IND vs AUS 2nd ODI; ರೋಹಿತ್ ಶರ್ಮಾ ಕಂ-ಬ್ಯಾಕ್; ಸಂಭಾವ್ಯ ಆಡುವ 11ರ ಬಳಗ, ಟಿವಿ, ಲೈವ್ ಸ್ಟ್ರೀಮ್ ವಿವರ

ಭಾನುವಾರ, ಮಾರ್ಚ್ 19ರಂದು ವಿಶಾಖಪಟ್ಟಣದಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಯ 2ನೇ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಗೆದ್ದು, ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಸರಣಿ ವಶಪಡಿಸಿಕೊಳ್ಳುವ ಗುರಿಯನ್ನು ಭಾರತ ತಂಡ ಹೊಂದಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್‌ಗಳ ನಿರಾಯಾಸ ಜಯದೊಂದಿಗೆ ಭಾರತ ತಂಡ ತಮ್ಮ ಏಕದಿನ ಸರಣಿ ಅಭಿಯಾನ ಆರಂಭಿಸಿತು. ಮೂರು ಪಂದ್ಯಗಳ ಸರಣಿಯಲ್ಲಿ ಆತಿಥೇಯ ತಂಡ ಈಗಾಗಲೇ 1-0 ಅಂತರದ ಮುನ್ನಡೆ ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ಭಾರತ ತಂಡದ ಅದ್ಭುತ ಬೌಲಿಂಗ್ ಪ್ರದರ್ಶನದ ಎದುರು ಮಂಕಾಗಿ ಕೇವಲ 188 ರನ್‌ಗಳಿಗೆ ಆಲೌಟ್ ಆಯಿತು.
ಭಾರತ ಪರ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ತಲಾ 3 ವಿಕೆಟ್ ಕಬಳಿಸಿದರೆ, ಆಲ್‌ರೌಂಡರ್ ರವೀಂದ್ರ ಜಡೇಜಾ 2 ವಿಕೆಟ್ ಪಡೆದು ಮಿಂಚಿದರು.

189 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ತಂಡದ ಅಗ್ರ ಕಮಾಂಕದ ಬ್ಯಾಟಿಂಗ್ ತೀರಾ ಕಳಪೆಯಾಗಿತ್ತು. 29 ರನ್‌ಗಳಾಗುವಷ್ಟರಲ್ಲಿ ಪ್ರಮುಖ 4 ವಿಕೆಟ್‌ಗಳು ಉರುಳಿದ್ದವು. ಬಳಿಕ ಕೆಎಲ್ ರಾಹುಲ್ ಅಜೇಯ 75 ರನ್ ಮತ್ತು ರವೀಂದ್ರ ಜಡೇಜಾ ಅಜೇಯ 45 ರನ್‌ಗಳನ್ನು ಬಾರಿಸಿದ್ದರಿಂದ ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತ ತಂಡ ಗೆಲುವು ಸಾಧಿಸಿತು.
ಇನ್ನು ಭಾರತ ತಂಡಕ್ಕೆ ಖುಷಿ ಸುದ್ದಿಯೆಂದರೆ, ತಮ್ಮ ಭಾವ ಕುನಾಲ್ ಸಜ್ದೇಹ್ ಅವರ ಮದುವೆಗಾಗಿ ಮೊದಲ ಏಕದಿನ ಪಂದ್ಯದಿಂದ ವಿಶ್ರಾಂತಿ ಪಡೆದಿದ್ದ ಖಾಯಂ ನಾಯಕ ರೋಹಿತ್ ಶರ್ಮಾ ಅವರು 2 ಮತ್ತು 3ನೇ ಪಂದ್ಯಗಳಿಗಾಗಿ ಮರಳಲಿದ್ದಾರೆ. ಹೀಗಾಗಿ ಭಾರತ ತಂಡದ ಅಗ್ರ ಕ್ರಮಾಂಕ ಬಲಿಷ್ಠಗೊಳ್ಳಲಿದೆ.
ನಾಯಕ ರೋಹಿತ್ ಶರ್ಮಾ ಪುನರಾಗಮನ ಮಾಡಿರುವುದರಿಂದ ಮತ್ತೊಬ್ಬ ಆರಂಭಿಕ ಬ್ಯಾಟರ್ ಇಶಾನ್ ಕಿಶನ್ ಎರಡನೇ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಉಳಿದಂತೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ್ಯತೆ ಇಲ್ಲ.
ಇನ್ನು ಪ್ರವಾಸಿ ಆಸ್ಟ್ರೇಲಿಯಾ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಫಿಟ್ ಆಗಿದ್ದು, 2ನೇ ಏಕದಿನ ಪಂದ್ಯಕ್ಕೆ ಮರಳುವ ನಿರೀಕ್ಷೆ ಇದೆ. ಮೊದಲ ಪಂದ್ಯದಲ್ಲಿ ಮಿಚೆಲ್ ಮಾರ್ಷ್ ಮಾತ್ರ 81 ರನ್‌ಗಳನ್ನು ಬಾರಿಸಿ ಪ್ರವಾಸಿ ತಂಡದ ಪರ ಅದ್ಭುತ ಪ್ರದರ್ಶನ ನೀಡಿದ್ದರು.

ಇದೀಗ ಡೇವಿಡ್ ವಾರ್ನರ್ ಎರಡನೇ ಏಕದಿನ ಪಂದ್ಯದಲ್ಲಿ ಆಡಿದರೆ, ಅಗ್ರ ಕ್ರಮಾಂಕದಲ್ಲಿ ಬಲ ತಂದುಕೊಡಲಿದೆ. ಅಲ್ಲದೇ, ಈ ಪಂದ್ಯವು ಸ್ಟೀವ್ ಸ್ಮಿತ್ ನಾಯಕತ್ವದ ಆಸ್ಟ್ರೇಲಿಯಾ ತಂಡಕ್ಕೆ ಮಾಡು ಇಲ್ಲವೇ ಮಡಿಯಂತಾಗಿದ್ದು, ಸರಣಿ ಉಳಿಸಿಕೊಳ್ಳಬೇಕಾದರೆ, ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
ಭಾರತ vs ಆಸ್ಟ್ರೇಲಿಯ 2ನೇ ಏಕದಿನ ಪಂದ್ಯದ ವಿವರ
ಸ್ಥಳ ಮತ್ತು ದಿನಾಂಕ: ಭಾರತ vs ಆಸ್ಟ್ರೇಲಿಯ 2ನೇ ಏಕದಿನ ಪಂದ್ಯವು ಭಾನುವಾರ, ಮಾರ್ಚ್ 19ರಂದು ವಿಶಾಖಪಟ್ಟಣದ ಎಸಿಎ ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಪಂದ್ಯದ ಸಮಯ: ಭಾರತ vs ಆಸ್ಟ್ರೇಲಿಯ 2ನೇ ಏಕದಿನ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ಆರಂಭಗೊಳ್ಳಲಿದೆ. ಟಾಸ್ 1 ಗಂಟೆಗೆ ನಡೆಯಲಿದೆ.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ: ಭಾರತ vs ಆಸ್ಟ್ರೇಲಿಯ 2ನೇ ಏಕದಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಡಿಸ್ನಿ+ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಬಹುದು.
NZ vs SL: ನ್ಯೂಜಿಲೆಂಡ್ ವಿರುದ್ಧದ ಏಕದಿನ, ಟಿ20 ಸರಣಿಗೆ 2 ಪ್ರತ್ಯೇಕ ಶ್ರೀಲಂಕಾ ತಂಡ ಪ್ರಕಟ
ಭಾರತ vs ಆಸ್ಟ್ರೇಲಿಯ 2ನೇ ಏಕದಿನ ಪಂದ್ಯದ ಸಂಭಾವ್ಯ ಆಡುವ 11ರ ಬಳಗ
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಕುಲದೀಪ್ ಯಾದವ್.
ಆಸ್ಟ್ರೇಲಿಯಾ ತಂಡ: ಡೇವಿಡ್ ವಾರ್ನರ್/ಮಾರ್ನಸ್ ಲ್ಯಾಬುಶ್ಚಾಗ್ನೆ, ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್ (ನಾಯಕ), ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಸೀನ್ ಅಬಾಟ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications