ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

IND vs AUS: ಬಾರ್ಡರ್-ಗವಾಸ್ಕರ್ ಟ್ರೋಫಿಗೂ ಮುನ್ನ ಫಿಟ್ನೆಸ್‌ಗಾಗಿ ರಣಜಿ ಆಡಲಿರುವ ರವೀಂದ್ರ ಜಡೇಜಾ

IND vs AUS: Ravindra Jadeja To Play Ranji Trophy For Fitness Ahead Of Border-Gavaskar Test Series

ಭಾರತದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಗೂ ಮುನ್ನ ರಣಜಿ ಟ್ರೋಫಿಯಲ್ಲಿ ಆಡಲು ಸಿದ್ಧರಾಗಿದ್ದಾರೆ.

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ, ಜನವರಿ 24ರಂದು ಪ್ರಾರಂಭವಾಗುವ ತಮಿಳುನಾಡು ವಿರುದ್ಧದ ಪ್ರಥಮ ದರ್ಜೆ ಪಂದ್ಯಾವಳಿಯಲ್ಲಿ ಸೌರಾಷ್ಟ್ರ ತಂಡದ ಕೊನೆಯ ಲೀಗ್ ಪಂದ್ಯದಲ್ಲಿ ಆಡಲಿದ್ದಾರೆ ಎಂದು ESPNcricinfo ವರದಿ ಮಾಡಿದೆ.

IND vs SL: 3ನೇ ಏಕದಿನ ಪಂದ್ಯಕ್ಕೂ ಮುನ್ನ ಪದ್ಮನಾಭಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾIND vs SL: 3ನೇ ಏಕದಿನ ಪಂದ್ಯಕ್ಕೂ ಮುನ್ನ ಪದ್ಮನಾಭಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ

ರವೀಂದ್ರ ಜಡೇಜಾ ಅವರು ಕಳೆದ ಸೆಪ್ಟೆಂಬರ್‌ನಲ್ಲಿ ಏಷ್ಯಾಕಪ್ ವೇಳೆ ಕಾಲಿಗೆ ಗಾಯ ಮಾಡಿಕೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರು ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ)ಯಲ್ಲಿ ತಮ್ಮ ತರಬೇತಿಯನ್ನು ಪೂರ್ಣಗೊಳಿಸುತ್ತಿದ್ದಾರೆ.

ಫೆಬ್ರವರಿ 9ರಂದು ನಾಗ್ಪುರದಲ್ಲಿ ಪ್ರಾರಂಭವಾಗುವ ನಾಲ್ಕು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲೆರಡು ಪಂದ್ಯಗಳಿಗಾಗಿ ಭಾರತ ತಂಡದ ಆಯ್ಕೆ ಸಮಿತಿ 17 ಆಟಗಾರರನ್ನು ಹೆಸರಿಸಿದೆ.

ಫೆಬ್ರವರಿ 9ರಿಂದ ಮೊದಲ ಟೆಸ್ಟ್ ಪಂದ್ಯ

ಫೆಬ್ರವರಿ 9ರಿಂದ ಮೊದಲ ಟೆಸ್ಟ್ ಪಂದ್ಯ

ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಫೆಬ್ರವರಿ 9ರಿಂದ ಮೊದಲ ಪಂದ್ಯ ನಡೆಯಲಿದ್ದರೆ, ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಫೆಬ್ರವರಿ 17ರಿಂದ ಎರಡನೇ ಟೆಸ್ಟ್ ಪಂದ್ಯ ನಡೆಯಲಿದೆ. ಅಂತಿಮ ಎರಡು ಟೆಸ್ಟ್ ಪಂದ್ಯಗಳು ಕ್ರಮವಾಗಿ ಧರ್ಮಶಾಲಾ ಮತ್ತು ಅಹಮದಾಬಾದ್‌ನಲ್ಲಿ ನಡೆಯಲಿವೆ.

ಶುಕ್ರವಾರದಂದು ಬಿಸಿಸಿಐ ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಟೆಸ್ಟ್‌ಗಳಿಗೆ ಭಾರತೀಯ ತಂಡವನ್ನು ಆಯ್ಕೆ ಮಾಡಿತು. ಈ ವೇಳೆ ಸುದೀರ್ಘ ವಿಶ್ರಾಂತಿಯ ಬಳಿಕ ರವೀಂದ್ರ ಜಡೇಜಾ ಅವರನ್ನು ತಂಡದಲ್ಲಿ ಹೆಸರಿಸಲಾಗಿದೆ.

ಆದರೆ, ಜಡೇಜಾ ಅವರ ಆಯ್ಕೆಯು ಫಿಟ್‌ನೆಸ್ ಮೇಲೆ ನಿಂತಿದ್ದು, ಟೆಸ್ಟ್ ಪಂದ್ಯಗಳಿಗೆ ಫಿಟ್ ಎಂದು ಎನ್‌ಸಿಎ ಘೋಷಿಸಿದರೆ ಮಾತ್ರ, ರವೀಂದ್ರ ಜಡೇಜಾಗೆ ಟೆಸ್ಟ್ ಆಡಲು ಅವಕಾಶ ನೀಡಲಾಗುವುದು ಎಂದು ಬಿಸಿಸಿಐ ತಿಳಿಸಿದೆ.

ಮಧ್ಯಮ ಕ್ರಮಾಂಕದಲ್ಲಿ ಭಾರತ ತಂಡಕ್ಕೆ ಸಮತೋಲನ

ಮಧ್ಯಮ ಕ್ರಮಾಂಕದಲ್ಲಿ ಭಾರತ ತಂಡಕ್ಕೆ ಸಮತೋಲನ

ಭಾರತದ ಟೆಸ್ಟ್ ಮತ್ತು ಸೀಮಿತ ಓವರ್‌ಗಳ ಸ್ವರೂಪಗಳಲ್ಲಿ 5 ಅಥವಾ 6ನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ರವೀಂದ್ರ ಜಡೇಜಾ, ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ಅಗ್ರ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಜೊತೆಗೆ ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಸಮತೋಲನ ಒದಗಿಸಲಿದ್ದಾರೆ.

ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಸ್ಥಾನವನ್ನು ಪಡೆಯಲು ಎದುರು ನೋಡುತ್ತಿರುವ ಕಾರಣ, ಈ ಸರಣಿಯು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳಿಗೆ ಮಹತ್ವದ್ದಾಗಿದೆ.

ಇನ್ನು, ರಣಜಿ ಟ್ರೋಫಿಯಲ್ಲಿ ಸೌರಾಷ್ಟ್ರ ತಂಡ ಆಡಿದ ಐದು ಪಂದ್ಯಗಳಿಂದ ಮೂರು ಸಂಪೂರ್ಣ ಗೆಲುವಿನಿಂದ 26 ಅಂಕಗಳೊಂದಿಗೆ ಬಿ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ.

ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಟೆಸ್ಟ್‌ಗಳಿಗೆ ಭಾರತ ಟೆಸ್ಟ್ ತಂಡ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಎರಡು ಟೆಸ್ಟ್‌ಗಳಿಗೆ ಭಾರತ ಟೆಸ್ಟ್ ತಂಡ

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್, ಸೂರ್ಯಕುಮಾರ್ ಯಾದವ್.

Story first published: Sunday, January 15, 2023, 11:57 [IST]
Other articles published on Jan 15, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X