈಸಿದ ರವಿಚಂದ್ರನ್ ಅಶ್ವಿನ್
ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಎರಡನೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾದ ಬ್ಯಾಟಿಂಗ್ ಇನ್ನಿಂಗ್ಸ್‌ನಲ್ಲಿ ರವಿಚಂದ್ರನ್ ಅಶ್ವಿನ್ 700 ಪ್ರಥಮ ದರ್ಜೆ ವಿಕೆಟ್ ಪಡೆದ ಸಾಧನೆ ಮಾಡಿದ್ದರು. ಇನ್ನು ಬ್ಯಾಟಿಂಗ್‌ನಲ್ಲಿ 37 ರನ್ ಗಳಿಸಿ ಔಟಾಗುವ ಮುನ್ನ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 5000 ರನ್ ಪೂರೈಸಿದ ಅಪರೂಪದ ದಾಖಲೆ ಮಾಡಿದರು.
ರವಿಚಂದ್ರನ್ ಅಶ್ವಿನ್ 2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ದೆಹಲಿಯಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಪಂದ್ಯದಲ್ಲಿ 81/3 ಮತ್ತು 47/6 ಅತ್ಯುತ್ತಮ ಬೌಲಿಂಗ್ ಪ್ರದರ್ಶನದಿಂದ ಭಾರತ ಐದು ವಿಕೆಟ್‌ಗಳಿಂದ ಜಯ ಗಳಿಸಿತ್ತು. ರವಿಚಂದ್ರನ್ ಅಶ್ವಿನ್ ಪಂದ್ಯಶ್ರೇಷ್ಠ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದರು.

ರವಿಚಂದ್ರನ್ ಅಶ್ವಿನ್ ಆಲ್‌ರೌಂಡರ್ ಶ್ರೇಯಾಂಕದಲ್ಲಿ 2ನೇ ಸ್ಥಾನ
ರವಿಚಂದ್ರನ್ ಅಶ್ವಿನ್ ಪ್ರಸ್ತುತ ಐಸಿಸಿ ಟೆಸ್ಟ್ ಬೌಲರ್‌ಗಳ ಶ್ರೇಯಾಂಕದಲ್ಲಿ 2ನೇ ಸ್ಥಾನ ಮತ್ತು ಆಲ್‌ರೌಂಡರ್ ಶ್ರೇಯಾಂಕದಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ ವಿಲ್ಫ್ರೆಡ್ ರೋಡ್ಸ್ ಪ್ರಥಮ ದರ್ಜೆ ಕ್ರಿಕೆಟ್‌ನ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿದ್ದಾರೆ. ಈ ವೇಗಿ ತಮ್ಮ 32 ವರ್ಷಗಳ ಕಾಲ ದೇಶೀಯ ಕ್ರಿಕೆಟ್ ವೃತ್ತಿಜೀವನದಲ್ಲಿ 4204 ವಿಕೆಟ್‌ಗಳನ್ನು ಪಡೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications